ಕೇಂದ್ರದಿಂದ ಪತ್ರ ಬಾರದೇ ಇದ್ದರೆ ಮೆಟ್ರೋ ದರ ಏರಿಕೆ ಫಿಕ್ಸ್ -ಕಹಳೆ ನ್ಯೂಸ್
ಬೆಂಗಳೂರು: ನಮ್ಮ ಮೆಟ್ರೋ ದರ ನಾಳೆ ಏರಿಕೆಯಾಗುತ್ತಾ? ಅಥವಾ ಯಥಾಸ್ಥಿತಿಯಲ್ಲಿ ಮುಂದುವರೆಯುತ್ತಾ ಎಂಬ ಪ್ರಶ್ನೆಗೆ ಇಲ್ಲಿಯವರೆಗೆ ಅಧಿಕೃತ ಉತ್ತರ ಸಿಕ್ಕಿಲ್ಲ. ಶನಿವಾರ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ, ಮೆಟ್ರೋ ಪ್ರಯಾಣ ದರ ಏರಿಕೆಗೆ ಕೇಂದ್ರ ಸರ್ಕಾರ ತಾತ್ಕಾಲಿಕವಾಗಿ ತಡೆ ನೀಡಿದೆ. ಸೋಮವಾರದಿಂದ ದರ ಏರಿಕೆ ಇರುವುದಿಲ್ಲ. ಕೇಂದ್ರ ನಗರ ವ್ಯವಹಾರಗಳ ಸಚಿವ ಮನೋಹರ ಲಾಲ್ ಖಟ್ಟರ್ ಅವರು ಈ ಸೂಚನೆ ನೀಡಿದ್ದಾರೆ ಎಂದು ಹೇಳಿದ್ದರು. ಕೇಂದ್ರ...







