Thursday, March 12, 2026

ರಾಜ್ಯ

ಬೆಂಗಳೂರುರಾಜ್ಯವಾಣಿಜ್ಯಸುದ್ದಿ

ವಾಣಿಜ್ಯ LPG ಸಿಲಿಂಡರ್ ದರದಲ್ಲಿ ಇಳಿಕೆ! ಮನೆ ಗ್ಯಾಸ್ ಬೆಲೆ ಎಷ್ಟಿದೆ ಗೊತ್ತಾ..? – ಕಹಳೆ ನ್ಯೂಸ್

ಡಿಸೆಂಬರ್ ತಿಂಗಳು ಆರಂಭವಾಗುತ್ತಿದ್ದಂತೆಯೇ ತೈಲ ಮಾರಾಟ ಕಂಪನಿಗಳು ಸಾರ್ವಜನಿಕರಿಗೆ ಹೊಸ ದರಗಳನ್ನು ಪ್ರಕಟಿಸಿದೆ. ಈ ಬಾರಿ ಗೃಹಬಳಕೆ ಸಿಲಿಂಡರ್‌ಗೆ ಬದಲಾವಣೆ ಮಾಡದೇ, ಕೇವಲ ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ದರವನ್ನು ಮಾತ್ರ ಕಡಿತ ಮಾಡಲಾಗಿದೆ. ಹೊಸ ದರಗಳು ಡಿಸೆಂಬರ್ 1ರಿಂದ ಜಾರಿಯಲ್ಲಿವೆ. ವಾಣಿಜ್ಯ ಗ್ಯಾಸ್ ಸಿಲಿಂಡರ್‌ಗಳ ದರದಲ್ಲಿ ರೂ.10 ಇಳಿಕೆ: ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು, ಬೇಕರಿಗಳು ಮತ್ತು ಸಣ್ಣ ವ್ಯಾಪಾರಸ್ಥರು ಬಳಸುವ 19 ಕೆ.ಜಿ. ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯಲ್ಲಿ ರೂ.10...
ದೆಹಲಿರಾಜ್ಯರಾಷ್ಟ್ರೀಯಸುದ್ದಿ

ತಂಬಾಕಿನ ಮೇಲೆ ಅಬಕಾರಿ ಸುಂಕ ವಿಧಿಸುವ 2 ಮಸೂದೆಗಳನ್ನು ಲೋಕಸಭೆಯಲ್ಲಿ ಮಂಡಿಸಿದ ನಿರ್ಮಲಾ ಸೀತಾರಾಮನ್ -ಕಹಳೆ ನ್ಯೂಸ್

ನವದೆಹಲಿ: ತಂಬಾಕು ಮತ್ತು ತಂಬಾಕು ಉತ್ಪನ್ನಗಳ ಮೇಲೆ ಅಬಕಾರಿ ಸುಂಕವನ್ನು ವಿಧಿಸಲು ಮತ್ತು ಪಾನ್ ಮಸಾಲಾ ತಯಾರಿಕೆಯ ಮೇಲೆ ಹೊಸ ಸೆಸ್ ವಿಧಿಸುವ ಎರಡು ಮಸೂದೆಗಳನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೋಮವಾರ ಲೋಕಸಭೆಯಲ್ಲಿ ಮಂಡಿಸಿದರು. ಕೇಂದ್ರ ಅಬಕಾರಿ (ತಿದ್ದುಪಡಿ) ಮಸೂದೆ, 2025, ಪ್ರಸ್ತುತ ಸಿಗರೇಟ್, ಜಗಿಯುವ ತಂಬಾಕು, ಸಿಗಾರ್, ಹುಕ್ಕಾಗಳು, ಜರ್ದಾ ಮತ್ತು ಪರಿಮಳಯುಕ್ತ ತಂಬಾಕುಗಳಂತಹ ಎಲ್ಲಾ ತಂಬಾಕು ಉತ್ಪನ್ನಗಳ ಮೇಲೆ ವಿಧಿಸಲಾಗುತ್ತಿರುವ ಜಿಎಸ್ಟಿ ಪರಿಹಾರ ಸೆಸ್ ಅನ್ನು...
ಬೆಂಗಳೂರುರಾಜ್ಯವಾಣಿಜ್ಯಸುದ್ದಿ

ಜನಸಾಮಾನ್ಯರಿಗೆ ಬಿಗ್ ಶಾಕ್ : ಮಾರುಕಟ್ಟೆಯಲ್ಲಿ ಸೊಪ್ಪು, ತರಕಾರಿಗಳ ಮೇಲೆ ಬೆಲೆ ಭಾರಿ ಏರಿಕೆ – ಕಹಳೆ ನ್ಯೂಸ್

ಬೆಂಗಳೂರು: ಮೊದಲೇ ಬೆಲೆ ಏರಿಕೆಯಿಂದ ತತ್ತರಿಸಿದ ಜನಸಾಮಾನ್ಯರಿಗೆ ಗಾಯದ ಮೇಲೆ ಬರೆ ಎಳೆದಂತೆ ತರಕಾರಿ ದರ ಕೂಡ ಏರಿಕೆಯಾಗಿದೆ. ಮಾರುಕಟ್ಟೆಯಲ್ಲಿ ಸೊಪ್ಪು, ತರಕಾರಿಗಳ ತದ ತೀವ್ರ ಏರಿಕೆ ಆಗುತ್ತಿದ್ದು, ಗ್ರಾಹಕರ ಜೇಬಿಗೆ ಕತ್ತರಿ ಬೀಳುತ್ತಿದೆ. ಮುಂಗಾರಿನಲ್ಲಿ ತರಕಾರಿ ಬೆಳೆ ಹೆಚ್ಚಾಗಿದ್ದು, ದರ ಸಾಮಾನ್ಯವಾಗಿತ್ತು. ಈಗ ಮುಂಗಾರು ಮುಕ್ತಾಯವಾಗಿದ್ದು, ಹಿಂಗಾರು ಮಳೆಯ ವಿಳಂಬದಿಂದಾಗಿ ಕಡಿಮೆ ಇಳುವರಿ ಹಾಗೂ ಬೆಳೆಗಳಿಗೆ ರೋಗ ಕಾರಣ ಬೇಡಿಕೆಗೆ ತಕ್ಕಂತೆ ಮಾರುಕಟ್ಟೆಗಳಿಗೆ ತರಕಾರಿ ಪೂರೈಕೆಯಾಗದ ಕಾರಣ ಬೆಲೆ...
ದೆಹಲಿಬೆಂಗಳೂರುರಾಜಕೀಯರಾಜ್ಯಸುದ್ದಿ

ಸಂಸತ್ತಿನ ಚಳಿಗಾಲದ ಅಧಿವೇಶನ ಇಂದಿನಿಂದ ಆರಂಭ: ಮಾಧ್ಯಮಗಳಿಗೆ ಮೋದಿ ಮಾಹಿತಿ – ಕಹಳೆ ನ್ಯೂಸ್

ನವದೆಹಲಿ : ಸಂಸತ್ತಿನ ಚಳಿಗಾಲದ ಅಧಿವೇಶನ ಇಂದು (ಸೋಮವಾರ) ಆರಂಭವಾಗಲಿದೆ. ಈ ಅಧಿವೇಶನಕ್ಕೆ ಆಡಳಿತ ಮತ್ತು ವಿರೋಧ ಪಕ್ಷಗಳು ತಮ್ಮದೇ ಆದ ರೀತಿಯಲ್ಲಿ ತಯಾರಿ ನಡೆಸಿದ್ದು, ವಿಪಕ್ಷಗಳು ಮತದಾರರ ಪಟ್ಟಿ ಪರಿಷ್ಕರಣೆಯನ್ನು ತಮ್ಮ ಪ್ರಮುಖ ಅಸ್ತ್ರವಾಗಿಸಿಕೊಂಡಿದ್ದರೆ, ಆಡಳಿತ ಪಕ್ಷವು ನ್ಯಾಷನಲ್‌ ಹೆರಾಲ್ಡ್‌ ಪ್ರಕರಣವನ್ನು ಬಳಸಲಿದೆ ಎಂದು ನೀರಿಕ್ಷಿಸಲಾಗಿದೆ. ಡಿಸೆಂಬರ್ 1 ರಂದು (ಸೋಮವಾರ) ಬೆಳಿಗ್ಗೆ 10:00 ಗಂಟೆಗೆ ಹದಿನೆಂಟನೇ ಲೋಕಸಭೆಯ ಅಧಿವೇಶನ ಆರಂಭಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು...
ಬೆಂಗಳೂರುರಾಜ್ಯಸುದ್ದಿ

ಬೆಂಗಳೂರು-ಚೈನ್ನೈ ಹೆದ್ದಾರಿಯಲ್ಲಿ ಲಾರಿ ಹಾಗೂ ಕಾರುಗಳ ನಡುವೆ ಸರಣಿ ಅಪಘಾತ : ಐವರ ಸ್ಥಿತಿ ಗಂಭೀರ! – ಕಹಳೆ ನ್ಯೂಸ್

ಬೆಂಗಳೂರು : ಬೆಂಗಳೂರು ಚೆನ್ನೈ ಹೆದ್ದಾರಿಯಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ಲಾರಿ ಹಾಗೂ ಕಾರುಗಳ ನಡುವೆ ಸರಣಿ ಅಪಘಾತ ಸಂಭವಿಸಿ ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತಮಿಳುನಾಡಿನ ಪೆರಾಂಡಪಲ್ಲಿಯಲ್ಲಿ ಈ ಒಂದು ಅಪಘಾತ ಸಂಭವಿಸಿದೆ. ಡಿಕ್ಕಿ ಹೊಡೆದಿರುವ ರಭಸಕ್ಕೆ ಕಾರುಗಳು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ ಅಪಘಾತದಲ್ಲಿ ಗಾಯಗೊಂಡ ಐವರನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇದೆ ಅಪಘಾತದಲ್ಲಿ ಟ್ರಾಫಿಕ್ ಜಾಮ್ ಉಂಟಾಗಿ ಸವಾರರು ಪರದಾಡುತ್ತಿದ್ದಾರೆ ಮೂಲಕ ಕಾರುಗಳನ್ನು ತೆರವು...
ದೆಹಲಿರಾಜ್ಯರಾಷ್ಟ್ರೀಯಸುದ್ದಿ

ನವೆಂಬರ್ ತಿಂಗಳು ಭಾರತಕ್ಕೆ ತುಂಬಾ ವಿಶೇಷ, ಹಲವು ಮಹತ್ವದ ಸಾಧನೆಗಳು-ಪ್ರಧಾನಿ ಮೋದಿ – ಕಹಳೆ ನ್ಯೂಸ್

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ತಮ್ಮ ಮಾಸಿಕ 'ಮನ್ ಕಿ ಬಾತ್' ರೇಡಿಯೋ ಭಾಷಣದ 128 ನೇ ಆವೃತ್ತಿಯಲ್ಲಿ, ನವೆಂಬರ್‌ ತಿಂಗಳಲ್ಲಿ ದೇಶಾದ್ಯಂತ ದಾಖಲಾದ ಹಲವಾರು ಪ್ರಮುಖ ಬೆಳವಣಿಗೆಗಳು ಮತ್ತು ಸಾಧನೆಗಳನ್ನು ಎತ್ತಿ ತೋರಿಸಿದರು. ಸಂವಿಧಾನ ದಿನದಂದು ಸಂಸತ್ತಿನ ಸೆಂಟ್ರಲ್ ಹಾಲ್‌ನಲ್ಲಿ ಕಾರ್ಯಕ್ರಮ ಮತ್ತು ವಂದೇ ಮಾತರಂನ 150 ನೇ ವಾರ್ಷಿಕೋತ್ಸವವನ್ನು ಗುರುತಿಸುವ ರಾಷ್ಟ್ರವ್ಯಾಪಿ ಆಚರಣೆಗಳ ಉದ್ಘಾಟನೆ ಸೇರಿದಂತೆ ನವೆಂಬರ್‌ನಲ್ಲಿ ಪ್ರಮುಖ ರಾಷ್ಟ್ರೀಯ ಕಾರ್ಯಕ್ರಮಗಳು ನಡೆದಿವೆ...
ಬೆಂಗಳೂರುರಾಜ್ಯಸುದ್ದಿ

ಜೈಲಲ್ಲಿ ಖೈದಿಗಳಿಗೆ ರಾಜಾತಿಥ್ಯಕ್ಕೆ ಕಾಂಗ್ರೆಸ್‌‍ ಸರ್ಕಾರದ ತುಷ್ಟೀಕರಣವೇ ನೇರ ಕಾರಣ : ಆರ್‌.ಅಶೋಕ್‌ -ಕಹಳೆ ನ್ಯೂಸ್

ಬೆಂಗಳೂರು : ಜೈಲಿನಲ್ಲಿರುವ ಖೈದಿಗಳಿಗೆ ಮೊಬೈಲ್‌ ಸೇರಿದಂತೆ ರಾಜಾತಿಥ್ಯ ಸಿಗುತ್ತಿರುವುದಕ್ಕೆ ಕಾಂಗ್ರೆಸ್‌‍ ಸರ್ಕಾರದ ತುಷ್ಟೀಕರಣವೇ ನೇರ ಕಾರಣ ಎಂಬುದರಲ್ಲಿ ಅನುಮಾನವೇ ಇಲ್ಲ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌ ಗಂಭೀರ ಆರೋಪ ಮಾಡಿದ್ದಾರೆ. ಎಕ್‌್ಸನಲ್ಲಿ ಪೋಸ್ಟ್‌ ಮಾಡಿರುವ ಅವರು, ವೋಟ್‌ ಬ್ಯಾಂಕ್‌ ರಾಜಕಾರಣಕ್ಕಾಗಿ ದೇಶದ ಸುರಕ್ಷತೆ, ಭದ್ರತೆ ಬಗ್ಗೆ ರಾಜಿ ಮಾಡಿಕೊಳ್ಳುವಷ್ಟು ಕೆಳಮಟ್ಟಕ್ಕೆ ಇಳಿಯುವ ಕಾಂಗ್ರೆಸ್‌‍ ಪಕ್ಷದ ದೇಶದ್ರೋಹಿ ಮನಸ್ಥಿತಿ ನಿಜಕ್ಕೂ ಅಸಹ್ಯಕರ ಮತ್ತು ಅಕ್ಷಮ್ಯ.ಮುಂದಿನ ದಿನಗಳಲ್ಲಿ ಕರ್ನಾಟಕದ ಜನತೆ...
ಬೆಂಗಳೂರುರಾಜ್ಯಸುದ್ದಿ

ಬೆಂಗಳೂರಿನಲ್ಲಿ ಬೆಂಕಿ ಅವಘಡ : ಹೊತ್ತಿ ಉರಿದ ಪಾಸ್ಟಿಕ್ ಗೋಡೌನ್ -ಕಹಳೆ ನ್ಯೂಸ್

ಬೆಂಗಳೂರು : ಪ್ಲಾಸ್ಟಿಕ್ ಗೋಡೌನ್ ನಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿದ್ದು, ಇಡೀ ಗೋಡೌನ್ ಧಗಧಗನೇ ಹೊತ್ತಿ ಉರಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನಡೆದಿದೆ. ಇಲ್ಲಿನ ಹೊಸಕೋಟೆ ತಾಲೂಕಿನ ಕೈಗಾರಿಕಾ ಪ್ರದೇಶದಲ್ಲಿ ಈ ದುರಂತ ಸಂಭವಿಸಿದೆ. ಇಂದು ಮುಂಜಾನೆ ೪ ಗಂಟೆ ವೇಳೆಗೆ ಬೆಂಕಿ ಕಾಣಿಸಿಕೊಂಡಿದ್ದು, ಇಡೀ ಗೋಡೌನ್ ಹೊತ್ತಿ ಉರಿದಿದೆ. ಬೆಂಕಿ ಅವಘಡಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ವಿಷಯ ತಿಳಿದು ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಿದ್ದಾರೆ....
1 32 33 34 35 36 272
Page 34 of 272