ಬೆಳೆ ಪರಿಹಾರ: ಸಿದ್ದರಾಮಯ್ಯನವರಿಗೆ ಪತ್ರ ಬರೆದ ಬಸವರಾಜ ಬೊಮ್ಮಾಯಿ – ಕಹಳೆ ನ್ಯೂಸ್
ಬೆಂಗಳೂರು : ಕಳೆದ ಎರಡು ವರ್ಷದಿಂದ ವಿಪರೀತ ಮಳೆಯಿಂದ ಹಲವಾರು ಬೆಳೆ ನಾಶವಾಗಿದ್ದು, ಬೆಳೆ ನಷ್ಟ ಸರ್ವೆಯಲ್ಲಿ ಲೋಪವಾಗಿದ್ದು, ಕೂಡಲೇ ರಾಜ್ಯಾದ್ಯಂತ ಇದನ್ನು ಸರಿಪಡಿಸಿ ನಷ್ಟ ಆದ ಎಲ್ಲ ರೈತರಿಗೆ ಬೆಳೆ ಪರಿಹಾರ ಕೊಡಬೇಕು. ಮತ್ತು ಇದಕ್ಕೆ ಕೂಡಲೇ ಕ್ರಮ ಜರುಗಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅವರು ಆಗ್ರಹಿಸಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಅವರು, ಕಳೆದ ಎರಡು ವರ್ಷ...







