K-SET ಪರೀಕ್ಷೆಯ ವೇಳೆ ಕೆಇಎ ಮತ್ತೊಂದು ಎಡವಟ್ಟು: ಮಹಿಳಾ ಅಭ್ಯರ್ಥಿಗಳ ಕಿವಿಯೋಲೆ, ಮೂಗುತಿ ಬಿಚ್ಚಿದ ಸಿಬ್ಬಂದಿ – ಕಹಳೆ ನ್ಯೂಸ್
ಬಳ್ಳಾರಿ: ರಾಜ್ಯಾಧ್ಯಂತ ಇದು ಕೆ-ಸೆಟ್ ಪರೀಕ್ಷೆ ನಡೆಯಿತು. ಈ ಪರೀಕ್ಷೆಯ ಸಂದರ್ಭದಲ್ಲಿ ಕೆಇಎ ಮತ್ತೊಂದು ಎಡವಟ್ಟು ಮಾಡಿದೆ. ಪರೀಕ್ಷೆಗೆ ಹಾಜರಾದಂತ ಮಹಿಳಾ ಅಭ್ಯರ್ಥಿಗಳ ಕಿವಿಯೋಲೆ, ಮೂಗುತಿಯನ್ನೇ ಸಿಬ್ಬಂದಿಗಳು ಬಿಚ್ಚಿಸಿರುವುದಾಗಿ ತಿಳಿದು ಬಂದಿದೆ. ಇಂದು ರಾಜ್ಯದ 11 ಜಿಲ್ಲೆಗಳ 316 ಕೇಂದ್ರಗಳಲ್ಲಿ ಕೆ-ಸೆಟ್ ಪರೀಕ್ಷೆಯನ್ನು ಅಭ್ಯರ್ಥಿಗಳು ಬರೆದಿದ್ದಾರೆ. ಒಟ್ಟು 33 ವಿಷಯಗಳಿಗೆ ನಡೆಯದಂತ ಕೆ-ಸೆಟ್ ಪರೀಕ್ಷೆಗೆ 1.36 ಲಕ್ಷ ಮಂದಿ ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದರು. ಬೆಂಗಳೂರು, ಬಳ್ಳಾರಿ, ಬೆಳಗಾವಿ, ದಾವಣಗೆರೆ, ಧಾರವಾಡ, ಕಲಬುರ್ಗಿ,...







