3 ದಿನದ ಹಿಂದೆ ನಾಪತ್ತೆಯಾಗಿದ್ದ ಬಾಲಕ ಜಲಮಂಡಳಿಯ ಸಂಪ್‌ನಲ್ಲಿ ಶವವಾಗಿ ಪತ್ತೆ – ಕಹಳೆ ನ್ಯೂಸ್
ಬೆಂಗಳೂರು: ಮೂರು ದಿನಗಳ ಹಿಂದೆ ಕಾಣೆಯಾಗಿದ್ದ ಬಾಲಕ ಬೆಂಗಳೂರು ಜಲಮಂಡಳಿ ಪೈಪ್‌ಲೈನ್‌ನ ಚೇಂಬರ್‌ನಲ್ಲಿ ಶವವಾಗಿ ಪತ್ತೆಯಾದ ಘಟನೆ ಬೆಂಗಳೂರು ದಕ್ಷಿಣ ತಾಲೂಕಿನ ತಾತಗುಣಿ ಬಳಿ ನಡೆದಿದೆ. ಚಾಮರಾಜನಗರ ಜಿಲ್ಲೆಯ ರಜನಿಕಾಂತ್ ಎಂಬುವವರ ಪುತ್ರ ಪ್ರೀತಮ್ (14) ಮೃತ ಬಾಲಕ. ರಜನಿಕಾಂತ್ ಕುಟುಂಬ ತಾತಗುಣಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಿತ್ತು. ಪ್ರೀತಮ್ ಕಳೆದ ಮೂರು ದಿನಗಳ ಹಿಂದೆ ಬಾಲಕ ಕಾಣೆಯಾಗಿದ್ದು, ಈ ಬಗ್ಗೆ ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಲಾಗಿತ್ತು. ಪೊಲೀಸರು...







