ಬೆದರಿಸಿ ಹಣ ವಸೂಲಿ ಮಾಡುತ್ತಿದ್ದ ಮೂವರು ಪೋಲಿಸರ ಬಂಧನ -ಕಹಳೆ ನ್ಯೂಸ್
ಬೆಂಗಳೂರು : ದಂಧೆಕೋರರನ್ನು ಬೆದರಿಸಿ ಆರು ಲಕ್ಷ ರೂ. ಹಣ ವಸೂಲಿ ಮಾಡಿದ್ದಾರೆಂಬ ಆರೋಪದ ಮೇರೆಗೆ ಚಿಕ್ಕಜಾಲ ಪೊಲೀಸ್ ಠಾಣೆಯ ಮೂವರು ಪೊಲೀಸರನ್ನು ಬಾಗಲೂರು ಠಾಣಾ ಪೊಲೀಸರು ಬಂಧಿಸಿದ್ದಾರೆ. ಚಿಕ್ಕಜಾಲ ಠಾಣೆಯ ಇಬ್ಬರು ಹೆಡ್‌ಕಾನ್‌ಸ್ಟೇಬಲ್ ಹಾಗೂ ಒಬ್ಬರು ಕಾನ್‌ಸ್ಟೇಬಲ್ ಅನ್ನು ಬಾಗಲೂರು ಠಾಣೆ ಪೊಲೀಸರು ಬಂಧಿಸಿ ವಿಚಾರಣೆಗೊಳಪಡಿಸಿ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ. ಚಿಕ್ಕಜಾಲ ಠಾಣಾ ವ್ಯಾಪ್ತಿಯಲ್ಲಿ ಹಣ ದ್ವಿಗುಣಗೊಳಿಸುವ ದಂಧೆ ನಡೆಯುತ್ತಿದೆ. ಆ ದಂಧೆಕೋರರು ಪ್ರತಿಷ್ಠಿತ ಹೋಟೆಲ್‌ವೊಂದರ ಬಳಿ ಇದ್ದಾರೆಂದು ಪೊಲೀಸ್...






