ಪುಟಿನ್ ಭಾರತ ಭೇಟಿ ಬೆನ್ನಲ್ಲೇ; ಭಾರತದೊಂದಿಗೆ ವ್ಯಾಪಾರ ಮಾತುಕತೆಗೆ ತುದಿಗಾಲಲ್ಲಿ ನಿಂತ ಅಮೆರಿಕ- ಕಹಳೆ ನ್ಯೂಸ್
ನವದೆಹಲಿ: ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಭಾರತ ಭೇಟಿಯನ್ನು ಇಡೀ ವಿಶ್ವವೇ ಕುತೂಹಲದಿಂದ ನೋಡುತ್ತಿದ್ದು, ಈ ಮಧ್ಯೆ ಅಮೆರಿಕ ಭಾರತದೊಂದಿಗೆ ವ್ಯಾಪಾರ ಮಾತುಕತೆ ನಡೆಸಲು ತುದಿಗಾಲಲ್ಲಿ ನಿಂತಿದೆ. ಅಮೆರಿಕದ ವ್ಯಾಪಾರ ಪ್ರತಿನಿಧಿ ರಿಕ್ ಸ್ವಿಟ್ಜರ್ ನೇತೃತ್ವದ ಟ್ರಂಪ್ ಆಡಳಿತದ ಸಂಧಾನಕಾರರ ತಂಡ ಮುಂದಿನ ವಾರ ಭಾರತಕ್ಕೆ ಪ್ರಯಾಣ ಬೆಳೆಸಲಿದ್ದು, ವ್ಯಾಪಾರ ಒಪ್ಪಂದದ ಕುರಿತು ಮಾತುಕತೆ ಮುಂದುವರಿಸಲಿದೆ ಎಂದು ಅಮೆರಿಕದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಹೆಸರು ಬಹಿರಂಗಪಡಿಸಲು ಇಚ್ಛಿಸದ ಅಧಿಕಾರಿ, ನಿಯೋಗದ ಭೇಟಿಯ ಕುರಿತು...







