Tuesday, July 28, 2026

ದೆಹಲಿ

ಜಿಲ್ಲೆದೆಹಲಿರಾಜ್ಯಸುದ್ದಿ

ತಮಿಳುನಾಡಿನಲ್ಲಿ ಗೋಹತ್ಯೆ ನಿಷೇಧ ವಿವಾದ; ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ಮಧ್ಯಂತರ ತಡೆ -ಕಹಳೆ ನ್ಯೂಸ್

ನವದೆಹಲಿ: ಬಕ್ರೀದ್ ಸೇರಿದಂತೆ ಯಾವುದೇ ದಿನ ತಮಿಳುನಾಡಿನಾದ್ಯಂತ ಹಸು ಮತ್ತು ಕರುಗಳ ವಧೆಯನ್ನು ಸಂಪೂರ್ಣವಾಗಿ ನಿಷೇಧಿಸಿ ಮದ್ರಾಸ್ ಹೈಕೋರ್ಟ್   ಹೊರಡಿಸಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಮಧ್ಯಂತರ ತಡೆ ನೀಡಿದೆ. ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಾಲಯ, ರಾಜ್ಯಕ್ಕೆ ತಾತ್ಕಾಲಿಕ ಪರಿಹಾರ ನೀಡಿದೆ. ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರಿದ್ದ ಪೀಠ, ಹೈಕೋರ್ಟ್ ಆದೇಶದ ಕೊನೆಯ ಭಾಗಕ್ಕೆ ತಿದ್ದುಪಡಿ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟಿದೆ. ಜೊತೆಗೆ ರಾಜ್ಯ...
ದೆಹಲಿರಾಜ್ಯಸುದ್ದಿ

ಕೆಂಪುಕೋಟೆಗೆ ಬಾಂಬ್ ಬೆದರಿಕೆ: ತೀವ್ರ ಶೋಧದ ಬಳಿಕ ಹುಸಿ ಕರೆ ಎಂದು ದೃಢಪಡಿಸಿದ ಪೊಲೀಸರು – ಕಹಳೆ ನ್ಯೂಸ್

ನವದೆಹಲಿ: ಐತಿಹಾಸಿಕ ಕೆಂಪುಕೋಟೆಗೆ ಬಾಂಬ್ ಇಟ್ಟು ಸ್ಫೋಟಿಸುವುದಾಗಿ ಅಪರಿಚಿತ ವ್ಯಕ್ತಿಯೊಬ್ಬ ನೀಡಿದ ಬೆದರಿಕೆ ಕರೆ ಭಾರಿ ಆತಂಕ ಸೃಷ್ಟಿಸಿದೆ. ಪೊಲೀಸರು ಹಾಗೂ ಭದ್ರತಾ ಸಂಸ್ಥೆಗಳ ಸುದೀರ್ಘ ತಪಾಸಣೆಯ ಬಳಿಕ ಇದು ಹುಸಿ ಕರೆ ಎಂದು ದೃಢಪಟ್ಟಿದೆ. ಮುಂಬೈ ಪೊಲೀಸ್  ಕಂಟ್ರೋಲ್ ರೂಂಗೆ ಕರೆ ಮಾಡಿದ ಅಪರಿಚಿತನೊಬ್ಬ, ದೆಹಲಿಯ ಕೆಂಪುಕೋಟೆಯಲ್ಲಿ ಬಾಂಬ್ ಸ್ಫೋಟಗೊಳ್ಳಲಿದೆ ಎಂದಿದ್ದ. ತಕ್ಷಣವೇ ಎಚ್ಚೆತ್ತ ಮುಂಬೈ ಪೊಲೀಸರು ಈ ಮಾಹಿತಿಯನ್ನು ದೆಹಲಿ ಪೊಲೀಸ್  ಕಂಟ್ರೋಲ್ ರೂಂಗೆ ರವಾನಿಸಿದರು. ಮಾಹಿತಿ ಸಿಗುತ್ತಿದ್ದಂತೆಯೇ...
ದೆಹಲಿರಾಜ್ಯಸುದ್ದಿ

ಮೊಮ್ಮಗನ ನೆನಪಲ್ಲಿ ತಾತ ನಿಧನ; ಕೇತನ್ ಅಗರ್ವಾಲ್ ಕುಟುಂಬಕ್ಕೆ ಮತ್ತೊಂದು ಆಘಾತ -ಕಹಳೆ ನ್ಯೂಸ್

ಪುಣೆ: ಭಾವಿ ಪತ್ನಿ ಸಿಯಾ ಗೋಯಲ್ ಕೈಯಲ್ಲಿ ಹತ್ಯೆಯಾದ ಉದ್ಯಮಿ ಕೇತನ್ ಅಗರ್ವಾಲ್ ಅವರ ಸಾವಿನ ಬೆನ್ನಲ್ಲೇ ಕುಟುಂಬಕ್ಕೆ ಮತ್ತೊಂದು ಆಘಾತ ಎದುರಾಗಿದೆ. ಮೊಮ್ಮಗನ ಸಾವಿನಿಂದ ತೀವ್ರ ಆಘಾತಕ್ಕೊಳಗಾಗಿ ಹಾಸಿಗೆ ಹಿಡಿದಿದ್ದ ಅವರ ತಾತ ದೇವಿದಯಾಳ್ ಅಗರ್ವಾಲ್ ಶನಿವಾರ ಸಂಜೆ ನಿಧನರಾಗಿದ್ದಾರೆ. ಮೊಮ್ಮಗನ ಸಾವಿನಿಂದ ತೀವ್ರವಾಗಿ ನೊಂದಿದ್ದ 71 ವರ್ಷದ ದೇವಿದಯಾಳ್ ಅಗರ್ವಾಲ್ ಅವರು ಪುಣೆಯ ಜುಪಿಟರ್ ಆಸ್ಪತ್ರೆಗೆ ದಾಖಲಾಗಿದ್ದರು. ಕೇತನ್ ಸಾವಿನ ಬಳಿಕ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದರಿಂದ ಚಿಕಿತ್ಸೆ...
ದೆಹಲಿರಾಜ್ಯಸುದ್ದಿ

ಸೋಷಿಯಲ್‌ ಮೀಡಿಯಾ ಪ್ರೀತಿಗಾಗಿ ಗಡಿ ದಾಟಿ ಬಂದವ ಅರೆಸ್ಟ್‌; ಪಾಕಿಸ್ತಾನಕ್ಕೆ ವಾಪಸ್‌ ಕಳಿಸಿದ ಭಾರತ – ಕಹಳೆ ನ್ಯೂಸ್

ನವದೆಹಲಿ: ಸೋಷಿಯಲ್‌ ಮೀಡಿಯಾದಲ್ಲಿ ಆದ ಪ್ರೀತಿಗಾಗಿ ಪ್ರೇಯಸಿಯನ್ನು ಹುಡುಕಿಕೊಂಡು ಗಡಿ ದಾಟಿ ಭಾರತಕ್ಕೆ ಎಂಟ್ರಿ ಕೊಟ್ಟಿದ್ದ ಪಾಕಿಸ್ತಾನ  ಪ್ರಜೆಯನ್ನು ತಡೆದು ವಾಪಸ್‌ ಕಳುಹಿಸಲಾಗಿದೆ. ಪ್ರಿಯತಮೆಗಾಗಿ ಮೇ ತಿಂಗಳಲ್ಲಿ ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ನಿಯಂತ್ರಣ ರೇಖೆಯನ್ನು (LOC) ದಾಟಿದ್ದ ಪಾಕ್ ಆಕ್ರಮಿತ ಜಮ್ಮು ಮತ್ತು ಕಾಶ್ಮೀರದ (POJK) 22 ವರ್ಷದ ಯುವಕನನ್ನು ಶನಿವಾರ ಪಾಕಿಸ್ತಾನ ಸೇನಾ ಅಧಿಕಾರಿಗಳಿಗೆ ಹಸ್ತಾಂತರಿಸಲಾಗಿದೆ. ಮೇ 31 ರಂದು ಉರಿ ಸೆಕ್ಟರ್‌ನಲ್ಲಿ ನಿಯಂತ್ರಣ ರೇಖೆಯನ್ನು ದಾಟುತ್ತಿದ್ದಾಗ ಪಿಒಜೆಕೆ...
ದೆಹಲಿಸುದ್ದಿ

ಅಮರನಾಥ ಯಾತ್ರೆ ಆರಂಭ : ಬಿಗಿ ಭದ್ರತೆಯಲ್ಲಿ ಜಮ್ಮುವಿನಿಂದ ಹೊರಟ ಮೊದಲ ತಂಡ -ಕಹಳೆ ನ್ಯೂಸ್

ಶ್ರೀನಗರ: ಪ್ರಸಿದ್ದ ಧಾರ್ಮಿಕ ಕ್ಷೇತ್ರವಾದ ಶ್ರೀ ಅಮರನಾಥ ಯಾತ್ರೆ ಇಂದಿನಿಂದ ಆರಂಭಗೊಂಡಿದೆ. ಬಹುಸ್ತರದ ಭದ್ರತಾ ವ್ಯವಸ್ಥೆಯ ನಡುವೆ ಭಕ್ತರ ಮೊದಲ ತಂಡವು ಜಮ್ಮುವಿನಿಂದ   ಕಾಶ್ಮೀರಕ್ಕೆ ಪ್ರಯಾಣ ಬೆಳೆಸಿದೆ. ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ (LG) ಮನೋಜ್ ಸಿನ್ಹಾ   ಅವರು ಜಮ್ಮುವಿನ ಭಗವತಿ ನಗರ ಬೇಸ್ ಕ್ಯಾಂಪ್‌ನಲ್ಲಿ ಮುಂಜಾನೆ ವಿಶೇಷ ಪೂಜೆ ಸಲ್ಲಿಸಿ ಮೊದಲ ತಂಡಕ್ಕೆ ಹಸಿರು ನಿಶಾನೆ ತೋರಿದರು. ಮೊದಲ ಬ್ಯಾಚ್‌ನಲ್ಲಿ ಒಟ್ಟು 4,822 ಭಕ್ತರು ಪ್ರಯಾಣ ಬೆಳೆಸಿದ್ದಾರೆ....
ದೆಹಲಿರಾಜ್ಯಸುದ್ದಿ

ಜುಲೈ 20ರಿಂದ ಸಂಸತ್ ಮುಂಗಾರು ಅಧಿವೇಶನ ಸಾಧ್ಯತೆ -ಕಹಳೆ ನ್ಯೂಸ್

ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನವು  ಜುಲೈ 20ರಿಂದ ಆಗಸ್ಟ್ 13ರವರೆಗೆ ನಡೆಯುವ ಸಾಧ್ಯತೆ ಇದ್ದು, ಈ ಕುರಿತು ಕೇಂದ್ರ ಸರ್ಕಾರ ಶೀಘ್ರದಲ್ಲೇ ಅಧಿಕೃತ ಪ್ರಕಟಣೆ ಹೊರಡಿಸುವ ನಿರೀಕ್ಷೆಯಿದೆ. ಸುಮಾರು ನಾಲ್ಕು ವಾರಗಳ ಕಾಲ ನಡೆಯಲಿರುವ ಈ ಅಧಿವೇಶನದಲ್ಲಿ ಹಲವು ಮಹತ್ವದ ಮಸೂದೆಗಳು ಕುರಿತು ಚರ್ಚೆ ನಡೆಯಲಿದೆ. ಈ ಬಾರಿಯ ಅಧಿವೇಶನದಲ್ಲಿ ಮಹಿಳೆಯರಿಗೆ ಲೋಕಸಭೆ ಹಾಗೂ ವಿಧಾನಸಭೆಗಳಲ್ಲಿ 33% ಮೀಸಲಾತಿ ಜಾರಿಗೊಳಿಸುವ ಸಂವಿಧಾನ ತಿದ್ದುಪಡಿ ಮಸೂದೆ ಹಾಗೂ ಅದಕ್ಕೆ ಸಂಬಂಧಿಸಿದ ಕ್ಷೇತ್ರ...
ದೆಹಲಿರಾಜ್ಯಸುದ್ದಿ

ವೆನೆಜುವೆಲಾದಲ್ಲಿ ಮೃತಪಟ್ಟ ಭಾರತೀಯ ನಾವಿಕನ ದೇಹದಲ್ಲಿ ಮಿದುಳು, ಶ್ವಾಸಕೋಶಗಳು, ಹೃದಯವೇ ನಾಪತ್ತೆ! -ಕಹಳೆ ನ್ಯೂಸ್

ನವದೆಹಲಿ: ವೆನೆಜುವೆಲಾದಲ್ಲಿ ಮೃತಪಟ್ಟ ಭಾರತೀಯ ನಾವಿಕನ  ದೇಹದಲ್ಲಿ ಮಿದುಳು, ಹೃದಯ, ಶ್ವಾಸಕೋಶಗಳೇ ನಾಪತ್ತೆಯಾಗಿರುವ ಶಾಕಿಂಗ್‌ ಘಟನೆ ನಡೆದಿದೆ. ಈ ಬಗ್ಗೆ ತನಿಖೆ ನಡೆಸಬೇಕೆಂದು ಕುಟುಂಬಸ್ಥರು ಆಗ್ರಹಿಸಿದ್ದಾರೆ. 33 ವರ್ಷದ ರಾಕೇಶ್‌ ಚೌಹಾಣ್‌ ಹೃದಯಾಘಾತದಿಂದ ಮೇ ತಿಂಗಳಲ್ಲಿ ಸಾವನ್ನಪ್ಪಿದ್ದರು. ಭಾರತೀಯ ನಾವಿಕನ ಮೃತದೇಹವನ್ನು ದಕ್ಷಿಣ ಅಮೆರಿಕದಿಂದ ಭಾರತಕ್ಕೆ ತರಲಾಯಿತು. ಆದರೀಗ, ರಾಕೇಶ್‌ ಸಾವಿನ ಸುತ್ತ ನಿಗೂಢತೆ ತೀವ್ರಗೊಂಡಿದೆ. ರಾಕೇಶ್ ಚೌಹಾಣ್ ಅವರ ಮೆದುಳು, ಹೃದಯ ಮತ್ತು ಶ್ವಾಸಕೋಶಗಳು ಸೇರಿದಂತೆ ದೇಶದ ಹಲವಾರು...
ದೆಹಲಿರಾಜ್ಯಸುದ್ದಿ

ಕೇತನ್ ಸಾವಿನ ಬಗ್ಗೆ ಅಪಹಾಸ್ಯ ಮಾಡಿದ್ದ ದಂತ ವೈದ್ಯೆ 5 ವರ್ಷ ಅಮಾನತು -ಕಹಳೆ ನ್ಯೂಸ್

ನವದೆಹಲಿ: ಲೋಹಗಢ ಕೋಟೆಯಿಂದ ತಳ್ಳಿ ಕೊಂದಿದ್ದ ಕೇತನ್ ಅಗರ್ವಾಲ್  ಸಾವನ್ನು ಅಪಹಾಸ್ಯ ಮಾಡಿದ್ದ ದಂತ ವೈದ್ಯೆಯನ್ನು ಅಖಿಲ ಭಾರತ ದಂತ ವೈದ್ಯಕೀಯ ವಿದ್ಯಾರ್ಥಿಗಳ ಮತ್ತು ಶಸ್ತ್ರಚಿಕಿತ್ಸಕರ ಸಂಘಐದು ವರ್ಷಗಳ ಕಾಲ ಅಮಾನತು ಮಾಡಿದೆ. ಅಮಾನತು ಆದೇಶದ ಪ್ರಕಾರ, ಮಧ್ಯಪ್ರದೇಶದ ಎಐಡಿಎಸ್‌ಎ ಸಂಘಟನೆಯ ಖಜಾಂಚಿಯಾಗಿದ್ದ ಡಾ.ಮುಸ್ಕಾನ್ ಸೋನಿ (Dr. Muskan Soni) ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಐದು ವರ್ಷಗಳ ಅವಧಿಗೆ ಅಮಾನತುಗೊಳಿಸಲಾಗಿದೆ. ಇತ್ತೀಚಿಗೆ ಅವರು ಇನ್‌ಸ್ಟಾಗ್ರಾಮ್‌ನಲ್ಲಿ ಸ್ಟೋರಿವೊಂದನ್ನು ಹಂಚಿಕೊಂಡಿದ್ದರು. ಅದರಲ್ಲಿ...
1 2 3 4 60
Page 2 of 60