Tuesday, March 10, 2026

ದೆಹಲಿ

ದೆಹಲಿರಾಜ್ಯರಾಷ್ಟ್ರೀಯಸುದ್ದಿಹೆಚ್ಚಿನ ಸುದ್ದಿ

FIDE ಮಹಿಳಾ ಗ್ರ್ಯಾಂಡ್ ಸ್ವಿಸ್ ಗೆದ್ದ ವೈಶಾಲಿ ರಮೇಶ್‌ ಬಾಬು: ಪ್ರಧಾನಿ ಮೋದಿ ಅಭಿನಂದನೆ -ಕಹಳೆ ನ್ಯೂಸ್

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು FIDE ಮಹಿಳಾ ಗ್ರ್ಯಾಂಡ್ ಸ್ವಿಸ್ ಗೆದ್ದ ವೈಶಾಲಿ ರಮೇಶ್‌ಬಾಬು ಅವರನ್ನು ಅಭಿನಂದಿಸಿದ್ದಾರೆ ಮತ್ತು ಅವರ ಉತ್ಸಾಹ ಮತ್ತು ಸಮರ್ಪಣೆ ಅನುಕರಣೀಯವಾಗಿದೆ ಎಂದು ಹೇಳಿದ್ದಾರೆ. ಸೋಮವಾರ ಸಮರ್ಕಂಡ್‌ನಲ್ಲಿ ನಡೆದ 11ನೇ ಮತ್ತು ಅಂತಿಮ ಸುತ್ತಿನಲ್ಲಿ ಮಾಜಿ ವಿಶ್ವ ಚಾಂಪಿಯನ್ ಚೀನಾದ ಝೊಂಗಿ ಟಾನ್ ವಿರುದ್ಧ ಕಠಿಣ ಡ್ರಾ ಸಾಧಿಸಿದ ನಂತರ ಭಾರತೀಯ ಗ್ರ್ಯಾಂಡ್‌ಮಾಸ್ಟರ್ ಸತತ ಎರಡನೇ ಬಾರಿಗೆ FIDE ಮಹಿಳಾ ಗ್ರ್ಯಾಂಡ್ ಸ್ವಿಸ್ ಅನ್ನು...
ಅಂಕಣಕ್ರೈಮ್ದೆಹಲಿಸುದ್ದಿ

BMW ಕಾರು ಅಪಘಾತಕ್ಕೆ ಹಣಕಾಸು ಸಚಿವಾಲಯದ ಅಧಿಕಾರಿ ಬಲಿ ; 24 ಗಂಟೆಗಳಲ್ಲಿ ಚಾಲಕ ಅರೆಸ್ಟ್‌-ಕಹಳೆ ನ್ಯೂಸ್

ನವದೆಹಲಿ: ಬಿಎಂಡಬ್ಲ್ಯೂ ಕಾರು ಡಿಕ್ಕಿಯಾಗಿ  ಹಣಕಾಸು ಸಚಿವಾಲಯದ ಅಧಿಕಾರಿ ಬಲಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇವಲ 24 ಗಂಟೆಯಲ್ಲೇ ಆರೋಪಿಯನ್ನ ಬಂಧಿಸಲಾಗಿದೆ. ಬಂಧಿತ ಆರೋಪಿ ಮಹಿಳೆಯನ್ನ ಗಗನ್‌ಪ್ರೀತ್‌ ಕೌರ್‌ ಎಂದು ಗುರುತಿಸಲಾಗಿದೆ. ನಿನ್ನೆ ಮಧ್ಯಾಹ್ನ ಬಾಂಗ್ಲಾ ಸಾಹಿಬ್‌ ಗುರುದ್ವಾರದಿಂದ ತಮ್ಮ ಬೈಕ್‌ನಲ್ಲಿ ತಮ್ಮ ಮನೆಗೆ ಹಿಂದಿರುಗುತ್ತಿದ್ದ ವೇಳೆ ಬಿಎಂಡಬ್ಲ್ಯೂ ಕಾರು ಗುದ್ದಿತ್ತು. ಈ ವೇಳೆ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯದಲ್ಲೇ ಹಣಕಾಸು ಸಚಿವಾಲಯದ ಆರ್ಥಿಕ ವ್ಯವಹಾರಗಳ ಇಲಾಖೆಯ ಉಪ ಕಾರ್ಯದರ್ಶಿ ನವಜೋತ್ ಸಿಂಗ್...
ದೆಹಲಿರಾಜ್ಯರಾಷ್ಟ್ರೀಯ

ರಾಷ್ಟ್ರೀಯ ಎಂಜಿನಿಯರ್‌ ಗಳ ದಿನ – ಸರ್‌ಎಂವಿ ವಿಶ್ವೇಶ್ವರಯ್ಯನವರನ್ನು ಸ್ಮರಿಸಿದ ಪ್ರಧಾನಿ ಮೋದಿ- ಕಹಳೆ ನ್ಯೂಸ್

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಎಂಜಿನಿಯರ್‌ಗಳ ದಿನದಂದು ತಂತ್ರಜ್ಞರಿಗೆ ಶುಭಾಶಯ ಕೋರಿದರು ಮತ್ತು ವಿಕಸಿತ್‌ ಭಾರತವನ್ನು ನಿರ್ಮಿಸುವ ಸಾಮೂಹಿಕ ಪ್ರಯತ್ನಗಳಲ್ಲಿ ಅವರು ನಿರ್ಣಾಯಕ ಪಾತ್ರ ವಹಿಸುವುದನ್ನು ಮುಂದುವರಿಸುತ್ತಾರೆ ಎಂದು ಹೇಳಿದರು. ಈ ದಿನವನ್ನು ಎಂಜಿನಿಯರ್‌ಗಳ ಕೊಡುಗೆಗೆ ಗೌರವವಾಗಿ ಮತ್ತು ಪ್ರಸಿದ್ಧ ಸಿವಿಲ್‌ ಎಂಜಿನಿಯರ್‌ ಮತ್ತು ಆಡಳಿತಾಧಿಕಾರಿ ಸರ್‌ ಎಂ. ವಿಶ್ವೇಶ್ವರಯ್ಯ ಅವರ ಜನ್ಮ ವಾರ್ಷಿಕೋತ್ಸವವನ್ನು ಸ್ಮರಿಸಲು ಆಚರಿಸಲಾಗುತ್ತದೆ. ಎಂಜಿನಿಯರ್‌ಗಳ ದಿನದಂದು, ಭಾರತದ ಎಂಜಿನಿಯರಿಂಗ್‌ ಭೂದೃಶ್ಯದಲ್ಲಿ ಅಳಿಸಲಾಗದ ಗುರುತು...
ದೆಹಲಿರಾಜ್ಯರಾಷ್ಟ್ರೀಯಸುದ್ದಿಹೆಚ್ಚಿನ ಸುದ್ದಿ

ನೇಪಾಳ ಜೈಲುಗಳಿಂದ ತಪ್ಪಿಸಿಕೊಂಡು ಬಂದ 35 ಕೈದಿಗಳನ್ನು ಬಂಧಿಸಿದ ಭಾರತ -ಕಹಳೆ ನ್ಯೂಸ್

ನವದೆಹಲಿ: ನೇಪಾಳದಲ್ಲಿ ಇತ್ತೀಚೆಗೆ ನಡೆದ ಯುವಜನರ ಭಾರೀ ಪ್ರತಿಭಟನೆಯಿಂದಾಗಿ ವಿವಿಧ ಜೈಲುಗಳಿಂದ ತಪ್ಪಿಸಿಕೊಂಡು ಅಕ್ರಮವಾಗಿ ಭಾರತ ಪ್ರವೇಶಿಸಿದ 35 ಕೈದಿಗಳನ್ನು ಸಶಸ್ತ್ರ ಸೀಮಾ ಬಲ್(ಎಸ್‌ಎಸ್‌ಬಿ) ಬಂಧಿಸಿದೆ ಎಂದು ಅಧಿಕಾರಿಗಳು ಗುರುವಾರ ದೃಢಪಡಿಸಿದ್ದಾರೆ. 22 ಕೈದಿಗಳನ್ನು ಉತ್ತರ ಪ್ರದೇಶದ ಭಾರತ-ನೇಪಾಳ ಗಡಿಯಲ್ಲಿ, 10 ಮಂದಿಯನ್ನು ಬಿಹಾರದಲ್ಲಿ ಮತ್ತು ಮೂವರನ್ನು ಪಶ್ಚಿಮ ಬಂಗಾಳದಲ್ಲಿ ಸೆರೆಹಿಡಿಯಲಾಗಿದೆ. ಈ ಬೆಳವಣಿಗೆ ಬಗ್ಗೆ ಮಾಹಿತಿ ಪಡೆದ ಅಧಿಕಾರಿಗಳು, ಈ ಕೈದಿಗಳನ್ನು ಭಾರತ-ನೇಪಾಳ ಗಡಿಯಾದ್ಯಂತ ವಿವಿಧ ಚೆಕ್‌ಪೋಸ್ಟ್‌ಗಳಲ್ಲಿ ಇರಿಸಿದ್ದಾರೆ...
ದೆಹಲಿರಾಜ್ಯರಾಷ್ಟ್ರೀಯಸುದ್ದಿಹೆಚ್ಚಿನ ಸುದ್ದಿ

ಭಾರತೀಯರನ್ನು ವಾಪಸ್ ಕರೆತರಲು AI, ಇಂಡಿಗೊದಿಂದ ಹೆಚ್ಚುವರಿ ಸೇವೆ -ಕಹಳೆ ನ್ಯೂಸ್

ನವದೆಹಲಿ: ಭಾರತೀಯ ವಿಮಾನಯಾನ ಸಂಸ್ಥೆಗಳು ಇಂದಿನಿಂದಲೇ (ಗುರುವಾರ) ನೇಪಾಳ ರಾಜಧಾನಿ ಕಠ್ಮಂಡುವಿಗೆ ಸೇವೆಗಳನ್ನು ಪುನರಾರಂಭಿಸಿವೆ ಎಂದು ವರದಿಯಾಗಿದೆ. 'ಹಿಂಸಾಚಾರದಿಂದಾಗಿ ನೇಪಾಳದಲ್ಲಿ ಸಿಲುಕಿರುವ ಭಾರತೀಯರನ್ನು ಸ್ವದೇಶಕ್ಕೆ ಕರೆತರಲು ಏರ್ ಇಂಡಿಯಾ ಮತ್ತು ಇಂಡಿಗೊ ಸಂಸ್ಥೆಗಳು ಹೆಚ್ಚುವರಿ ವಿಮಾನ ಸೇವೆ ಒದಗಿಸುತ್ತಿವೆ' ಎಂದು ನಾಗರಿಕ ವಿಮಾನಯಾನ ಸಚಿವ ಕೆ. ರಾಮಮೋಹನ್ ನಾಯ್ಡು ತಿಳಿಸಿದ್ದಾರೆ. 'ಪ್ರಯಾಣಿಕರಿಂದ ಹೆಚ್ಚುವರಿ ದರ ಪಡೆಯದಂತೆ ವಿಮಾನಯಾನ ಸಂಸ್ಥೆಗಳಿಗೆ ನಿರ್ದೇಶನ ನೀಡಲಾಗಿದೆ' ಎಂದೂ ನಾಯ್ಡು ಹೇಳಿದ್ದಾರೆ. ಕಠ್ಮಂಡು ಸೇರಿದಂತೆ ಹಲವೆಡೆ...
ದೆಹಲಿರಾಜ್ಯರಾಷ್ಟ್ರೀಯಸುದ್ದಿಹೆಚ್ಚಿನ ಸುದ್ದಿ

ಸೆ.12ರಂದು ನೂತನ ಉಪ ರಾಷ್ಟ್ರಪತಿಯಾಗಿ ‘ಸಿ.ಪಿ. ರಾಧಾಕೃಷ್ಣನ್’ ಪ್ರಮಾಣ ವಚನ ಸ್ವೀಕಾರ – ಕಹಳೆ ನ್ಯೂಸ್

ನವದೆಹಲಿ : ಭಾರತದ 15ನೇ ಉಪರಾಷ್ಟ್ರಪತಿಯಾಗಿ ಆಯ್ಕೆಯಾದ ಸಿ.ಪಿ. ರಾಧಾಕೃಷ್ಣನ್ ಅವರು ಸೆಪ್ಟೆಂಬರ್ 12, 2025 ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ವರದಿಗಳು ತಿಳಿಸಿವೆ. ಭಾರತದ 15ನೇ ಉಪರಾಷ್ಟ್ರಪತಿಯಾಗಿ ರಾಧಾಕೃಷ್ಣನ್ ಆಯ್ಕೆಯಾದರು, 767 ಮತಗಳಲ್ಲಿ 452 ಮತಗಳನ್ನ ಪಡೆದರು ಮತ್ತು ಮಂಗಳವಾರ ನಡೆದ ಚುನಾವಣೆಯಲ್ಲಿ ವಿರೋಧ ಪಕ್ಷದ ಬಿ. ಸುದರ್ಶನ್ ರೆಡ್ಡಿ ಅವರನ್ನ ಸೋಲಿಸಿದರು, ಅವರು ಮಹಾರಾಷ್ಟ್ರದ ರಾಜ್ಯಪಾಲ ಹುದ್ದೆಗೆ ತಮ್ಮ ರಾಜೀನಾಮೆಯನ್ನ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ...
ದೆಹಲಿರಾಜ್ಯಸುದ್ದಿ

ನೇಪಾಳದಾದ್ಯಂತ ಕರ್ಫ್ಯೂ ಜಾರಿ-ಕನ್ನಡಿಗರು ಸುರಕ್ಷಿತ; ಸಿಎಂ ಟ್ವೀಟ್-ಕಹಳೆ ನ್ಯೂಸ್

ಕಾಠ್ಮಂಡು/ನವದೆಹಲಿ: ಸಾಮಾಜಿಕ ಜಾಲತಾಣಗಳ ಮೇಲಿನ ನಿಷೇಧ ಹಾಗೂ ಭ್ರಷ್ಟಾಚಾರದ ವಿರುದ್ಧ ನೇಪಾಳದಲ್ಲಿ ಜೆನ್‌ ಝಡ್‌ ಯುವ ಜನತೆಯ ಪ್ರತಿಭಟನೆ ಬುಧವಾರವೂ (ಸೆ.10) ತೀವ್ರ ಸ್ವರೂಪ ಪಡೆದಿದ್ದು, ಇದರ ಪರಿಣಾಮ ಕಾಠ್ಮಂಡು ವಿಮಾನ ನಿಲ್ದಾಣ ಬಂದ್‌ ಮಾಡಿದ್ದು, ಇದರ ಪರಿಣಾಮ ಕನ್ನಡಿಗರು ಸೇರಿದಂತೆ ನೂರಾರು ಭಾರತೀಯ ಪ್ರವಾಸಿಗರು ಅತಂತ್ರ ಸ್ಥಿತಿಯಲ್ಲಿ ಸಿಲುಕಿಕೊಂಡಿರುವುದಾಗಿ ವರದಿ ತಿಳಿಸಿದೆ. ಕನ್ನಡಿಗರು ಸುರಕ್ಷಿತ: ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಎಕ್ಸ್‌ ಖಾತೆಯಲ್ಲಿ...
ಜಿಲ್ಲೆದಕ್ಷಿಣ ಕನ್ನಡದೆಹಲಿಸುದ್ದಿಹೆಚ್ಚಿನ ಸುದ್ದಿ

ನೇಪಾಳದಲ್ಲಿ ಹಿಂಸಾಚಾರ ಹಿನ್ನಲೆ: ದೆಹಲಿಯಿಂದ ಕಠ್ಮಂಡುಗೆ ತೆರಳಬೇಕಿದ್ದ ವಿಮಾನ ಹಾರಾಟ ಬಂದ್ -ಕಹಳೆ ನ್ಯೂಸ್

ನವದೆಹಲಿ: ನೇಪಾಳದಲ್ಲಿ ಹಿಂಸಾಚಾರ ಭುಗಿಲೆದ್ದಿದೆ. ನೇಪಾಳ ಸಂಸತ್, ರಾಷ್ಟ್ರಪತಿ ಭವನಕ್ಕೆ ಬೆಂಕಿ ಹಚ್ಚಿ ಆಕ್ರೋಶವನ್ನು ಉದ್ರಿಕ್ತರು ಹಾಕುತ್ತಿದ್ದಾರೆ. ಈ ಹಿನ್ನಲೆಯಲ್ಲಿ ದೆಹಲಿಯಿಂದ ಕಠ್ಮಂಡುಗೆ ತೆರಳಬೇಕಿದ್ದಂತ ವಿಮಾನಗಳ ಹಾರಾಟವನ್ನು ರದ್ದುಗೊಳಿಸಲಾಗಿದೆ. ನೇಪಾಳದ ಹಲವು ನಗರಗಳಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ನೇಪಾಳ ಸರ್ಕಾರದ ವಿರುದ್ಧ ಜನರು ರೊಚ್ಚಿಗೆದ್ದು ಪ್ರತಿಭಟನೆ ನಡೆಸುತ್ತಿದದಾರೆ. ನೇಪಾಳ ಸಂಸತ್, ರಾಷ್ಟ್ರಪತಿ ಭವನಕ್ಕೆ ಬೆಂಕಿ ಹಚ್ಚಿ ಆಕ್ರೋಶ ಹೊರ ಹಾಕುತ್ತಿದ್ದಾರೆ. ನೇಪಾಳದಲ್ಲಿ ಹಿಂಸಾಚಾರ ಹೆಚ್ಚಾದ ಹಿನ್ನಲೆಯಲ್ಲಿ ದೆಹಲಿಯಿಂದ ಕಠ್ಮಂಡುಗೆ ತೆರಳಬೇಕಿದ್ದಂತ...
1 18 19 20 21 22 49
Page 20 of 49