ಎಲ್ಲಾ ಮಾದರಿಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಗೌಹರ್ ಸುಲ್ತಾನಾ -ಕಹಳೆ ನ್ಯೂಸ್
ನವದೆಹಲಿ: ಭಾರತ ಮಹಿಳಾ ಕ್ರಿಕೆಟ್ ತಂಡದ ಅನುಭವಿ ಎಡಗೈ ಸ್ಪಿನ್ ಬೌಲರ್ ಗೌಹರ್ ಸುಲ್ತಾನಾ ಅವರು ಎಲ್ಲಾ ಮಾದರಿಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ವಿಶ್ವಕಪ್‌ನಂತಹ ದೊಡ್ಡ ಟೂರ್ನಿಯಲ್ಲಿ ಭಾರತ ತಂಡವನ್ನು ಪ್ರತಿನಿಧಿಸುವ ಅವಕಾಶ ಸಿಕ್ಕಿದ್ದು ನನಗೆ 'ದೊಡ್ಡ ಗೌರವ' ಎಂದು 37 ವರ್ಷದ ಆಟಗಾರ್ತಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ. 2008ರಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದ ಗೌಹರ್ ಸುಲ್ತಾನಾ, ಭಾರತದ ಪರ 50 ಏಕದಿನ ಹಾಗೂ 37 ಟಿ-20...







