ಧನ್ಕರ್ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು- ಕಹಳೆ ನ್ಯೂಸ್
ನವದೆಹಲಿ :ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಅವರ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ. ಸೋಮವಾರ ನಡೆದ ದಿಢೀರ್ ಬೆಳವಣಿಗೆಯಲ್ಲಿ ಜಗದೀಪ್ ಧನ್ಕರ್ ಅವರು ದೇಶದ ಪ್ರಥಮ ಪ್ರಜೆಯಾಗಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪತ್ರ ಬರೆದು ತಮ ರಾಜೀನಾಮೆ ಪತ್ರವನ್ನು ಅಂಗೀಕರಿಸಬೇಕೆಂದು ಮನವಿ ಮಾಡಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ದ್ರೌಪದಿ ಮುರ್ಮು ಅವರು ರಾಜೀನಾಮೆಯನ್ನು ಅಂಗೀಕರಿಸಿದ್ದು, ಮುಂದಿನ ಪ್ರಕ್ರಿಯೆಗಳಿಗೆ ಗೃಹ ಇಲಾಖೆಗೆ ಕಳುಹಿಸಿಕೊಟಿದ್ದಾರೆ.ರಾಷ್ಟ್ರಪತಿಗೆ ಬರೆದಿದ್ದ ಪತ್ರದಲ್ಲಿ ಸಂವಿಧಾನದ 67(ಎ) ವಿಧಿಯ...







