ಜಮ್ಮು-ಕಾಶ್ಮೀರದಲ್ಲಿ ಭಾರಿ ಮಳೆ; ಸೆಪ್ಟೆಂಬರ್ 30ರವರೆಗೆ 68 ರೈಲುಗಳ ಸೇವೆ ರದ್ದು -ಕಹಳೆ ನ್ಯೂಸ್
ಜಮ್ಮು: ಭಾರಿ ಮಳೆ ಹಿನ್ನೆಲೆ ಜಮ್ಮು ಮತ್ತು ಕತ್ರಾ ನಿಲ್ದಾಣಗಳಿಂದ ಹೊರಡುವ ಮತ್ತು ಅಲ್ಲಿಗೆ ಬರುವ 68 ರೈಲುಗಳನ್ನು ಸೆಪ್ಟೆಂಬರ್ 30ರವರೆಗೆ ರದ್ದುಪಡಿಸಲಾಗಿದೆ. 24 ರೈಲುಗಳ ಸೇವೆ ಪುನರಾರಂಭಗೊಳ್ಳಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇತ್ತೀಚೆಗೆ ಸುರಿದ ಭಾರಿ ಮಳೆ ಮತ್ತು ಹಠಾತ್ ಪ್ರವಾಹದಿಂದಾಗಿ ಪಠಾಣ್ಕೋಟ್-ಜಮ್ಮು ವಿಭಾಗದ ಹಲವು ಸ್ಥಳಗಳಲ್ಲಿ ರೈಲು ಹಳಿಗಳಲ್ಲಿ ಬಿರುಕು ಕಾಣಿಸಿಕೊಂಡಿದೆ. ಈ ಹಿನ್ನೆಲೆ ಕಳೆದ 8 ದಿನಗಳಿಂದ ಜಮ್ಮು ವಿಭಾಗದಲ್ಲಿ ರೈಲು ಸಂಚಾರ ಸ್ಥಗಿತಗೊಂಡಿದೆ. ಆಗಸ್ಟ್...







