Monday, June 15, 2026

ಬೆಂಗಳೂರು

ಬೆಂಗಳೂರುರಾಜ್ಯಸುದ್ದಿ

ಅಯ್ಯಪ್ಪನ ಮಾಲೆ ಧರಿಸಿ ಶಬರಿಮಲೆ ಯಾತ್ರೆ ಕೈಗೊಂಡ ಹೆಚ್‌ಡಿಕೆ – ಕಹಳೆ ನ್ಯೂಸ್

ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಯವರು ಶಬರಿಮಲೆ ಯಾತ್ರೆ ಕೈಗೊಂಡಿದ್ದಾರೆ. ಸೋಮವಾರ (ಜೂ.15) ಮುಂಜಾನೆ ಕೊಚ್ಚಿಯ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇಗುಲದಲ್ಲಿ ಪವಿತ್ರ ಮಾಲೆ ಧರಿಸಿ ಯಾತ್ರೆ ಕೈಗೊಂಡಿದ್ದಾರೆ. ರಾತ್ರಿ 8 ಗಂಟೆಗೆ ಅಯ್ಯಪ್ಪ ಸ್ವಾಮಿಯ ದರ್ಶನ ಪಡೆಯಲಿದ್ದಾರೆ. ಬಳಿಕ ಸುಮಾರು ಎರಡು ಗಂಟೆಗಳ ಕಾಲ ಪಡಿಪೂಜೆ ಸೇರಿ ವಿಶೇಷ ಪೂಜೆ ಸಲ್ಲಿಕೆ ಮಾಡಲಿದ್ದಾರೆ. ಕುಮಾರಸ್ವಾಮಿಯವರ ಜೊತೆ ಮಾಜಿ ಸಚಿವ ಸಾ.ರಾ. ಮಹೇಶ್, ಸಿ.ಎಸ್ ಪುಟ್ಟರಾಜು, JDLP ನಾಯಕ ಸುರೇಶ್ ಬಾಬು,...
ಬೆಂಗಳೂರುರಾಜ್ಯಸುದ್ದಿ

ಸಾವಿನ ವದಂತಿ ಬೆನ್ನಲ್ಲೇ ಆಂಜನೇಯನ ಮೊರೆ ಹೋದ ನಟ ದೊಡ್ಡಣ್ಣ -ಕಹಳೆ ನ್ಯೂಸ್

ಬೆಂಗಳೂರು: ಸಾವಿನ ಸುದ್ದಿ ವದಂತಿ ಬೆನ್ನಲ್ಲೇ ಕಂಟಕ ಪರಿಹಾರಕ್ಕಾಗಿ ನಟ ದೊಡ್ಡಣ್ಣ ಅವರು ಆಂಜನೇಯ ದೇವರ ಮೊರೆ ಹೋಗಿದ್ದಾರೆ. ಕಂಟಕ ಪರಿಹಾರಕ್ಕಾಗಿ ದೊಡ್ಡಣ್ಣ  ಕುಟುಂಬ ಸಮೇತರಾಗಿ ಮಹಾಲಕ್ಷ್ಮಿ ಲೇಔಟ್‌ನ ಆಂಜನೇಯ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ನಿನ್ನೆ ಶುಕ್ರವಾರ ಬೆಳಗ್ಗೆ ಕೆಲ ಕಿಡಿಗೇಡಿಗಳು ಹಿರಿಯ ನಟ ದೊಡ್ಡಣ್ಣ ಬಗ್ಗೆ ಎಂದು ಸೋಷಿಯಲ್ ಮೀಡಿಯಾದಲ್ಲಿ ಸುಳ್ಳು ಸುದ್ದಿ ಹಬ್ಬಿಸಿದ್ದರು. ಈ ಸುದ್ದಿ ಅಭಿಮಾನಿಗಳು ಹಾಗೂ ಆಪ್ತರಲ್ಲಿ ಆತಂಕ ಮೂಡಿಸಿತ್ತು. ಈ ಕುರಿತು...
ಬೆಂಗಳೂರುರಾಜ್ಯಸುದ್ದಿ

ಬೆಂಗಳೂರು ಅಭಿವೃದ್ಧಿ ಖಾತೆ ವಹಿಸಿಕೊಳ್ಳದ ಕೃಷ್ಣ ಬೈರೇಗೌಡ -ಕಹಳೆ ನ್ಯೂಸ್

ಬೆಂಗಳೂರು: ಪ್ರಮಾಣವಚನ ಸ್ವೀಕಾರ ಮಾಡಿ 10 ದಿನ ಕಳೆದರೂ ಸಚಿವ ಕೃಷ್ಣ ಬೈರೇಗೌಡ  ಇನ್ನೂ ಬೆಂಗಳೂರು ಅಭಿವೃದ್ಧಿ  ಖಾತೆ ಅಧಿಕಾರ ವಹಿಸಿಕೊಂಡಿಲ್ಲ. ಈ ಕುರಿತು ಪ್ರತಿಕ್ರಿಯಿಸಿದ ಅವರು, ಖಾತೆ ಜವಾಬ್ದಾರಿ ತೆಗೆದುಕೊಳ್ಳುವಾಗ ಕೆಲ ಸ್ಪಷ್ಟತೆ ಇರಬೇಕು ಎಂದಿದ್ದಾರೆ. ಖಾತೆ ಅಧಿಕಾರ ವಹಿಸಿಕೊಳ್ಳದ ಬಗ್ಗೆ ‘ಪಬ್ಲಿಕ್ ಟಿವಿ’ ಜೊತೆ ಮಾತನಾಡಿದ ಅವರು, ಖಾತೆ ವಿಚಾರಕ್ಕೆ ಕೆಲವು ಸ್ಪಷ್ಟತೆ ಬೇಕಿದೆ. ಖಾತೆ ಜವಾಬ್ದಾರಿ ತೆಗೆದುಕೊಳ್ಳುವಾಗ ಕೆಲ ಸ್ಪಷ್ಟತೆ ಇರಬೇಕು. ಜವಾಬ್ದಾರಿಗೆ ಸರಿಯಾಗಿ ನಿರ್ವಹಣೆ...
ಬೆಂಗಳೂರುರಾಜ್ಯಸುದ್ದಿ

ದಿನಕ್ಕೆ ಒಂದು ವಾಹನಕ್ಕೆ 200 ಲೀಟರ್‌ ಮಾತ್ರ: ಡೀಸೆಲ್‌ ಮಾರಾಟ ಮಿತಿಗೊಳಿಸಿದ ಕೇಂದ್ರ- ಕಹಳೆ ನ್ಯೂಸ್

ನವದೆಹಲಿ: ಡೀಸೆಲ್‌ (Diesel) ಮಾರಾಟಕ್ಕೆ ಕೇಂದ್ರ ಸರ್ಕಾರ ಮಿತಿ ಹೇರಿದೆ. ಪೆಟ್ರೋಲ್‌ ಬಂಕ್‌ಗಳಲ್ಲಿ ಒಂದು ವಾಹನಕ್ಕೆ ದಿನಕ್ಕೆ 200 ಲೀಟರ್‌ ಡೀಸೆಲ್‌ ಖರೀದಿಗೆ ಮಿತಿ ನಿಗದಿಪಡಿಸಲಾಗಿದೆ. ಇಂಧನ ಅಕ್ರಮ ದಾಸ್ತಾನು ಮತ್ತು ಕಾಳಸಂತೆಯಲ್ಲಿ ಮಾರಾಟವನ್ನು ತಡೆಯಲು ಈ ಕ್ರಮಕೈಗೊಳ್ಳಲಾಗಿದೆ ಎಂದು ಕೇಂದ್ರ ತಿಳಿಸಿದೆ. ವಾಣಿಜ್ಯ, ಕೈಗಾರಿಕಾ ಮತ್ತು ಸಾಂಸ್ಥಿಕ ಗ್ರಾಹಕರು ಇನ್ಮುಂದೆ ರಿಟೇಲ್‌ ಬಂಕ್‌ಗಳಲ್ಲಿ ಡೀಸೆಲ್‌ ಖರೀದಿಸುವಂತಿಲ್ಲ. ವಾಣಿಜ್ಯ ಉದ್ದೇಶಕ್ಕೆ ನಿಗದಿಪಡಿಸಿದ ಮಾರಾಟ ಕೇಂದ್ರಗಳಿಂದಲೇ ಇಂಧನ ಖರೀದಿಸಬೇಕು ಎಂದು ಸೂಚಿಸಿದೆ....
ಬೆಂಗಳೂರುರಾಜ್ಯಸುದ್ದಿ

ಬೆಂಗಳೂರು – ಚೆನ್ನೈ ಎಕ್ಸ್‌ಪ್ರೆಸ್‌ ವೇಯಲ್ಲಿ ಡಿವೈಡರ್‌ಗೆ ಕಾರು ಡಿಕ್ಕಿ; ಯುವತಿ ದುರ್ಮರಣ- ಕಹಳೆ ನ್ಯೂಸ್

ಬೆಂಗಳೂರು: ಡಿವೈಡರ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಯುವತಿ ಸಾವನ್ನಪ್ಪಿರುವ ಘಟನೆ ಬೆಂಗಳೂರು- ಚೆನ್ನೈ ಎಕ್ಸ್‌ಪ್ರೆಸ್‌ ವೇಯಲ್ಲಿ  ನಡೆದಿದೆ. ಹೊಸಕೋಟೆ ಸಮೀಪದ ದೊಡ್ಡ ಹುಲ್ಲೂರು ಬಳಿ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಬೆಂಜ್ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಯುವತಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಕಾರು ಚಾಲಕನ ನಿರ್ಲಕ್ಷ್ಯ ಹಾಗೂ ಬೇಜವಾಬ್ದಾರಿ ಚಾಲನೆಯೇ ಅಪಘಾತಕ್ಕೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ. ಅಪಘಾತದ ಬಳಿಕ ಕಾರು ಚಾಲಕ ಸ್ಥಳದಿಂದ ಪರಾರಿಯಾಗಿದ್ದು, ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ....
ಬೆಂಗಳೂರುರಾಜ್ಯಸುದ್ದಿ

ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು : ರೌಡಿಶೀಟರ್‌ ಕಾಲಿಗೆ ಗುಂಡೇಟು -ಕಹಳೆ ನ್ಯೂಸ್

ಬೆಂಗಳೂರು: ಬೆಳ್ಳಂಬೆಳಗ್ಗೆ ನಗರದಲ್ಲಿ ಗುಂಡಿನ ಸದ್ದು ಕೇಳಿಬಂದಿದೆ. ರೌಡಿಶೀಟರ್‌ ಕಾಲಿಗೆ ಪೊಲೀಸರು ಗುಂಡೇಟು ನೀಡಿದ್ದಾರೆ. ಜೀವ (19) ಗುಂಡೇಟು ತಿಂದ ಆರೋಪಿ. ಸಿಂಗೇನಾ ಅಗ್ರಹಾರದ ತೋಪಿನಲ್ಲಿ ಹೆಬ್ಬಗೋಡಿ ಪೊಲೀಸರು ಫೈರಿಂಗ್‌ ಮಾಡಿದ್ದಾರೆ. ಗಾಯಗೊಂಡಿರುವ ಆರೋಪಿಯನ್ನು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಿದ್ದಾರೆ. ಹೆಬ್ಬಗೋಡಿಯ ತಿರುಪಾಳ್ಯದಲ್ಲಿ ರೌಡಿಶೀಟರ್‌ ಜೀವ ವಾಸವಾಗಿದ್ದಾನೆ. ಕೊಲೆ, ಸುಲಿಗೆ, ದರೋಡೆ ಪ್ರಕರಣಗಳ ಪ್ರಮುಖ ಆರೋಪಿಯಾಗಿದ್ದಾನೆ. ಸಬ್‌ ಇನ್‌ಸ್ಪೆಕ್ಟರ್‌ ಅಯ್ಯಪ್ಪ ಅವರು ಆರೋಪಿ ಕಾಲಿಗೆ ಗುಂಡು ಹಾರಿಸಿದ್ದಾರೆ. ಕಳೆದ ವಾರ ಹೆಬ್ಬಗೋಡಿ...
ಬೆಂಗಳೂರುರಾಜ್ಯಸುದ್ದಿ

ಕಾಂಟ್ರಾಕ್ಟರ್ ಮನೆಯಲ್ಲಿ ಕಳ್ಳ ದಂಪತಿ ಕೈಚಳಕ : 25 ಲಕ್ಷ ಹಣ ಕದ್ದು ಎಸ್ಕೇಪ್ ಆಗುತ್ತಿದ್ದ ವೇಳೆ ಅರೆಸ್ಟ್- ಕಹಳೆ ನ್ಯೂಸ್

ಬೆಂಗಳೂರು: ಕೆಲಸಗಾರರಿಗೆ ಸಂಬಳ ನೀಡಲು ಮನೆಯಲ್ಲಿ ಇಟ್ಟಿದ್ದ 25 ಲಕ್ಷ ರೂಪಾಯಿ ನಗದು ಕಳ್ಳತನ ಮಾಡಿ ನೇಪಾಳಕ್ಕೆ ಎಸ್ಕೇಪ್ ಆಗಲು ಯತ್ನಿಸಿದ್ದ ನೇಪಾಳಿ ಮೂಲದ ದಂಪತಿಯನ್ನು ಅಮೃತಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ 25 ಲಕ್ಷ ರೂಪಾಯಿ ನಗದನ್ನು ವಶಕ್ಕೆ ಪಡೆಯಲಾಗಿದೆ. ನೇಪಾಳ ಮೂಲದ ಪವನ್ ಬಿಸ್ತಾ ಹಾಗೂ ಸೀತಾ ಬಿಸ್ತಾ ಬಂಧಿತ ಆರೋಪಿಗಳು. ಅಮೃತಹಳ್ಳಿಯ ಕಾಂಟ್ರಾಕ್ಟರ್ ಒಬ್ಬರ ಮನೆಯಲ್ಲಿ ಮನೆ ಕೆಲಸಕ್ಕೆ ಸೇರಿದ್ದ ದಂಪತಿ, ಕೇವಲ ಒಂದು ತಿಂಗಳಲ್ಲೇ ಮನೆಯ ಮಾಲೀಕರು...
ಬೆಂಗಳೂರುರಾಜ್ಯಸುದ್ದಿ

ಡಿಕೆ ಸರ್ಕಾರದಲ್ಲಿ ಸಂಪುಟ ಕಸರತ್ತು : ಹೈಕಮಾಂಡ್ ಭೇಟಿಗಾಗಿ ದೆಹಲಿಗೆ ತೆರಳಿದ ಸಿಎಂ – ಕಹಳೆ ನ್ಯೂಸ್

ಬೆಂಗಳೂರು: ಕಾಂಗ್ರೆಸ್ ಸಚಿವರ ಖಾತೆ ಖ್ಯಾತೆ ಬೆನ್ನಲ್ಲೇ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೈಕಮಾಂಡ್ ಭೇಟಿಗಾಗಿ ಎರಡು ದಿನಗಳ ದೆಹಲಿಗೆ (Delhi) ತೆರಳಿದ್ದಾರೆ. ಖಾತೆ ಕುರಿತಂತೆ ಕೆಲವು ಸಚಿವರ ಅಸಮಾಧಾನದ ನಡುವೆಯೂ ಸಂಪುಟ ವಿಸ್ತರಣೆ ಮತ್ತು ಖಾತೆ ಹಂಚಿಕೆ ವಿಷಯಗಳ ಕುರಿತು ಹೈಕಮಾಂಡ್ ಜೊತೆ ಚರ್ಚಿಸುವ ಸಾಧ್ಯತೆ ಇದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.ಮುಖ್ಯಮಂತ್ರಿಯಾದ ಬಳಿಕ ಇದೇ ಮೊದಲ ಬಾರಿಗೆ ದೆಹಲಿಗೆ ಡಿಕೆ ಶಿವಕುಮಾರ್ ದೆಹಲಿಗೆ ಭೇಟಿ ನೀಡುತ್ತಿದ್ದಾರೆ. ನೀತಿ ಆಯೋಗದ...
1 2 3 229
Page 1 of 229