ಮುಂಬೈನ ಅಟಲ್ ಸೇತು ಮತ್ತು ದೇಶದ ಮೂಲಸೌಕರ್ಯ ಅಭಿವೃದ್ಧಿ ಹೊಗಳಿದ ರಶ್ಮಿಕಾ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ನಿಂಬಾಳ್ಕರ್ ಕಿಡಿ – ಕಹಳೆ ನ್ಯೂಸ್
ಉತ್ತರ ಕನ್ನಡ : ಮುಂಬೈನ ಅಟಲ್ ಸೇತು ಮತ್ತು ದೇಶದ ಮೂಲಸೌಕರ್ಯ ಅಭಿವೃದ್ಧಿ ಬಗ್ಗೆ ಮಾತನಾಡಿದ್ದ ನಟಿ ರಶ್ಮಿಕಾ ಮಂದಣ್ಣ ಅವರನ್ನ ಮಾಜಿ ಶಾಸಕಿ ಹಾಗೂ ಉತ್ತರ ಕನ್ನಡ ಜಿಲ್ಲೆಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ನಿಂಬಾಳ್ಕರ್ ಟೀಕಿಸಿದ್ದಾರೆ. ಬೂಟು ನೆಕ್ಕುವುದನ್ನು ನಿಲ್ಲಿಸಿ, ಇದು ನಿಮ್ಮನ್ನು ಮೆಗಾಸ್ಟಾರ್ ಮಾಡಲು ಸಹಾಯ ಮಾಡಲ್ಲ ಎಂದು ಕಿಡಿಕಾರಿದ್ದಾರೆ. ನಟಿ ರಶ್ಮಿಕಾ ಮಂದಣ್ಣ ಅವರು ಇತ್ತೀಚೆಗೆ ದೇಶದ ಅತ್ಯಂತ ಉದ್ದದ ಸಮುದ್ರ ಸೇತುವೆ...







