Wednesday, March 18, 2026

ಬೆಂಗಳೂರು

ಕ್ರೈಮ್ದಕ್ಷಿಣ ಕನ್ನಡಬೆಂಗಳೂರುಮಂಗಳೂರುರಾಜಕೀಯರಾಜ್ಯಸುದ್ದಿಹಾಸನ

ಅಶ್ಲೀಲ ವಿಡಿಯೋ ಕೇಸ್ ​: ಇಂದು ಮಂಗಳೂರು ಏರ್​ಪೋರ್ಟ್​ಗೆ ಪ್ರಜ್ವಲ್ ಆಗಮನ ಸಾಧ್ಯತೆ – ಕಹಳೆ ನ್ಯೂಸ್

ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ಆರೋಪ ಪ್ರಕರಣದ ತನಿಖೆ ಚುರುಕುಗೊಂಡಿದೆ. ಪ್ರಜ್ವಲ್ ಬಂಧನಕ್ಕೆ ಸದ್ಯ ಲುಕ್​ಔಟ್​ ನೋಟಿಸ್ ಜಾರಿ ಮಾಡಲಾಗಿದೆ. ಹೀಗಾಗಿ ಇಂದು ಭಾರತಕ್ಕೆ ಪ್ರಜ್ವಲ್ ರೇವಣ್ಣ ಆಗಮನ ಸಾಧ್ಯತೆ ಇದೆ ಎನ್ನಲಾಗುತ್ತಿದ್ದು, ಯಾವುದೇ ಏರ್​ಪೋರ್ಟ್​ಗೆ ಬಂದರೂ ಅಲ್ಲೇ ಬಂಧನ ಪ್ರಕ್ರಿಯೆ ನಡೆಯಲಿದೆ....
ಕ್ರೈಮ್ಬೆಂಗಳೂರುರಾಜಕೀಯರಾಜ್ಯಸುದ್ದಿಹಾಸನ

ಮಹಿಳೆಯ ಕಿಡ್ನಾಪ್‌ ಕೇಸಲ್ಲಿ ಮಾಜಿ ಸಚಿವ ಹೆಚ್‌.ಡಿ ರೇವಣ್ಣ ಅರೆಸ್ಟ್..!! – ಕಹಳೆ ನ್ಯೂಸ್

ಬೆಂಗಳೂರು: ಮಹಿಳೆಯ ಅಪಹರಣ (Woman Kidnape Case) ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ (SIT) ಅಧಿಕಾರಿಗಳು ಮಾಜಿ ಸಚಿವ ಹೆಚ್‌.ಡಿ ರೇವಣ್ಣ (HD Revanna) ಅವರನ್ನು ‌ಬಂಧಿಸಿದ್ದಾರೆ. ಪ್ರಕರಣ ಸಂಬಂಧ ರೇವಣ್ಣ ಅವರು ನಿರೀಕ್ಷಣಾ ಜಾಮೀನು ಪಡೆಯಲು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮೊರೆ ಹೋದರು. ಇಂದು ವಾದ- ಪ್ರತಿವಾದ ಆಲಿಸಿದ ಕೋರ್ಟ್‌ ಜಾಮೀನು ಅರ್ಜಿ ನಿರಾಕರಿಸಿತು. ಈ ಮೂಲಕ ರೇವಣ್ಣ ಅವರಿಗೆ ರಿಲೀಫ್‌ ಸಿಕ್ಕಿಲ್ಲ. ಇತ್ತ ಅರ್ಜಿ ವಜಾ ಆಗುತ್ತಿದ್ದಂತೆಯೇ ಎಸ್‌ಐಟಿ...
ಉಡುಪಿಕಾರ್ಕಳಬೆಂಗಳೂರುರಾಜ್ಯಸುದ್ದಿ

ರಾಜ್ಯಾದ್ಯಂತ ಭಾರಿ ಚರ್ಚೆಗೆ ಕಾರಣವಾಗಿದ್ದ ಕಾರ್ಕಳದ ‘ಪರಶುರಾಮ್ ಥೀಂ ಪಾರ್ಕ್’ ವಿಚಾರದಲ್ಲಿ ಬಿಗ್ ಡೆವಲಪ್ಮೆಂಟ್..!‌ ; ಮುಂದಿನ ನಾಲ್ಕು ತಿಂಗಳ ಒಳಗಾಗಿ ಕಾಮಗಾರಿ ಮುಗಿಸಲು ಕಾಂಗ್ರೆಸ್ ಸರಕಾರ, ಉಡುಪಿ ನಿರ್ಮಿತಿ ಕೇಂದ್ರಕ್ಕೆ ಹೈಕೋರ್ಟ್ ತಾಕೀತು..!! – ಕಹಳೆ ನ್ಯೂಸ್

ಕಾರ್ಕಳದ ಅಭಿವೃದ್ಧಿಯ ಕೈಗನ್ನಡಿಯಾಗಿರುವ ‘ಪರಶುರಾಮ್ ಥೀಂ ಪಾರ್ಕ್’ ಬಗ್ಗೆ ಹರಡಿದ್ದ ಎಲ್ಲ ಗೊಂದಲಕ್ಕೆ ತೆರೆ ಬೀಳುವ ಸಮಯ ಸನ್ನಿಹಿತವಾಗಿದೆ. ‘ಪರಶುರಾಮ್ ಥೀಂ ಪಾರ್ಕ್’ ವಿವಾದಕ್ಕೆ ಸಂಬಂಧಪಟ್ಟಂತೆ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಮುಂದಿನ ನಾಲ್ಕು ತಿಂಗಳ ಒಳಗಾಗಿ ಕಾಮಗಾರಿ ಪೂರ್ಣಗೊಳಿಸುವಂತೆ ಉಡುಪಿ ನಿರ್ಮಿತಿ ಕೇಂದ್ರಕ್ಕೆ ‘ಹೈ’ ನಿರ್ದೇಶನ ನೀಡಿದೆ. ಪರಶುರಾಮನ ಪ್ರತಿಮೆ ಕಂಚಿನದ್ದಲ್ಲ ಅದು ನಕಲಿ ಎಂದು ಕೆಲವರು ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಸಹಿತ ಚರ್ಚೆ ಮಾಡಿದ್ದರು. ಕಾರ್ಕಳದ ಅಭಿವೃದ್ಧಿಯನ್ನು...
ಬೆಂಗಳೂರುರಾಜಕೀಯರಾಜ್ಯಸುದ್ದಿ

6 ಪದವೀಧರ, ಶಿಕ್ಷಕರ ಕ್ಷೇತ್ರದಿಂದ ವಿಧಾನಪರಿಷತ್‌ಗೆ ಚುನಾವಣೆ ; ಜೂ.3 ಕ್ಕೆ ಮತದಾನ – ಕಹಳೆ ನ್ಯೂಸ್

ಬೆಂಗಳೂರು: 6 ಪದವೀಧರ, ಶಿಕ್ಷಕರ ಕ್ಷೇತ್ರದಿಂದ ವಿಧಾನಪರಿಷತ್‌ಗೆ (Karnataka Legislative Council ) ಚುನಾವಣಾ ದಿನಾಂಕವನ್ನು ಚುನಾವಣಾ ಆಯೋಗ ಪ್ರಕಟಿಸಿದೆ. ಜೂ.3 ಕ್ಕೆ ಮತದಾನ ನಡೆಯಲಿದ್ದು, 6 ರಂದು ಮತ ಎಣಿಕೆ ನಡೆಯಲಿದೆ. ಯಾವ್ಯಾವ ಕ್ಷೇತ್ರಗಳಿಗೆ ಚುನಾವಣೆ? ಬೆಂಗಳೂರು ಪದವೀಧರ ಕ್ಷೇತ್ರ, ವಾಯುವ್ಯ ಪದವೀಧರ ಕ್ಷೇತ್ರ, ನೈರುತ್ಯ ಪದವೀಧರ ಕ್ಷೇತ್ರ, ದಕ್ಷಿಣ ಶಿಕ್ಷಕರ ಕ್ಷೇತ್ರ, ನೈರುತ್ಯ ಶಿಕ್ಷಕರ ಕ್ಷೇತ್ರ, ಆಗ್ನೇಯ ಶಿಕ್ಷಕರ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಚಂದ್ರಶೇಖರ್‌ ಬಿ.ಪಾಟೀಲ್‌, ಆಯನೂರು ಮಂಜುನಾಥ್‌,...
ಬೆಂಗಳೂರುಸುದ್ದಿ

ಮೇ 11, 12 ರಂದು ಶ್ರೀ ಎಡನೀರು ಮಠದ ಬೆಂಗಳೂರಿನ ಕೋರಮಂಗಲದ ಶ್ರೀಕೃಷ್ಣ ದೇವಾಲಯಲ್ಲಿ 30 ನೇ ಪ್ರತಿಷ್ಠಾಪನಾ ವಾರ್ಷಿಕೋತ್ಸವ – ಕಹಳೆ ನ್ಯೂಸ್

ಬೆಂಗಳೂರು: ಜಗದ್ಗುರು ಶ್ರೀ ಶಂಕರಾಚಾರ್ಯ ಸಂಸ್ಥಾನ ಶ್ರೀ ಎಡನೀರು ಮಠಾಧೀಶರಾದ ಪರಮಪೂಜ್ಯ ಶ್ರೀ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರ ದಿವ್ಯ ಉಪಸ್ಥಿತಿ ಹಾಗೂ ಆಶೀರ್ವಾದದೊಂದಿಗೆ ಶ್ರೀ ಕ್ಷೇತ್ರದ ತಂತ್ರಿವರ್ಯರಾದ ಬ್ರಹ್ಮಶ್ರೀ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳವರ ತಾಂತ್ರಿಕತ್ವ ಮತ್ತು ಮಾರ್ಗದರ್ಶನದಲ್ಲಿ ಶ್ರೀ ಎಡನೀರು ಮಠದ ಬೆಂಗಳೂರಿನ ಕೋರಮಂಗಲದ  ಶ್ರೀ ಕೃಷ್ಣ ದೇವಾಲಯದಲ್ಲಿ ಮೇ.11 ಮತ್ತು ಮೇ.12ರಂದು 30ನೇ ಪ್ರತಿಷ್ಠಾಪನಾ ವಾರ್ಷಿಕೋತ್ಸವ ಕಾರ್ಯಕ್ರಮ ನಡೆಯಲಿದೆ. ಮೇ.11ರಂದು ಪ್ರಾತಃ 7:00 ರಿಂದ :...
ಕ್ರೈಮ್ಬೆಂಗಳೂರುಸುದ್ದಿಹಾಸನ

ಸಂಸದ ಪ್ರಜ್ವಲ್ ರೇವಣ್ಣಗೆ ಲುಕೌಟ್ ನೋಟಿಸ್ ಜಾರಿ – ಕಹಳೆ ನ್ಯೂಸ್

ಬೆಂಗಳೂರು: ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಸಂಸದ ಪ್ರಜ್ವಲ್ ರೇವಣ್ಣಗೆ ಲುಕೌಟ್ ನೋಟಿಸ್ ಜಾರಿ ಮಾಡಲಾಗಿದೆ. ವಿಮಾನ ನಿಲ್ದಾಣದ ಇಮಿಗ್ರೇಷನ್ ಲುಕೌಟ್ ನೋಟಿಸ್ ಸರ್ವ್ ಮಾಡಲಾಗಿದೆ. ಎಲ್ಲಾ ವಿಮಾನ ನಿಲ್ದಾಣದ ಇಮಿಗ್ರೇಷನ್‍ ವಿಭಾಗಕ್ಕೆ ಎಸ್‍ಐಟಿ ಅಧಿಕಾರಿಗಳು ಲುಕೌಟ್ ನೋಟಿಸ್ ತಲುಪಿಸಿದ್ದಾರೆ. ಈ ಮೂಲಕ ಲೊಕೇಟ್ ಆದ ಕೂಡಲೇ ವಶಕ್ಕೆ ಪಡೆಯಲು ಸೂಚನೆ ನೀಡಿದ್ದಾರೆ. ಸಮಯ ಕೇಳಿದ್ದ ಪ್ರಜ್ವಲ್: ವಿಚಾರಣೆಗೆ ಹಾಜರಾಗಲು 7 ದಿನ ಅವಕಾಶ ನೀಡುವಂತೆ ಕೋರಿ ಪ್ರಜ್ವಲ್ ರೇವಣ್ಣ...
ಕ್ರೈಮ್ಬೆಂಗಳೂರುರಾಜ್ಯಸುದ್ದಿಹಾಸನ

ತಕ್ಷಣವೇ ವಿಚಾರಣೆಗೆ ಹಾಜರಾಗಿ- ಪ್ರಜ್ವಲ್, ಹೆಚ್.ಡಿ ರೇವಣ್ಣಗೆ ಎಸ್‍ಐಟಿ ನೋಟಿಸ್ – ಕಹಳೆ ನ್ಯೂಸ್

ಬೆಂಗಳೂರು: ದೇಶಾದ್ಯಂತ ಹಲ್‍ಚಲ್ ಎಬ್ಬಿಸಿರುವ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಪೆನ್ ಡ್ರೈವ್ ಪ್ರಕರಣವು ಇದೀಗ ಎಸ್‍ಐಟಿ  ಅಂಗಳದಲ್ಲಿದೆ. ಸದ್ಯ ಪ್ರಕರಣದ ತನಿಖೆಗೆ ಇಳಿದಿರುವ ವಿಶೇಷ ತನಿಖಾ ತಂಡದ  (SIT) ಅಧಿಕಾರಿಗಳು ಪ್ರಜ್ವಲ್ ರೇವಣ್ಣ, ರೇವಣ್ಣಗೆ ಶಾಕ್ ಕೊಟ್ಟಿದ್ದಾರೆ. ಅಪ್ಪ- ಮಗನಿಗೆ ನೋಟಿಸ್ ಕೊಟ್ಟಿರುವ ಅಧಿಕಾರಿಗಳು ಕಾನೂನು ಕ್ರಮದ ಎಚ್ಚರಿಕೆಯನ್ನು ನೀಡಿದ್ದಾರೆ. ನೋಟಿಸ್ ಸಿಕ್ಕ ತಕ್ಷಣ ಹಾಜರಾಗಿ ವಿಚಾರಣೆಗೆ ಸಹಕರಿಸಬೇಕು. ಇಲ್ಲದೇ ಹೋದರೆ ಕಾನೂನು ಕ್ರಮವನ್ನು ಎದುರಿಸಬೇಕಾಗುತ್ತದೆ ಎಂದು ನೋಟಿಸ್‍ನಲ್ಲಿಯೇ...
ದಕ್ಷಿಣ ಕನ್ನಡಬೆಂಗಳೂರುರಾಜಕೀಯಸುದ್ದಿ

ಇಹ ಲೋಕ ತ್ಯಜಿಸಿದ ಬಿಜೆಪಿ ಸಂಸದ ಶ್ರೀನಿವಾಸ ಪ್ರಸಾದ್ –ಕಹಳೆ ನ್ಯೂಸ್

ಬೆಂಗಳೂರು:(ಎ.29) ಚಾಮರಾಜನಗರ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಶ್ರೀನಿವಾಸ ಪ್ರಸಾದ್ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಬಹು ಅಂಗಾAಗ ಸಮಸ್ಯೆಗಳಿಂದ ಬಳಲುತ್ತಿದ್ದ ಶ್ರೀನಿವಾಸ ಪ್ರಸಾದ್ ಅವರು ಮೂರು ದಿನಗಳ ಹಿಂದೆ ಬೆಂಗಳೂರಿನ ಓಲ್ಡ್ ಏರ್‌ಪೋರ್ಟ್ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಮಧ್ಯರಾತ್ರಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಶ್ರೀನಿವಾಸ ಪ್ರಸಾದ್ ಅವರು ಮೈಸೂರು, ಚಾಮರಾಜನಗರ ಭಾಗದ ಪ್ರಭಾವಿ ದಲಿತ ಮುಖಂಡರಾಗಿದ್ದರು. ಸ್ವಾಭಿಮಾನಿ ರಾಜಕಾರಣಿ ಎಂದೇ ಹೆಸರಾಗಿದ್ದರು. ಚಾಮರಾಜನಗರ...
1 122 123 124 125 126 213
Page 124 of 213