ಹುಣಸೆ, ಹಲಸು, ನೇರಳೆಗಾಗಿ ರಾಷ್ಟ್ರೀಯ ಮಂಡಳಿ ರಚಿಸಲು ಕೇಂದ್ರ ಕೃಷಿ ಸಚಿವರನ್ನು ಖುದ್ದು ಭೇಟಿಯಾಗಿ ಮನವಿ ಸಲ್ಲಿಸಿದ ಮಾಜಿ ಪ್ರಧಾನಿ ಹೆಚ್‌ಡಿಡಿ..!! – ಕಹಳೆ ನ್ಯೂಸ್
ನವದೆಹಲಿ: ಮಾಜಿ ಪ್ರಧಾನಿ ಹಾಗೂ ರಾಜ್ಯಸಭಾ ಸದಸ್ಯ ಹೆಚ್.ಡಿ.ದೇವೇಗೌಡರು ಶುಕ್ರವಾರ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಖಾತೆ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಪತ್ರ ಬರೆದು, ಹುಣಸೆ, ಹಲಸು ಮತ್ತು ನೇರಳೆ ಮುಂತಾದ ಪೌಷ್ಟಿಕಾಂಶಯುಕ್ತ ಹಣ್ಣಿನ ಬೆಳೆಗಳಿಗಾಗಿ ಪ್ರತ್ಯೇಕವಾದ ರಾಷ್ಟ್ರೀಯ ಮಂಡಳಿ ಸ್ಥಾಪಿಸುವ ಪ್ರಸ್ತಾಪ ಮಾಡಿದ್ದಾರೆ. ಸಂಸತ್ ಭವನದಲ್ಲಿ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರೊಂದಿಗೆ ಕೃಷಿ ಸಚಿವರನ್ನು ಭೇಟಿಯಾದ ಮಾಜಿ ಪ್ರಧಾನಿ...







