ಜೂನ್ 3 ನೇ ವಾರ ರಾಜ್ಯ ಸಚಿವ ಸಂಪುಟ ಪುನಾರಚನೆ! – ಜೂನ್.16 ರಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ರಾಜ್ಯಕ್ಕೆ ; ಆರಗ ಜ್ಞಾನೇಂದ್ರ-ಸುನೀಲ್ ಕುಮಾರ್ ಖಾತೆ ಅದಲು-ಬದಲು?- ಕಹಳೆ ನ್ಯೂಸ್
ಬೆಂಗಳೂರು : ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಸಿಹಿಸುದ್ದಿಯೊಂದು ಸಿಕ್ಕಿದ್ದು, ರಾಜ್ಯಸಭೆ, ವಿಧಾನಪರಿಷತ್ ಚುನಾವಣೆ ಮುಗಿದ ಬೆನ್ನಲ್ಲೇ ರಾಜ್ಯ ಸಚಿವ ಸಂಪುಟ ಪುನಾರಚನೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಚುನಾವಣಾ ನೀತಿ ಸಂಹಿತೆ ಸಡಿಲಗೊಂಡ ಬಳಿಕ ಜೂನ್ ಮೂರನೇ ವಾರದಲ್ಲಿ ರಾಜ್ಯ ಸಚಿವ ಸಂಪುಟ ಪುನಾರಚನೆ ನಡೆಯಲಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. ಸಚಿವ ಸ್ಥಾನಕ್ಕೆ ಸಾಕಷ್ಟು ಆಕಾಂಕ್ಷಿಗಳಿದ್ದು, ಈ ಬಾರಿಯ ಸಚಿವ ಸಂಪುಟಕ್ಕೆ ಹೊಸ ಮುಖಗಳಿಗೆ ಅವಕಾಶಗಳು ಸಿಗಲಿದೆ ಎಂದು ಮೂಲಗಳು ತಿಳಿಸಿವೆ....







