Tuesday, March 10, 2026

ಬೆಂಗಳೂರು

ಬೆಂಗಳೂರು

ಬಸವಕಲ್ಯಾಣ ಚುನಾವಣೆ, ವಿಜಯೇಂದ್ರ ಅಥವಾ ಲಕ್ಷ್ಮಣ ಸವದಿ ಇಬ್ಬರ ಪೈಕಿ ಯಾರಾದರೂ ಒಬ್ಬರು ಕಣಕ್ಕೆ ; ಲಕ್ಷ್ಮಣ ಸವದಿ-ಕಹಳೆ ನ್ಯೂಸ್

ಬೆಂಗಳೂರು : ಡಿಸಿಎಂ ಲಕ್ಷ್ಮಣ ಸವದಿ ಅವರು ನಾವು 18 ಟಿಕೆಟ್ ಆಕಾಂಕ್ಷಿಗಳೊಂದಿಗೆ ಸಭೆ ನಡೆಸಿದ್ದು, ಚುನಾವಣೆಯಲ್ಲಿ ಎಲ್ಲರೂ ಕೂಡಾ ಒಗ್ಗಟ್ಟಾಗಿ ಕೆಲಸ ಮಾಡುವುದಾಗಿ ಭರವಸೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ. ಚುನಾವಣೆಯ ದಿನಾಂಕ ಪ್ರಕಟವಾದ ಬಳಿಕ ಪಕ್ಷದ ಅಭ್ಯರ್ಥಿಗಳ ಪಟ್ಟಿ ಮಾಡಿ ಬಿಜೆಪಿ ಹೈಕಮಾಂಡ್‍ಗೆ ರವಾನೆ ಮಾಡಲಿದೆ ಎಂದು ಹೇಳಿದ್ದಾರೆ. ಚುನಾವಣಾ ಪ್ರಚಾರ ಕಾರ್ಯ ಶುಕ್ರವಾರದಿಂದ ಪ್ರಾರಂಭವಾಗಲಿದೆ.ಚುನಾವಣಾ ದಿನಾಂಕ ಪ್ರಕಟಿಸುವ ಮುನ್ನವೇ ಕ್ಷೇತ್ರದ ಎಲ್ಲಾ ಮತದಾರರನ್ನು ಭೇಟಿ ಮಾಡಬೇಕು ಎಂದಿದ್ದಾರೆ....
ಬೆಂಗಳೂರು

ಸಚಿವ ಸುಧಾಕರ್ ಆಪ್ತ ಕಾರ್ಯದರ್ಶಿಗೆ ಎಚ್ಚರಿಕೆ ನೀಡಿದ ಶಾಸಕ ರೇಣುಕಾಚಾರ್ಯ-ಕಹಳೆ ನ್ಯೂಸ್

ಬೆಂಗಳೂರು : ಹೊನ್ನಾಳಿ ಶಾಸಕ ರೇಣುಕಾಚಾರ್ಯ ದೂರವಾಣಿ ಮೂಲಕ ಆರೋಗ್ಯ ಸಚಿವ.ಡಾ. ಸುಧಾಕರ್ ಅವರು ತಮ್ಮ ಕ್ಚೇತ್ರದ ಯಾವುದೇ ಕೆಲಸಗಳನ್ನು ಮಾಡುತ್ತಿಲ್ಲ ಎಂದು ಅವರ ಆಪ್ತ ಕಾರ್ಯದರ್ಶಿಗೆ ಧಮಕಿ ಹಾಕಿದ್ದಾರೆಂದು ವರದಿಯಾಗಿದೆ. ಈ ಕುರಿತು ಸಚಿವ ಸುಧಾಕರ್ ಅವರ ಆಪ್ತ ಕಾರ್ಯದರ್ಶಿಗೆ ದೂರವಾಣಿ ಕರೆ ಮಾಡಿ ಮಾತನಾಡಿದ ರೇಣುಕಾಚಾರ್ಯ, ಹತ್ತಾರು ಬಾರಿ ಭೇಟಿ ಮಾಡಿದರು ನಿಮ್ಮ ಸಚಿವರು ಕೆಲಸ ಮಾಡುತ್ತಿಲ್ಲ. ಶುಕ್ರವಾರ ಮಧ್ಯಾಹ್ನದ ಒಳಗೆ ನನ್ನ ಕೆಲಸ ಆಗದಿದ್ದರೆ, ಇನ್ನೊಂದು...
ಬೆಂಗಳೂರು

ಕಾಂಗ್ರೆಸ್ ಶಾಸಕಾಂಗ ಪಕ್ಷ ಸೇರ್ಪಡೆ ಬದಲಿಗೆ ಬಾಹ್ಯ ಬೆಂಬಲ; ಕಾಂಗ್ರೆಸ್ ಸೇರ್ಪಡೆಯಿಂದ ಹಿಂದೆ ಸರಿದ ಶರತ್ ಬಚ್ಚೇಗೌಡ-ಕಹಳೆ ನ್ಯೂಸ್

ಬೆಂಗಳೂರು : ಹೊಸಕೋಟೆ ಪಕ್ಷೇತರ ಶಾಸಕ ಶರತ್ ಬಚ್ಚೇಗೌಡ ಅವರು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂಬುದಕ್ಕೆ ಇಂದು ತೆರೆ ಬಿದ್ದಿದೆ. ಅವರು ಪಕ್ಷಕ್ಕೆ ಸೇರ್ಪಡೆಯಾಗುವುದಕ್ಕೆ ಬದಲಾಗಿ ಕಾಂಗ್ರೆಸ್‍ನ ಬೆಂಬಲ ಪಡೆದುಕೊಂಡಿದ್ದಾರೆ. ನಿಮ್ಮ ಶಾಸಕರು ಈಗಲೂ ನಾನು ಪಕ್ಷೇತರವಾಗಿಯೇ ಉಳಿತೀನಿ ಅಂತಿದ್ದಾರೆ. ಆದರೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಬೆಂಬಲ ಕೋರಿದ್ದಾರೆ, ನಾವು ಬೆಂಬಲ ನೀಡ್ತೇವೆ. ಈಗ ನಿಮ್ಮನ್ನೆಲ್ಲ ಪಕ್ಷಕ್ಕೆ ಸೇರಿಸಿಕೊಳ್ಳಲು ಏನೆಲ್ಲಾ ಪಗಡೆ ಆಡಿದ್ದೀವಿ ಅಂತ ನನಗೆ ಹಾಗೂ ಸಿ.ಎಂ. ಲಿಂಗಪ್ಪನವರಿಗೆ ಗೊತ್ತು....
ಬೆಂಗಳೂರು

ಬಿಜೆಪಿಯ ಮಂಗಳೂರು ಮುಖ್ಯ ವಕ್ತಾರರಾಗಿ ಗಣೇಶ್ ಕಾರ್ಣಿಕ್, ಬೆಂಗಳೂರು ವಕ್ತಾರರಾಗಿ ನಟ ಜಗ್ಗೇಶ್ ನೇಮಕ-ಕಹಳೆ ನ್ಯೂಸ್

ಬೆಂಗಳೂರು : ಕರ್ನಾಟಕದ ಭಾರತೀಯ ಜನತಾ ಪಕ್ಷ(ಬಿಜೆಪಿ) ಘಟಕ ಹೊಸ ವಕ್ತಾರರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದು ಮಂಗಳೂರು ವಿಭಾಗದ ಮುಖ್ಯ ವಕ್ತಾರರಾಗಿ ಕ್ಯಾ. ಗಣೇಶ್ ಕಾರ್ಣಿಕ್ ಅವರು ಮತ್ತು ಬೆಂಗಳೂರು ವಿಭಾಗದ ವಕ್ತಾರರಾಗಿ ನಟ ಜಗ್ಗೇಶ್ ಅವರು ನೇಮಕಗೊಂಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ನವರಸ ನಾಯಕ ಜಗ್ಗೇಶ್ ಅವರು, ''ನನಗೆ ರಾಜ್ಯ ಭಾಜಪ ವಕ್ತಾರನಾಗಿ ನೇಮಸಿದ ಪಕ್ಷದ ಹಿರಿಯರಿಗೆ ಧನ್ಯವಾದ. ಕಾಯವಾಚಮನ ಶುದ್ಧಾತ್ಮನಾಗಿ ಕಾಯಕಮಾಡುವೆ'' ಎಂದು ತಿಳಿಸಿದ್ದಾರೆ....
ಬೆಂಗಳೂರು

ಸಂಸದರ ಮತ್ತು ಸಚಿವರ ಐಶಾರಾಮಿ ಕಾರು ಖರೀದಿಗೆ ಅನುದಾನದಲ್ಲಿ ಹೆಚ್ಚಳ-ಕಹಳೆ ನ್ಯೂಸ್

ಬೆಂಗಳೂರು : ಸರಕಾರ ಸಂಸದರು ಮತ್ತು ಸಚಿವರ ಕಾರು ಖರೀದಿ ದರವನ್ನು ಹೆಚ್ಚಿಸಿದೆ. ಹೊಸ ಕಾರು ಖರೀದಿಗೆ 23 ಲಕ್ಷ ಮೊತ್ತ ನೀಡುವುದಕ್ಕೆ ಸರ್ಕಾರ ಸಮ್ಮತಿ ನೀಡಿದ್ದು, ಕಾರು ಖರೀದಿಗೆ ಹೆಚ್ಚು ಮೊತ್ತವನ್ನು ನೀಡಬೇಕೆಂಬ ಸಂಸದರ, ಸಚಿವರ ಬೇಡಿಕೆಯನ್ನು ಸ್ವೀಕರಿಸಿ ಮೊತ್ತವನ್ನು ಹೆಚ್ಚಳಗೊಳಿಸಲಾಗಿದೆ. ಈ ಹಿಂದೆ 22 ಲಕ್ಷರೂ.ವನ್ನು ನೀಡಲಾಗುತ್ತಿತ್ತು. ಲಾಕ್ ಡೌನ್ ಬಳಿಕ ಜನರ ಬದುಕು ಸಂಕಷ್ಟದಲ್ಲಿದೆ. ನಿರಂತರ ಅಗತ್ಯ ವಸ್ತುಗಳ ಬೆಲೆಯೇರಿಕೆಯಿಂದ ಜನರು ಕಂಗೆಟ್ಟಿದ್ದು, ಪೆಟ್ರೋಲ್ ಡಿಸೇಲ್...
ಬೆಂಗಳೂರುಸುದ್ದಿ

ಸಚಿವ ಕೋಟ‌ ಶ್ರೀನಿವಾಸ ಪೂಜಾರಿ ಕಾರಿಗೆ ಕೆ.ಎಸ್.ಆರ್.ಟಿ. ಬಸ್ ಡಿಕ್ಕಿ ; ಸಚಿವರಿಗೆ ಹಾಗೂ ಚಾಲಕನಿಗೆ ಸಣ್ಣ ಪುಟ್ಟ ಗಾಯ – ಕಹಳೆ ನ್ಯೂಸ್

ಬೆಂಗಳೂರು: ಮುಜರಾಯಿ ಮತ್ತು ಹಿಂದುಳಿದ ವರ್ಗಗಳ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರು ಸಂಚರಿಸುತ್ತಿದ್ದ ಕಾರಿಗೆ ಕೆಎಸ್ಆರ್ ಟಿಸಿ‌ಬಸ್ ಢಿಕ್ಕಿ ಹೊಡೆದ ಘಟನೆ ಬೆಂಗಳೂರು ಹೊರವಲಯದ ನೈಸ್ ರಸ್ತೆಯಲ್ಲಿ ನಡೆದಿದೆ. ಪೆಟ್ರೋಲ್ ತುಂಬಿಸಿಕೊಂಡು ಹಿಂದಿರುಗುತ್ತಿದ್ದ ವೇಳೆಯಲ್ಲಿ ಕಾರಿಗೆ ಕೆಎಸ್ಆರ್ ಟಿಸಿ ಬಸ್ ಡಿಕ್ಕಿ ಹೊಡೆದಿದೆ. ಘಟನೆಯಿಂದ ಶ್ರೀನಿವಾಸ ಪೂಜಾರಿ ಹಾಗೂ ಕಾರು ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಪಾಯದಿಂದ ಪಾರಾಗಿದ್ದಾರೆ. ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರುಹಾನಿಗೊಳಗಾಗಿದ್ದು, ಕುಂಬಳಗೋಡು ಪೊಲೀಸ್ ಠಾಣೆಯಲ್ಲಿ...
ಬೆಂಗಳೂರು

ಮೆಡಿಕಲ್ ಕಾಲೇಜು ಮಾಲಿಕರ ಬಳಿ ಬರೋಬರಿ 81 ಕಿಲೋ ಚಿನ್ನ ಪತ್ತೆ-ಕಹಳೆ ನ್ಯೂಸ್

ಬೆಂಗಳೂರು : ಕೇರಳ ಮತ್ತು ಕರ್ನಾಟಕದ ಪ್ರತಿಷ್ಠಿತ ಆಸ್ವತ್ರೆ ಹಾಗೂ ಮೆಡಿಕಲ್ ಕಾಲೇಜಿನಲ್ಲಿ ಆದಾಯ ತೆರಿಗೆ ಅಧಿಕಾರಿಗಳು ನಡೆಸಿದ ದಾಳಿ ವೇಳೆ ಬರೋಬರಿ 81 ಕಿಲೋ ಚಿನ್ನ ಪತ್ತೆಯಾಗಿದೆ. ಇದರ ಮೌಲ್ಯ ಸುಮಾರು 30 ಕೋಟಿ ರೂಪಾಯಿಗಳಾಗಿದ್ದುಮ, ಇದು ಆದಾಯ ತೆರಿಗೆ ಅಧಿಕಾರಿಗಳಿಗೆ ಅಚ್ಚರಿ ಮೂಡಿಸಿದೆ. ಇವುಗಳಿಗೆ ಸಂಬಂಧಿಸಿದಂತೆ ಸಮರ್ಪಕ ಮಾಹಿತಿ ನೀಡಲು ಮಾಲೀಕರು ವಿಫಲರಾಗಿದ್ದು, ಅತ್ಯಂತ ವ್ಯವಸ್ಥಿತವಾಗಿ ಕಾನೂನು ದುರುಪಯೋಗ ಪಡಿಸಿಕೊಂಡು ಮೆಡಿಕಲ್ ಕಾಲೇಜು ಮಾಲೀಕರು ತೆರಿಗೆ ವಂಚಿಸುತ್ತಿರುವುದನ್ನು...
ಬೆಂಗಳೂರು

ರಾಜಮಾರ್ತಾಂಡ ಚಿತ್ರದ ಟ್ರೈಲರ್ ರಿಲೀಸ್ ಮಾಡಿದ ಜೂನಿಯರ್ ಚಿರು ಮತ್ತು ಮೇಘನಾರಾಜ್-ಕಹಳೆ ನ್ಯೂಸ್

ಬೆಂಗಳೂರು : ಚಿರಂಜೀವಿ ಸರ್ಜಾ ಅಭಿನಯದ ರಾಜಮಾರ್ತಾಂಡ ಟ್ರೈಲರ್ ರಿಲೀಸ್ ಆಗಿದ್ದು, ಜೂನಿಯರ್ ಚಿರು ಮತ್ತು ಮೇಘನಾರಾಜ್ ಸಿನಿಮಾ ಟ್ರೈಲರ್ ಲಾಂಚ್ ಮಾಡಿದ್ದಾರೆ. ಇದು ಪೊಗರು ಸಿನಿಮಾ ರಿಲೀಸ್ ಆದ ದಿನವೇ ರಾಜಮಾರ್ತಾಂಡ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಈ ಸಿನೆಮಾವನ್ನು ರಾಮ್ ನಾರಾಯಣ್ ನಿರ್ದೇಶನ ಮಾಡಿದ್ದಾರೆ. ಸಿನಿಮಾ ಟ್ರೈಲರ್ ಇಂದು ಬಿಡುಗಡೆಯಾಗಿದ್ದು, ಈ ಚಿತ್ರ ಚಿರಂಜೀವಿ ಸರ್ಜಾ ಅವರ ಕೊನೆಯ ಚಿತ್ರವಾಗಿದೆ. ಚಿರು ಸಿನಿಮಾದ ಟ್ರೈಲರ್ ಗೆ ಧ್ರುವ ಸರ್ಜಾ...
1 194 195 196 197 198 211
Page 196 of 211