Thursday, March 12, 2026

ಬೆಂಗಳೂರು

ಬೆಂಗಳೂರುರಾಜ್ಯಸುದ್ದಿ

ಬೆಂಗಳೂರಲ್ಲಿ ಹಾಡಹಗಲೇ ಮನೆಗೆ ನುಗ್ಗಿ ಮಹಿಳೆಯನ್ನು ಕೊಂದು ಮಾಂಗಲ್ಯ ಸರ ದೋಚಿದ ದುಷ್ಕರ್ಮಿಗಳು – ಕಹಳೆ ನ್ಯೂಸ್

ಬೆಂಗಳೂರು,ನ - ಹಾಡಹಗಲೇ ಮನೆಗೆ ನುಗ್ಗಿದ ಹಂತಕರು ಕುತ್ತಿಗೆ ಹಿಸುಕಿ ವೃದ್ಧೆಯನ್ನು ಕೊಲೆ ಮಾಡಿ 45 ಗ್ರಾಂ ಮಾಂಗಲ್ಯ ಸರ ದೋಚಿರುವ ಘಟನೆ ಸುಬ್ರಮಣ್ಯಪುರ ಪೊಲೀಸ್‌‍ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.ಉತ್ತರಹಳ್ಳಿಯ ನ್ಯೂಮಿಲಿನಿಯಂ ಶಾಲೆ ರಸ್ತೆಯ ನಿವಾಸಿ ಲಕ್ಷ್ಮೀ (65) ಕೊಲೆಯಾದ ವೃದ್ಧೆ. ಉತ್ತರಹಳ್ಳಿಯಲ್ಲಿ ಅಶ್ವತ್‌ನಾರಾಯಣ ಹಾಗೂ ಲಕ್ಷ್ಮೀ ದಂಪತಿ ವಾಸವಾಗಿದ್ದು ಅಗರಬತ್ತಿ ಕಾರ್ಖಾನೆಯಲ್ಲಿ ಪತಿ ಕೆಲಸ ಮಾಡುತ್ತಿದ್ದಾರೆ. ಎಂದಿನಂತೆ ಅಶ್ವತ್‌ನಾರಾಯಣ ಅವರು ನಿನ್ನೆ ಬೆಳಗ್ಗೆ ಕೆಲಸಕ್ಕೆ ಹೋಗಿದ್ದಾಗ ಮನೆಯಲ್ಲಿ ಲಕ್ಷ್ಮೀ ಒಬ್ಬರೇ...
ಬೆಂಗಳೂರುರಾಜ್ಯಸುದ್ದಿ

ತುಪ್ಪದ ಬೆಲೆ ಏರಿಕೆ ಬೆನ್ನಲ್ಲೇ ಹಾಲಿನ ದರ ಏರಿಕೆ ಸುಳಿ ಕೊಟ್ಟ ಡಿ.ಕೆ.ಸುರೇಶ್‌ – ಕಹಳೆ ನ್ಯೂಸ್

ಬೆಂಗಳೂರು - ಬೇರೆ ರಾಜ್ಯಗಳಲ್ಲಿ ಹಾಲಿನ ದರ ನಮಗಿಂತಲೂ ಹೆಚ್ಚಿದೆ. ಹೀಗಾಗಿ ನಮಲ್ಲೂ ದರ ಪರಿಷ್ಕರಣೆಯಾಗಬೇಕೆಂದು ಕರ್ನಾಟಕ ಹಾಲು ಒಕ್ಕೂಟ ಮಹಾ ಮಂಡಳಿಗೆ ಮನವಿ ಮಾಡಲಾಗಿದೆ ಎಂದು ಮಾಜಿ ಸಂಸದ ಹಾಗೂ ಬಮೂಲ್‌ ಅಧ್ಯಕ್ಷ ಡಿ.ಕೆ.ಸುರೇಶ್‌ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಹಾಲಿನ ದರ ಏರಿಕೆಗೆ ಪ್ರಸ್ತಾವನೆ ಸಲ್ಲಿಸಿಲ್ಲ. ಆದರೆ ಮಂಡಳಿಗೆ ಮನವಿ ಮಾಡಿದ್ದೇವೆ. ಅರ್ಧ ಲೀಟರ್‌ ಹಾಲು ಮಾರಿದರೆ ನಷ್ಟವಾಗುತ್ತಿದ್ದು, ಒಂದು ಲೀಟರ್‌ ಹಾಲು ಮಾರಿದರೆ ಲಾಭವಾಗುತ್ತದೆ. ತುಪ್ಪದ...
ಬೆಂಗಳೂರುರಾಜ್ಯಸುದ್ದಿ

ರಾಜ್ಯದಲ್ಲಿ ಇಂದಿನಿಂದ ಮತ್ತೆ 4-5 ದಿನ ಭಾರೀ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ- ಕಹಳೆ ನ್ಯೂಸ್

ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ನವೆಂಬರ್ 5 ರ ಇಂದಿನಿಂದ 4-5 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದಿನಿಂದ ರಾಜಧಾನಿ ಬೆಂಗಳೂರು ಸೇರಿದಂತೆ ಕರಾವಳಿ, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಮೀನುಗಾರರು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆ ಹಿನ್ನೆಲೆ...
ಕ್ರೀಡೆಬೆಂಗಳೂರುಮುಂಬೈಸುದ್ದಿ

ಭಾರತ ತಂಡಕ್ಕೆ ಆಯ್ಕೆಯಾದ ರಾಹುಲ್ ದ್ರಾವಿಡ್ ಪುತ್ರ- ಕಹಳೆ ನ್ಯೂಸ್

ರಾಹುಲ್ ದ್ರಾವಿಡ್ ಅವರ ಕಿರಿಯ ಪುತ್ರ ಅನ್ವಯ್ ದ್ರಾವಿಡ್ ಭಾರತ ಅಂಡರ್-19 ಚಾಲೆಂಜರ್ ಟ್ರೋಫಿ ತಂಡಕ್ಕೆ ಆಯ್ಕೆಯಾಗಿದ್ದಾರೆ. ಹೈದರಾಬಾದ್‌ನಲ್ಲಿ ನಡೆಯಲಿರುವ ಈ ಟೂರ್ನಿಯಲ್ಲಿ ಅವರು ಸಿ ತಂಡದ ಪರ ಅಗ್ರ ಕ್ರಮಾಂಕದ ಬ್ಯಾಟ್ಸ್‌ಮನ್ ಹಾಗೂ ವಿಕೆಟ್‌ಕೀಪರ್ ಆಗಿ ಆಡಲಿದ್ದಾರೆ. ಇತ್ತೀಚೆಗೆ ಕರ್ನಾಟಕ ತಂಡದ ನಾಯಕರಾಗಿದ್ದ ಅನ್ವಯ್, ತಮ್ಮ ಆಕ್ರಮಣಕಾರಿ ಬ್ಯಾಟಿಂಗ್​ನಿಂದ ಹೆಸರುವಾಸಿಯಾಗಿದ್ದಾರೆ. ಯುವ ಆಟಗಾರರ ಪ್ರತಿಭೆಗೆ ವೇದಿಕೆಯಾಗಿರುವ ಈ ಟೂರ್ನಿಯಲ್ಲಿ ಅನ್ವಯ್ ಸಾಮರ್ಥ್ಯ ಪ್ರದರ್ಶಿಸಲಿದ್ದಾರೆ. ಟೀಂ ಇಂಡಿಯಾದ ಮಾಜಿ ನಾಯಕ...
ಬೆಂಗಳೂರುಸುದ್ದಿ

ಸೂರಜ್‌,ಸ್ಪಂದನಾ ಮನೆಯ ಪತ್ರವನ್ನು ನುಚ್ಚುನೂರು ಮಾಡಿದ ರಿಷಾ : ಸ್ಪರ್ಧಿಗಳು ಕಣ್ಣೀರು

ಬೆಂಗಳೂರು: ಬಿಗ್‌ ಬಾಸ್‌ ಮನೆಯ ಆಟ ಕಿಚ್ಚ ಸುದೀಪ್‌ (Kiccha Sudeep) ಅವರ ಆಜ್ಞೆಯಂತೆ ಈ ವಾರ ಯಾವುದೇ ಟಾಸ್ಕ್‌ ಇಲ್ಲದೆ ಸಾಗಲಿದೆ. ಅದರಂತೆ ಮುಖಕ್ಕೆ ಮಸಿ ಬಳಿದು ಯಾರು ಅರ್ಹರು ಯಾರು ಮನೆಯಲ್ಲಿ ಇರಲು ಅರ್ಹರಲ್ಲವೆನ್ನುವ ಅಭಿಪ್ರಾಯವನ್ನು ಸ್ಪರ್ಧಿಗಳು ತಿಳಿಸಿದ್ದಾರೆ. ಈ ವಿಚಾರದಲ್ಲಿ ಸ್ಪರ್ಧಿಗಳ ನಡುವೆ ಮಾತಿನ ಚಕಮಕಿ ನಡೆದಿದೆ. ಈ ವಾರ ಎಲ್ಲರೂ ನಾಮಿನೇಟ್‌ ಆಗಿದ್ದಾರೆ. ಮನೆಯ ನಿಯಮ ಉಲ್ಲಂಘನೆ ಆಗಿದೆ. ಇದರ ಶಿಕ್ಷೆಯೂ ಸ್ಪರ್ಧಿಗಳಿಗೆ ಸಿಗಲಿದೆ. ಮನೆಯಲ್ಲಿ...
ಬೆಂಗಳೂರುರಾಜ್ಯಸಂತಾಪಸುದ್ದಿ

ನಾಳೆ ಮಧ್ಯಾಹ್ನ 2 ಗಂಟೆಗೆ ಸಕಲ ಸರ್ಕಾರಿ ಗೌರವಗಳೊಂದಿಗೆ ಶಾಸಕ ‘ಹೆಚ್.ವೈ ಮೇಟಿ’ ಅಂತ್ಯಕ್ರಿಯೆ : CM ಸಿದ್ದರಾಮಯ್ಯ-ಕಹಳೆ ನ್ಯೂಸ್

ಬೆಂಗಳೂರು : ನಾಳೆ ಮಧ್ಯಾಹ್ನ 2 ಗಂಟೆಗೆ ಸಕಲ ಸರ್ಕಾರಿ ಗೌರವಗಳೊಂದಿಗೆ ಶಾಸಕ ಹೆಚ್.ವೈ ಮೇಟಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಹೆಚ್.ವೈ.ಮೇಟಿಯವರ ಪಾರ್ಥಿವ ಶರೀರದ ದರ್ಶನ ಪಡೆದ ಬಳಿಕ ಸಿಎಂ ಸಿದ್ದರಾಮಯ್ಯ ಮಾತನಾಡಿದರು. ಮಾಜಿ ಸಚಿವರು, ಹಿರಿಯ ನಾಯಕರು ಹಾಗೂ ಹಾಲಿ ಶಾಸಕರೂ ಆಗಿದ್ದ ಹೆಚ್.ವೈ.ಮೇಟಿಯವರು ಇಂದು 12.30 ಗೆ ನಿಧನರಾಗಿದ್ದಾರೆ. ನಾನು ಮೂರು ದಿನಗಳ ಹಿಂದೆ ಅವರನ್ನು ಭೇಟಿ ಮಾಡಿ ಅವರ ಆರೋಗ್ಯವನ್ನು ವಿಚಾರಿಸಿದ್ದೆ....
ಬೆಂಗಳೂರುರಾಜ್ಯಸಿನಿಮಾಸುದ್ದಿ

ಯಜಮಾನ ಚಿತ್ರಕ್ಕೆ ಆಧುನಿಕ ತಂತ್ರಜ್ಞಾನ ಸ್ಪರ್ಶ: 25 ವರ್ಷಗಳ ನಂತರ ರಿ-ರಿಲೀಸ್-ಕಹಳೆ ನ್ಯೂಸ್

ಸರಿಯಾಗಿ 25 ವರ್ಷಗಳ ಹಿಂದೆ 2000 ನೇ ಇಸವಿಯಲ್ಲಿ ತೆರೆಕಂಡ ಕರ್ನಾಟಕ ರತ್ನ ವಿಷ್ಣುವರ್ಧನ್ (Vishnuvardhan) ಅಭಿನಯದ, ಮೆಹರುನ್ನಿಸಾ ರೆಹಮಾನ್ ನಿರ್ಮಾಣದ ಹಾಗೂ ಆರ್.ಶೇಷಾದ್ರಿ – ರಾಧಾ ಭಾರತಿ ನಿರ್ದೇಶನದ ಯಜಮಾನ (Yajamana) ಚಿತ್ರ ರಾಜ್ಯಾದ್ಯಂತ ಅದ್ದೂರಿಯಾಗಿ ಮರು ಬಿಡುಗಡೆಯಾಗಲು ರೆಡಿ ಆಗಿದೆ. ಜನಮೆಚ್ಚಿದ ಈ ಚಿತ್ರ ಆಧುನಿಕ ತಂತ್ರಜ್ಞಾನದಿಂದ ಸಿಂಗಾರಗೊಂಡಿದೆ. ಮುನಿಸ್ವಾಮಿ ಎಸ್.ಡಿ ಈ ಚಿತ್ರವನ್ನು ಮರು ಬಿಡುಗಡೆ ಮಾಡುತ್ತಿದ್ದಾರೆ. ಚಿತ್ರದ ರಜತೋತ್ಸವವನ್ನು ಸಂಭ್ರಮಿಸಲು ಕಲಾವಿದರ ಸಂಘದಲ್ಲಿ ಅದ್ದೂರಿ...
ಬೆಂಗಳೂರುಸುದ್ದಿ

ಲಿಫ್ಟ್‌ನಲ್ಲಿ ನೆಲಕ್ಕೆ ಬಡಿದು ನಾಯಿಮರಿ ಕೊಂದಿದ್ದ ಕೆಲಸದಾಕೆ ಅರೆಸ್ಟ್ -ಕಹಳೆ ನ್ಯೂಸ್

ಬೆಂಗಳೂರು: ಬಾಗಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಾಯಿಮರಿಯನ್ನು ನೆಲಕ್ಕೆ ಬಡಿದು ಕೊಲೆ ಮಾಡಿದ್ದ ಕೆಲಸದಾಕೆಯನ್ನ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಪುಷ್ಪಲತಾ ಬಂಧಿತ ಮನೆಕೆಲಸದಾಕೆ. ಶ್ವಾನದ ಮಾಲೀಕರ ದೂರಿನ ಮೇರೆಗೆ ತನಿಖೆಗಿಳಿದ ಪೊಲೀಸರಿಗೆ ಪುಷ್ಪಲತಾ ನಾಯಿ ಕೊಲೆ ಮಾಡಿದ್ದಾಳೆ ಅನ್ನೋದು ಗೊತ್ತಾಗಿದೆ. ರಾಶಿಕಾ ಎಂಬವರು ತಮ್ಮ ‘ಗೂಸಿ’ ಹೆಸರಿನ ನಾಯಿಯನ್ನು ನೋಡಿಕೊಳ್ಳಲು ಪುಷ್ಪಲತಾಳನ್ನು ಮನೆ ಕೆಲಸದಾಕೆಯಾಗಿ ನೇಮಿಸಿಕೊಂಡಿದ್ದರು. ಇದಕ್ಕಾಗಿ ಪುಷ್ಪಲತಾಳಿಗೆ ಮಾಸಿಕ 23 ಸಾವಿರ ರೂ. ಸಂಬಳವನ್ನೂ ನೀಡುತ್ತಿದ್ದರು. ಪುಷ್ಪಲತಾ ಲಿಫ್ಟ್‌ನಲ್ಲಿ...
1 26 27 28 29 30 212
Page 28 of 212