Friday, March 13, 2026

ಬೆಂಗಳೂರು

ಬೆಂಗಳೂರುರಾಜ್ಯಸುದ್ದಿ

ರಾಜ್ಯದಲ್ಲಿ ತಗ್ಗಿದ ಮಳೆಯ ಅಬ್ಬರ: ಆದರೂ ನಾಲ್ಕು ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ- ಕಹಳೆ ನ್ಯೂಸ್

ಬೆಂಗಳೂರು: ರಾಜ್ಯದಲ್ಲಿ ಮಳೆಯ ಅಬ್ಬರ ಕಡಿಮೆಯಾಗಿದೆ. ಬಹುತೇಕ ಜಿಲ್ಲೆಗಳಲ್ಲಿ ವರುಣಾರ್ಭಟ ತಗ್ಗಿದ್ದು, ಕೆಲ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಜಿಲ್ಲೆಗಳಲ್ಲಿ ಕಡಿಮೆ ಪ್ರಮಾಣದ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಸಂಜೆ ವೇಳೆಗೆ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಮೀಸೂರು, ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜನಗರ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ,...
ಬೆಂಗಳೂರುರಾಜ್ಯಸುದ್ದಿಹೆಚ್ಚಿನ ಸುದ್ದಿ

ಕರ್ನಾಟಕದಲ್ಲಿ ‘RSS’ ಚಟುವಟಿಕೆಗಳಿಗೆ ಬ್ರೇಕ್ ಹಾಕಲು ರಾಜ್ಯ ಸರ್ಕಾರ ಚಿಂತನೆ – ಕಹಳೆ ನ್ಯೂಸ್

ಬೆಂಗಳೂರು : ಆರ್ ಎಸ್ ಎಸ್ ನೂರು ವರ್ಷ ಭರ್ತಿ ಬೆನ್ನಲ್ಲೇ ಬಿಗ್ ಶಾಕ್ ಎದುರಾಗಿದ್ದು, ಆರ್ ಎಸ್ ಎಸ್ ಚಟುವಟಿಕೆಗಳಿಗೆ ರಾಜ್ಯ ಸರ್ಕಾರ ಬ್ರಿಕ್ ಹಾಕುತ್ತಾ? ಎನ್ನುವ ಕುರಿತು ಚಿಂತನೆ ನಡೆಯುತ್ತಿದೆ. ಆರ್ ಎಸ್ ಎಸ್ ಚಟುವಟಿಕೆಗಳಿಗೆ ನಿರ್ಬಂಧದ ಬಗ್ಗೆ ಗಂಭೀರ ಚಿಂತನೆ ನಡೆಯುತ್ತಿದೆ. ಸಾರ್ವಜನಿಕ ಸರಕಾರಿ ಸ್ಥಳಗಳಲ್ಲಿ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಸರಕಾರ ಚಿಂತನೆ ನಡೆಸುತ್ತಿದೆ ಎಂದು ತಿಳಿದುಬಂದಿದೆ. ಹೌದು ಆರ್ ಎಸ್ ಎಸ್ ಚಟುವಟಿಕೆಗಳಿಗೆ ಕಡಿವಾಣದ...
ಆರೋಗ್ಯಬೆಂಗಳೂರುರಾಜ್ಯಸಿನಿಮಾಸುದ್ದಿ

ನಟ ಉಮೇಶ್ ಆರೋಗ್ಯ ವಿಚಾರಿಸಿದ ಹಿರಿಯ ಕಲಾವಿದರು-ಕಹಳೆ ನ್ಯೂಸ್

ಹಿರಿಯ ನಟ ಎಂಎಸ್ ಉಮೇಶ್  ಮನೆಯಲ್ಲಿ ಕಾಲುಜಾರಿ ಬಿದ್ದು ಸೊಂಟ ಹಾಗೂ ಬಲಗೈ ಭುಜಕ್ಕೆ ಪೆಟ್ಟು ಮಾಡಿಕೊಂಡಿದ್ದರು. ಅವರನ್ನು ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗಿದೆ. ಹಿರಿಯ ನಟ ಉಮೇಶ್ ಅವರಿಗೆ ಎಂಆರ್‌ಐ ಹಾಗೂ ಸಿಟಿ ಸ್ಕ್ಯಾನಿಂಗ್ ಮಾಡಿದ ಬಳಿಕ ಲಿವರ್‌ನಲ್ಲಿ ಘನಗಾತ್ರದ ಗೆಡ್ಡೆ ಪತ್ತೆಯಾಗಿದೆ. ಲಿವರ್ ಕ್ಯಾನ್ಸರ್ ಆಗಿ ಅದು ಬೇರೆ ಬೇರೆ ಅಂಗಗಳಿಗೆ ಹರಡಿದೆ ಎಂದು ಶಾಂತ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ...
ಬೆಂಗಳೂರುಸಿನಿಮಾಸುದ್ದಿ

1 ಕೋಟಿ ಟಿಕೆಟ್‌ ಮಾರಾಟ – ಹಿಂದಿಯಲ್ಲಿ ಕಾಂತಾರ 130+ ಕೋಟಿ ಗಳಿಕೆ

ರಿಷಬ್‌ ಶೆಟ್ಟಿ ನಟಿಸಿ, ನಿರ್ದೇಶಿಸಿದ ಕಾಂತಾರ: ಚಾಪ್ಟರ್ 1  ಟಿಕೆಟ್‌ ಬುಕ್ಕಿಂಗ್‌ ಮಾಡುವ ಬುಕ್‌ಮೈಶೋ ದಲ್ಲಿ 1 ಕೋಟಿ ಟಿಕೆಟ್‌ ಮಾರಾಟವಾಗಿದೆ. ಅಕ್ಟೋಬರ್‌ 2 ರಂದು ಕಾಂತಾರ ಬಿಡುಗಡೆಯಾಗಿದ್ದು ಈಗಲೂ ಪ್ರೇಕ್ಷಕರಿಂದ ಬೇಡಿಕೆ ವ್ಯಕ್ತವಾಗುತ್ತಿದೆ. ಶನಿವಾರ ಭಾನುವಾರ ಬಹುತೇಕ ಥಿಯೇಟರ್‌ಗಳು ಭರ್ತಿಯಾಗುತ್ತಿವೆ. ಟಯರ್‌ 2 ಮತ್ತು ಟಯರ್‌ 3 ನಗರಗಳಲ್ಲಿ ಥಿಯೇಟರ್‌ ಈಗಲೂ ಭರ್ತಿಯಾಗುತ್ತಿರುವುದು ಚಿತ್ರ ಉತ್ತಮ ಕಲೆಕ್ಷನ್‌ ಮಾಡುವ ಸಾಧ್ಯತೆಯಿದೆ. ಆರಂಭದಲ್ಲಿ ಹಿಂದಿ ಕಲೆಕ್ಷನ್‌ ಕಡಿಮೆ ಇತ್ತು. ಆದರೆ...
ಬೆಂಗಳೂರುರಾಜ್ಯಸುದ್ದಿ

ನಮ್ಮ ಮೆಟ್ರೋ ಹಳದಿ ಮಾರ್ಗದಲ್ಲಿ ತಾಂತ್ರಿಕ ಸಮಸ್ಯೆ, ಸಂಚಾರದಲ್ಲಿ ವ್ಯತ್ಯಯ-ಕಹಳೆ ನ್ಯೂಸ್

ಬೆಂಗಳೂರು: ಹೊಸದಾಗಿ ಆರಂಭಗೊಂಡಿರುವ ನಮ್ಮ ಮೆಟ್ರೋ ಹಳದಿ ಮಾರ್ಗದ ಮೆಟ್ರೋದಲ್ಲಿ ತಾಂತ್ರಿಕ ಸಮಸ್ಯೆ ಎದುರಾಗಿದೆ. ತಾಂತ್ರಿಕ ಸಮಸ್ಯೆಯಿಂದ ಪ್ರತಿ 25 ನಿಮಿಷಕ್ಕೆ ಒಂದರಂತೆ ರೈಲುಗಳು ಸಂಚಾರ ನಡೆಸುತ್ತಿವೆ. ಸಾರ್ವಜನಿಕರು ಸಹಕರಿಸಬೇಕೆಂದು ಬಿಎಂಆರ್‌ಸಿಎಲ್‌ ಮನವಿ ಮಾಡಿದೆ. ಆರ್‌ವಿ ಕಾಲೇಜ್‌ ರಸ್ತೆಯಿಂದ ಬೊಮ್ಮಸಂದ್ರದವರೆಗೆ ಸಾಗುವ ಹಳದಿ ಮಾರ್ಗದ ಮೆಟ್ರೋ ಸೇವೆಗೆ ಇದೇ ಆಗಸ್ಟ್‌ 10 ರಂದು ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದರು. 19.15 ಕಿ.ಮೀ ಉದ್ದದ ಹಳದಿ ಮಾರ್ಗದಲ್ಲಿ ಒಟ್ಟು 16...
ಬೆಂಗಳೂರುರಾಜ್ಯಸುದ್ದಿಹೆಚ್ಚಿನ ಸುದ್ದಿ

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂಪಾಯಿ: ಡಿಸಿಎಂ ಡಿ.ಕೆ. ಶಿವಕುಮಾರ್ ಘೋಷಣೆ – ಕಹಳೆ ನ್ಯೂಸ್

ಬೆಂಗಳೂರು: ಲಾಲ್ ಬಾಗ್ ಅಭಿವೃದ್ಧಿಗೆ ಜಿಬಿಎ ವತಿಯಿಂದ 10 ಕೋಟಿ ರೂ. ಅನುದಾನ ನೀಡಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಘೋಷಿಸಿದ್ದಾರೆ. ಲಾಲ್ ಬಾಗ್ ನಲ್ಲಿ ನಾಗರೀಕರ ಜತೆ ನಡಿಗೆ ಹಾಗೂ ಸಂವಾದದ ನಂತರ ಟನಲ್ ರಸ್ತೆಗೆ ಪ್ರವೇಶ ಜಾಗ ಪರಿಶೀಲನೆ ನಡೆಸಿ ಮಾತನಾಡಿದ ಡಿಸಿಎಂ, ಅನೇಕ ಸಾರ್ವಜನಿಕರ ಜೊತೆ ಚರ್ಚೆ ಮಾಡಿ ಅವರ ಸಲಹೆ, ದೂರು ಆಲಿಸಿದ್ದೇನೆ. ಅವರ ಸಮಸ್ಯೆ ಬಗೆಹರಿಸಲಾಗುವುದು. ಲಾಲ್ ಬಾಗ್ ಅಭಿವೃದ್ಧಿಗೆ ಜಿಬಿಎ ವತಿಯಿಂದ...
ಅಂಕಣಬೆಂಗಳೂರುಸುದ್ದಿ

ರಾಹುಲ್ ಗಾಂಧಿ ಜೊತೆಗಿನ ಫೋಟೊ ಶೇರ್ – ರಾಜಕೀಯ ಎಂಟ್ರಿಗೆ ಸಿದ್ದರಾಮಯ್ಯ ಮೊಮ್ಮಗ ಸಿದ್ಧತೆ?-ಕಹಳೆ ನ್ಯೂಸ್

ಬೆಂಗಳೂರು: ಇತ್ತೀಚೆಗೆ ಹಲವು ಕಾರ್ಯಕ್ರಮಗಳಲ್ಲಿ ತಾತನ ಜೊತೆ ವೇದಿಕೆಯಲ್ಲಿ ಕಾಣಿಸಿಕೊಳ್ಳುತ್ತಿರುವ ಸಿದ್ದರಾಮಯ್ಯ  ಮೊಮ್ಮಗ ಧವನ್ ರಾಕೇಶ್ ರಾಜಕೀಯ ಪ್ರವೇಶಕ್ಕೆ ಸಿದ್ಧತೆ ನಡೆಸಿದ್ದಾರೆ. ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಜೊತೆಗಿನ ಫೋಟೊಗಳನ್ನು ಸಿದ್ದರಾಮಯ್ಯ ಮೊಮ್ಮಗ ತನ್ನ ಇನ್‌ಸ್ಟಾ ಖಾತೆಯಲ್ಲಿ ಹಂಚಿಕೊAಡಿದ್ದು, ರಾಜಕೀಯ ಬಗೆಗಿನ ತಮ್ಮ ಒಲವನ್ನು ವ್ಯಕ್ತಪಡಿಸಿದ್ದಾರೆ. ಪೋಸ್ಟ್‌ನಲ್ಲಿ ಏನಿದೆ? ಕಳೆದ ಆ.8 ರಂದು, ನಮ್ಮ ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ ಅವರನ್ನು ಭೇಟಿಯಾಗುವ ಸದಾವಕಾಶ ನನಗೆ ದೊರೆಯಿತು....
ಅಂಕಣಬೆಂಗಳೂರುಸುದ್ದಿ

ಬಾಂಬೆ ಮಾದರಿಯಲ್ಲಿ ಕೊಳೆಗೇರಿ ಪ್ರದೇಶಗಳ ಪುನಶ್ಚೇತನಕ್ಕೆ ಸಮಿತಿ ರಚನೆಗೆ ಸೂಚನೆ ; ಡಿಕೆಶಿ-ಕಹಳೆ ನ್ಯೂಸ್

ಬೆಂಗಳೂರು: ಬಾಂಬೆ ಮಾದರಿಯಲ್ಲಿ ಕೊಳೆಗೇರಿ ಪ್ರದೇಶಗಳ ಪುನಶ್ಚೇತನಕ್ಕೆ ಸಮಿತಿ ರಚಿಸಲು ಡಿಸಿಎಂ ಡಿ.ಕೆ.ಶಿವಕುಮಾರ್ , ಜಿಬಿಎ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಬಿಎ ಸಭಾಂಗಣದಲ್ಲಿ ಶುಕ್ರವಾರ ನಡೆದ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಸಮಿತಿಯ ಮೊದಲ ಸಭೆಯಲ್ಲಿ ಸಚಿವ ಜಮೀರ್ ಅಹ್ಮದ್ ಅವರು ಬೆಂಗಳೂರಿನಲ್ಲಿ 480 ಕೊಳಗೇರಿ ಪ್ರದೇಶಗಳಿದ್ದು, ಅವುಗಳ ಅಭಿವೃದ್ಧಿ ಆಗಬೇಕು ಎಂದು ವಿಷಯ ಪ್ರಸ್ತಾಪಿಸಿದಾಗ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಅಧಿಕಾರಿಗಳಿಗೆ ಸೂಚಿಸಿದರು. ಬೆಂಗಳೂರಿನಲ್ಲಿ ಈ ಹಿಂದೆ ಶಾಂತಿನಗರದಲ್ಲಿ ಈ...
1 36 37 38 39 40 212
Page 38 of 212