ನೀರು, ವಿದ್ಯುತ್, ಟೋಲ್ ದರ ಏರಿಕೆ : ಏ.1ರಿಂದ ಜನರ ಜೀವನ ದುಬಾರಿ -ಕಹಳೆ ನ್ಯೂಸ್
ಬೆಂಗಳೂರು: ನಾಳೆ (ಏ.1) ಹೊಸ ಆರ್ಥಿಕ ವರ್ಷದ ಆರಂಭವಾಗುವ ದಿನ. ನಾಳೆಯಿಂದ ಜನರ ಜೀವನವೂ ದುಬಾರಿಯಾಗಲಿದೆ. ಹೊಸ ಆರ್ಥಿಕ ವರ್ಷದ ಮೊದಲ ದಿನದಿಂದಲೇ ವಿದ್ಯುತ್, ಟೋಲ್ ಹಾಗೂ ಬೆಂಗಳೂರು ನಗರದಲ್ಲಿ ನೀರಿನ ದರ ಏರಿಕೆಯಾಗಲಿದೆ. ಈ ಮೂಲಕ ಗ್ರಾಹಕರಿಗೆ ದರ ಏರಿಕೆಯ ನೇರ ಪರಿಣಾಮ ಬೀರಲಿದೆ ರಾಜ್ಯದ ಟೋಲ್ ಪ್ಲಾಜಾಗಳಲ್ಲಿ ಶೇ.3 ರಿಂದ 5ರಷ್ಟು ಟೋಲ್ ದರ ಏರಿಕೆಯಾಗಲಿದ್ದು, ಕಾರುಗಳಿಗೆ 5ರಿಂದ 10 ರೂ. ಟೋಲ್ ಹೆಚ್ಚಳವಾಗಲಿದೆ. ವಾಣಿಜ್ಯ ಬಳಕೆಯ...






