Friday, March 20, 2026

ಬೆಂಗಳೂರು

ಜಿಲ್ಲೆದಕ್ಷಿಣ ಕನ್ನಡಬೆಂಗಳೂರುರಾಜ್ಯಸುದ್ದಿ

ಡಿಜಿಟಲ್ ಮಾಧ್ಯಮಕ್ಕೆ ಶಕ್ತಿ ತುಂಬಿದ ಸಿಎಂ ; ಮಾಧ್ಯಮ ಸಲಹೆಗಾರರಾದ ಕೆ.ವಿ ಪ್ರಭಾಕರ್ ಅವರಿಗೆ KSDMF ನಿಂದ ಅಭಿನಂದನೆ. , ಶೀಘ್ರದಲ್ಲೇ ರಾಜ್ಯಮಟ್ಟದ ಡಿಜಿಟಲ್ ಮಾಧ್ಯಮ ಸಮ್ಮೇಳನ -ಕಹಳೆ ನ್ಯೂಸ್

ಬೆಂಗಳೂರು: ಡಿಜಿಟಲ್ ಮಾಧ್ಯಮಕ್ಕೆ ಜಾಹಿರಾತು ನೀಡಲು ರಾಜ್ಯದಲ್ಲಿ ಮೊದಲ ಬಾರಿಗೆ ಡಿಜಿಟಲ್ ಜಾಹೀರಾತು ನೀತಿ-2024 ಜಾರಿಗೊಳಿಸಿರುವುದು ನಮಗೆ ಶಕ್ತಿತುಂಬಿದೆ. ಈ ಹಿನ್ನೆಲೆಯಲ್ಲಿ ಶೀಘ್ರ ಬೆಂಗಳೂರಿನಲ್ಲಿ ವಿಶೇಷವಾದ ಡಿಜಿಟಲ್ ಮಾಧ್ಯಮ ಸಮೇಳನವನ್ನು ಹಮ್ಮಿಕೊಂಡು ರಾಷ್ಟ್ರಮಟ್ಟದ ಹಾಗೂ ಅಂತರರಾಷ್ಟ್ರೀಯ ಮಟ್ಟದ ಡಿಜಿಟಲ್ ಮಾಧ್ಯಮದ ಪತ್ರಕರ್ತರನ್ನು ಆಹ್ವಾನಿಸುವ ಚಿಂತನೆಯಿದೆ ಎಂದು ಕರ್ನಾಟಕ ಸ್ಟೇಟ್ ಡಿಜಿಟಲ್ ಮೀಡಿಯಾ ಫೋರಂ (KSDMF)ರಾಜ್ಯಾಧ್ಯಕ್ಷರಾದ ಬಿ. ಸಮೀವುಲ್ಲಾ ಹೇಳಿದ್ದಾರೆ. ಕೆಎಸ್ ಡಿಎಂಎಫ್ ವತಿಯಿಂದ ನಗರದ ಪ್ರೆಸ್ ಕ್ಲಬ್ ನಲ್ಲಿ ಮಂಗಳವಾರ...
ಬೆಂಗಳೂರುಸುದ್ದಿ

ಅಕ್ಷಯ ತೃತೀಯ: ಚಿನ್ನ ಖರೀದಿಗೆ ಇಂದು ಶುಭ ದಿನ ಎಷ್ಟಿದೆ ಇಂದಿನ ಚಿನ್ನದ ಬೆಲೆ-ಕಹಳೆ ನ್ಯೂಸ್

ಬೆಂಗಳೂರು : ಅಕ್ಷಯ ತೃತೀಯ ಹಿನ್ನೆಲೆಯಲ್ಲಿ ಚಿನ್ನಾಭರಣ ಕೊಳ್ಳಲು ಗ್ರಾಹಕರು ಉತ್ಸುಕರಾಗಿದ್ದರೆ, ಹಲವು ಬಗೆಯ ರಿಯಾಯಿತಿ ಘೋಷಣೆ ಮೂಲಕ ಗ್ರಾಹಕರನ್ನು ಸೆಳೆಯಲು ವರ್ತಕರು ಮುಂದಾಗಿದ್ದಾರೆ. 10 ಗ್ರಾಂ. ಚಿನ್ನ 1 ಲಕ್ಷ ತಲುಪಿದ್ದು, ಮುಂದಿನ ದಿನಗಳಲ್ಲಿ ಇನ್ನೂ ದರ ಹೆಚ್ಚಾಗಬಹುದು ಎಂಬ ಕಾರಣ ಹಾಗೂ ಹೂಡಿಕೆ ದೃಷ್ಟಿಯಿಂದ ಚಿನ್ನಾಭರಣ ವಹಿವಾಟು ದಾಖಲೆ ಪ್ರಮಾಣದಲ್ಲಿ ಆಗಬಹುದು ಎಂದು ವರ್ತಕರು ನಿರೀಕ್ಷಿಸಿದ್ದಾರೆ. ಕಳೆದ ವರ್ಷಕ್ಕಿಂತ ಶೇ.10 ರಷ್ಟು ಕೇಜಿ ಚಿನ್ನ ಮಾರಾಟ ಆಗಬಹುದು...
ಬೆಂಗಳೂರುರಾಜ್ಯಸುದ್ದಿ

ರಾಜ್ಯದಲ್ಲಿ ಇಂದಿನಿಂದ 1 ವಾರ ಗುಡುಗು ಸಹಿತ ಭಾರೀ ಮಳೆ : 15 ಜಿಲ್ಲೆಗಳಿಗೆ ಅಲರ್ಟ್ ಘೋಷಣೆ.!-ಕಹಳೆ ನ್ಯೂಸ್

ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯದ 15 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಒಂದು ವಾರ ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಇಂದಿನಿಂದ ಮೇ. 6 ರವರೆಗೆ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಇಂದಿನಿಂದ ಮೇ. 6 ರವರೆಗೆ ದಕ್ಷಿಣ ಕನ್ನಡ, ಬೆಳಗಾವಿ, ಧಾರವಾಡ,...
ಬೆಂಗಳೂರುಸುದ್ದಿ

ಗೃಹ ಲಕ್ಷ್ಮೀ ಯೋಜನೆ.. ಮೂರು ಕಂತಿನ ಹಣ ಒಟ್ಟಿಗೆ ಜಮೆ- ಲಕ್ಷ್ಮೀ ಹೆಬ್ಬಾಳ್ಕರ್-ಕಹಳೆ ನ್ಯೂಸ್

ಬೆಂಗಳೂರು : ರಾಜ್ಯ ಕಾಂಗ್ರೆಸ್​ ಸರ್ಕಾರದ ಗೃಲಕ್ಷ್ಮೀ ಯೋಜನೆಯಡಿ ಪ್ರತಿ ತಿಂಗಳು ಮನೆಯ ಯಜಮಾನಿಯರ ಖಾತೆಗೆ ಎರಡು ಸಾವಿರ ರೂಪಾಯಿ ವರ್ಗಾವಣೆ ಮಾಡಲಾಗುತ್ತದೆ. ಆದರೆ ಕೆಲ ತಿಂಗಳಿನಿಂದ ಈ ಹಣವು ಜಮೆಯಾಗದ ಕಾರಣ ಸರ್ಕಾರ ಫಲಾನುಭವಿಗಳ ಕೆಂಗಣ್ಣಿಗೆ ಗುರಿಯಾಗಿದೆ. ಈ ಹಿನ್ನೆಲೆಯಲ್ಲಿ ಬಾಕಿ ಇರುವ ಮೂರು ಕಂತಿನಿ ಹಣವನ್ನು ಒಟ್ಟಿಗೆ ಹಾಕಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​​ ಅವರು ತಿಳಿಸಿದ್ದಾರೆ. ಮೇ ತಿಂಗಳಲ್ಲಿ...
ಬೆಂಗಳೂರುಸುದ್ದಿ

ಸಿಎಂ ಮಾಧ್ಯಮ ಕಾರ್ಯದರ್ಶಿ ಕೆ.ವಿ ಪ್ರಭಾಕರ್ ಹಾಗೂ ವಾರ್ತಾ ಇಲಾಖೆಯ ಆಯುಕ್ತರಿಗೆ KSDMF ನಿಂದ ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ಅಭಿನಂದನಾ ಸಮಾರಂಭ – ಕಹಳೆ ನ್ಯೂಸ್

ಬೆಂಗಳೂರು : ರಾಜ್ಯದಲ್ಲಿ ಬರೀ TV, ಪತ್ರಿಕೆಗಳಿಗಷ್ಟೇ ಅಲ್ಲದೇ, ಇನ್ನು ಮುಂದೆ Digital Mediaಗೂ ಜಾಹೀರಾತು ನೀಡಬೇಕು ಎಂಬ ಸರ್ಕಾರ ಆದೇಶ ಜಾರಿಗಳಿಸಿದೆ. ಈ ಹಿನ್ನೆಲೆಯಲ್ಲಿ ಈ ನೀತಿ ಜಾರಿಯಾಗಲು ಕಾರಣರಾದ ಸಿಎಂ ಮಾಧ್ಯಮ ಕಾರ್ಯದರ್ಶಿ ಕೆ.ವಿ.ಪ್ರಭಾಕರ್ ಮತ್ತು ವಾರ್ತಾ ಇಲಾಖೆಯ ಆಯುಕ್ತ ಹೇಮಂತ್ ನಿಂಬಾಳ್ಕರ್ ಅವರನ್ನು ಅಭಿನಂದಿಸಲು ಇದೇ ಮಂಗಳವಾರದಂದು ಬೆಂಗಳೂರಿನ ಪ್ರೆಸ್ ಕ್ಲಬ್‌ನಲ್ಲಿ ಸನ್ಮಾನ ಕಾರ್ಯಕ್ರಮ ಹಮ್ಮಿಕೋಳ್ಳಲಾಗಿದೆ. ಡಿಜಿಟಲ್ ಮೀಡಿಯಾಗಳಿಗೆ ಜಾಹಿರಾತು ಅನುಮತಿ KSDMF ಗೆ ಸಂತಸದ...
ಜಿಲ್ಲೆದಕ್ಷಿಣ ಕನ್ನಡಬೆಂಗಳೂರುಸುದ್ದಿ

ಏ.27ರಂದು ಬೆಂಗಳೂರಲ್ಲಿ ಬೆಳಗ್ಗೆ 3.30ರಿಂದಲೇ ‘ನಮ್ಮ ಮೆಟ್ರೋ ರೈಲು’ ಸಂಚಾರ ಆರಂಭ -ಕಹಳೆ ನ್ಯೂಸ್

ಬೆಂಗಳೂರು: TCS ವರ್ಲ್ಡ್ 10K ರನ್‌ ಪ್ರಯುಕ್ತ ಮುಂಜಾನೆ ನಮ್ಮ ಮೆಟ್ರೋ ಸಂಚಾರ ಆರಂಭಿಸಲಿದೆ. ಈ ಮೂಲಕ 10ಕೆ ಓಟ ಸ್ಪರ್ಧೆಯಲ್ಲಿ ಭಾಗವಹಿಸುವಂತವರಿಗೆ ಅನುಕೂಲವನ್ನು ಕಲ್ಪಿಸಲಾಗಿದೆ. ಟಿಸಿಎಸ್ ವರ್ಲ್ಡ್ 10ಕೆ - 2025 ಮ್ಯಾರಥಾನ್‌ನ 17ನೇ ಆವೃತ್ತಿಯಲ್ಲಿ ಸಾರ್ವಜನಿಕರಿಗೆ ಭಾಗವಹಿಸಲು ಅನುಕೂಲವಾಗುವಂತೆ, ಬಿಎಂಆರ್‌ಸಿಎಲ್ ದಿನಾಂಕ ಏಪ್ರಿಲ್ 27, 2025ರ ಭಾನುವಾರ ಬೆಳಿಗ್ಗೆ 3:30ಕ್ಕೆ ಮೆಟ್ರೋ ರೈಲು ಸೇವೆಯನ್ನು ಪ್ರಾರಂಭವಾಗಲಿದೆ. ಇದು ಸಾಮಾನ್ಯ ಸಮಯಕ್ಕಿಂತ ಮೂರುವರೆ ಗಂಟೆಗಳ ಮುಂಚೆಯೇ ಪ್ರಾರಂಭವಾಗುತದೆ. ಈ...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಇಸ್ರೋ ಮಾಜಿ ಅಧ್ಯಕ್ಷ, ಪದ್ಮ ವಿಭೂಷಣ ಪುರಸ್ಕೃತ ಡಾ.ಕೆ. ಕಸ್ತೂರಿರಂಗನ್‌ ವಿಧಿವಶ-ಕಹಳೆ ನ್ಯೂಸ್

ಬೆಂಗಳೂರು: ಇಸ್ರೋ ಮಾಜಿ ಅಧ್ಯಕ್ಷ ಕೆ.ಕಸ್ತೂರಿ ರಂಗನ್‌(84ವರ್ಷ) ಅವರು ಶುಕ್ರವಾರ (ಏ.25) ಬೆಂಗಳೂರಿನ ತಮ್ಮ ನಿವಾಸದಲ್ಲಿ ವಿಧಿವಶರಾಗಿರುವುದಾಗಿ ವರದಿ ತಿಳಿಸಿದೆ. ಡಾ.ಕೆ.ಕಸ್ತೂರಿರಂಗನ್‌ ಅವರು ಭಾರತೀಯ ಬಾಹ್ಯಾಕಾಶ ಸಂಸ್ಥೆಯಲ್ಲಿ ಸುದೀರ್ಘ 9ವರ್ಷಕ್ಕೂ ಅಧಿಕ ಕಾಲ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಪದ್ಮವಿಭೂಷಣ ಪ್ರಶಸ್ತಿ ಪುರಸ್ಕೃತ ಕೃಷ್ಣಸ್ವಾಮಿ ಕಸ್ತೂರಿರಂಗನ್‌ ಅವರು ಇಬ್ಬರು ಪುತ್ರರು ಸೇರಿದಂತೆ ಬಂಧು ಬಳಗವನ್ನು ಅಗಲಿದ್ದಾರೆ. 1940 ಅಕ್ಟೋಬರ್‌ 24ರಂದು ಎರ್ನಾಕುಳಂನಲ್ಲಿ ಜನಿಸಿದ್ದರು. ಕಸ್ತೂರಿ ರಂಗನ್‌ ಪೂರ್ವಜರು ತಮಿಳುನಾಡಿನಿಂದ ಕೇರಳದ ವಿವಿಧ ಪ್ರದೇಶಕ್ಕೆ...
ಬೆಂಗಳೂರುಸುದ್ದಿ

ಪೆಹಲ್ಲಾಮ್‌ನಲ್ಲಿ ಉಗ್ರರ ದಾಳಿಯಲ್ಲಿ ಮೃತಪಟ್ಟ ಕನ್ನಡಿಗರ ಕುಟುಂಬಕ್ಕೆ ತಲಾ 10 ಲಕ್ಷ ರೂ. ಪರಿಹಾರ ಘೋಷಣೆ-ಕಹಳೆ ನ್ಯೂಸ್

ಬೆಂಗಳೂರು, ಏ.24- ಕಾಶ್ಮೀರದ ಪೆಹಲ್ಲಾಮ್‌ನಲ್ಲಿ ಉಗ್ರರ ದಾಳಿಯಲ್ಲಿ ಮೃತಪಟ್ಟವರ ಕನ್ನಡಿಗರ ಕುಟುಂಬಕ್ಕೆ ತಲಾ 10 ಲಕ್ಷ ರೂ. ಪರಿಹಾರ ಘೋಷಿಸಲಾಗಿದೆ. ಸಂಕಷ್ಟದಲ್ಲಿರುವ ಕನ್ನಡಿಗರನ್ನು ರಕ್ಷಿಸುವುದು ಸರ್ಕಾರದ ಕರ್ತವ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ನಗರದ ಮತ್ತೀಕೆರೆಯಲ್ಲಿರುವ ಭರತ್ ಭೂಷಣ್ ಅವರ ನಿವಾಸಕ್ಕೆ ಇಂದು ಅವರು ತೆರಳಿ ಅಂತಿಮ ನಮನ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ಕಾಶ್ಮೀರದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮೃತರಾದ ಭರತ್ ಭೂಷಣ್ ಅವರಿಗೆ ಕನ್ನಡ ನಾಡಿನ ಸಮಸ್ತ...
1 72 73 74 75 76 213
Page 74 of 213