Monday, September 14, 2026

ರಾಷ್ಟ್ರೀಯ

ದೆಹಲಿರಾಜ್ಯಸುದ್ದಿ

ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದು ಧರ್ಮೇಂದ್ರ ಪ್ರಧಾನ್ ಕೇಂದ್ರ ಸಚಿವರ ಸ್ಥಾನಕ್ಕೆ ರಾಜೀನಾಮೆ –ಕಹಳೆ ನ್ಯೂಸ್

ನವದೆಹಲಿ: ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದು ಧರ್ಮೇಂದ್ರ ಪ್ರಧಾನ್ ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ರೀತಿ ಪ್ರತಿಭಟನೆಗೆ ಬಗ್ಗಿ ರಾಜೀನಾಮೆ ಸಲ್ಲಿಸಿರುವುದು ಅಪರೂಪದ ಸಂಗತಿಯಾಗಿದೆ. ಈ ಹಿಂದೆ 2018ರಲ್ಲಿ ಲೈಂಗಿಕ ಕಿರುಕುಳ ಆರೋಪದಲ್ಲಿ ಆಕ್ರೋಶ ಎದುರಿಸಿದ್ದ ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ಸ್ಥಾನಕ್ಕೆ ಎಂಜೆ ಅಕ್ಬರ್ ( MJ Akbar) ರಾಜೀನಾಮೆ ನೀಡಿದ್ದರು. ಇದಾದ ಬಳಿಕ ಸುಮಾರು 8 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಕೇಂದ್ರ ಸಚಿವರೊಬ್ಬರು ಪ್ರತಿಭಟನೆಗೆ ಮಣಿದು...
ಬೆಂಗಳೂರುರಾಜ್ಯಸುದ್ದಿ

ತಾವು ಓದಿದ ಕಾಲೇಜಿನಲ್ಲಿ ಹಾಕಿ ಟೂರ್ನಮೆಂಟ್‌ಗೆ ಚಾಲನೆ ನೀಡಿದ ರಾಹುಲ್‌ ದ್ರಾವಿಡ್: ಕ್ರೀಡಾಪಟುಗಳಿಗೆ ನೀಡಿದ್ರು ಮಹತ್ವದ ಸಲಹೆ! – ಕಹಳೆ ನ್ಯೂಸ್

ಬೆಂಗಳೂರು: ಭಾರತೀಯ ಕ್ರಿಕೆಟ್‌ನ 'ದಿ ವಾಲ್' ಖ್ಯಾತಿಯ ರಾಹುಲ್ ದ್ರಾವಿಡ್ ಅವರು ಶುಕ್ರವಾರ ಬೆಂಗಳೂರಿನ ಪ್ರತಿಷ್ಠಿತ 'ಸೇಂಟ್ ಜೋಸೆಫ್ಸ್ ಕಾಲೇಜ್ ಆಫ್ ಕಾಮರ್ಸ್' (ಎಸ್‌ಜೆಸಿಸಿ)ನಲ್ಲಿ ಹಾಕಿ ಟೂರ್ನಮೆಂಟ್‌ಗೆ ಅಧಿಕೃತವಾಗಿ ಚಾಲನೆ ನೀಡಿದರು. ಕಾಲೇಜಿನ ಕಾಮರ್ಸ್‌ ಪದವಿ ವಿಭಾಗದ 75ನೇ ವರ್ಷದ ಸಂಭ್ರಮಾಚರಣೆಯ ಅಂಗವಾಗಿ ಈ  ಕೋಲ್ಗೇಟ್ ಟೋಟಲ್ ಅಂತರ ಕಾಲೇಜು 5 ಎ ಸೈಡ್  ಹಾಕಿ ಟೂರ್ನಿಯನ್ನು ಆಯೋಜಿಸಲಾಗಿದೆ. ಜುಲೈ 24 ಮತ್ತು 25ರಂದು ಎರಡು ದಿನಗಳ ಕಾಲ ನಡೆಯಲಿರುವ...
ದೆಹಲಿರಾಜ್ಯಸುದ್ದಿ

ಕೆನಡಾದಲ್ಲಿ ಭಾರತೀಯ ಮೂಲದ ಮಹಿಳೆ ಹತ್ಯೆ : ಲಿವ್‌ ಇನ್‌ ಪ್ರಿಯಕರ ಅರೆಸ್ಟ್‌ – ಕಹಳೆ ನ್ಯೂಸ್

ನವದೆಹಲಿ: ಕೆನಡಾದ  ಎಡ್ಮಂಟನ್‌ನಲ್ಲಿ ಭಾರತೀಯ ಮೂಲದ ಮಹಿಳೆಯನ್ನು  ಆಕೆಯ ಲಿವ್‌ ಇನ್‌  ಪ್ರಿಯಕರ ಹತ್ಯೆ ಮಾಡಿದ್ದು, ಆತನನ್ನು ಪೊಲೀಸರು ಬಂಧಿಸಿದ್ದಾರೆ. ಪಂಜಾಬ್‌ನ  ಲುಧಿಯಾನ ಜಿಲ್ಲೆಯ ಸಮ್ರಾಲಾ ಮೂಲದ ದಮನ್‌ಪ್ರೀತ್ ಕೌರ್ (23) ಹತ್ಯೆಯಾದ ಮಹಿಳೆ. ಆಕೆಯ ಪ್ರಿಯಕರ ರಿತೀಶ್ ಕುಮಾರ್ (22) ಕೊಲೆಗೈದ ಪ್ರಿಯಕರನಾಗಿದ್ದಾನೆ. ಜು.9 ರಂದು ರಿತೀಶ್‌ ಆಕೆಯ ಕತ್ತು ಹಿಸುಕಿ, ಮಾರಣಾಂತಿಕ ಹಲ್ಲೆ ಮಾಡಿದ್ದ. ಆಕೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಿದ್ದನ್ನು ಕಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಬಳಿಕ...
ಬೆಂಗಳೂರುರಾಜ್ಯಸುದ್ದಿ

ಯುವಕರು ಮೋದಿ ಮೇಲೆ ವಿಶ್ವಾಸ ‌ಇಟ್ಟಿದ್ದಾರೆ, ಪ್ರಧಾನಿಗಳ ಮಾತು ಸಮಾಧಾನ ತಂದಿದೆ: ಸುನೀಲ್‌ ಕುಮಾರ್‌ – ಕಹಳೆ ನ್ಯೂಸ್

ಬೆಂಗಳೂರು: ನೀಟ್ ಅಕ್ರಮದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ  ಅವರ ಮಾತು ಸಮಾಧಾನ ತಂದಿದೆ ಅಂತ ಮಾಜಿ ಸಚಿವ ಸುನೀಲ್ ಕುಮಾರ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ನೀಟ್ ಪೇಪರ್ ಸೋರಿಕೆ ಬಗ್ಗೆ ವಿದ್ಯಾರ್ಥಿಗಳ ಆಕ್ರೋಶ ಎದ್ದಿತ್ತು. ಕೇಂದ್ರ ಸರ್ಕಾರ ಮತ್ತು ಪ್ರಧಾನಿ ಮೋದಿ ಅವರು ಪೂರಕವಾದ ಸ್ಪಂದನೆ‌ ನೀಡಿದ್ದಾರೆ. ಕೂಡಲೇ ನೀಟ್ ಹಗರಣ ತನಿಖೆಗೆ ಸರ್ಕಾರ ಮಾಡ್ತು. ಮರು ಪರೀಕ್ಷೆ ಮಾಡಿದೆ. ಯಶಸ್ವಿಯಾಗಿ ಫಲಿತಾಂಶ ‌ಕೊಟ್ಟಿದೆ. ಈಗ...
ದೆಹಲಿಸುದ್ದಿ

ಲೋಕಸಭೆಯಲ್ಲಿ ಮತ್ತೆ ʻನೀಟ್‌ʼ ಗದ್ದಲ : ಸೋಮವಾರದವರೆಗೆ ಕಲಾಪ ಮುಂದೂಡಿಕೆ – ಕಹಳೆ ನ್ಯೂಸ್

ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನದ 5ನೇ ದಿನವೂ ಲೋಕಸಭೆಯಲ್ಲಿ (Lok Sabha) ʻನೀಟ್‌ʼ (NEET) ಕುರಿತು ಗದ್ದಲ ಮುಂದುವರಿದ ಹಿನ್ನೆಲೆ, ಕಲಾಪವನ್ನ ಸೋಮವಾರ ಬೆಳಿಗ್ಗೆ 11 ಗಂಟೆಯವರೆಗೆ ಮುಂದೂಡಲಾಗಿದೆ. ಹೌದು. ಸಂಸತ್ತಿನ ಮುಂಗಾರು ಅಧಿವೇಶನದ 5ನೇ ದಿನವೂ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ (Rajya Sabha) ತೀವ್ರ ಗದ್ದಲ ಮುಂದುವರಿಯಿತು. ನೀಟ್ (NEET) ಪರೀಕ್ಷೆ ವಿವಾದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ವಿರೋಧ ಪಕ್ಷಗಳು ಸದನ ಆರಂಭವಾಗುತ್ತಿದ್ದಂತೆಯೇ...
ದೆಹಲಿರಾಜ್ಯಸುದ್ದಿ

ಹಿಂಸಾಚಾರದಲ್ಲಿ ತೊಡಗಿದ್ದವರನ್ನು ಪತ್ತೆ ಹಚ್ಚಲು ಎಐ, ಫೇಶಿಯಲ್ ರೆಕಗ್ನಿಷನ್ ಮೊರೆ ಹೋದ ಪೊಲೀಸರು – ಕಹಳೆ ನ್ಯೂಸ್

ನವದೆಹಲಿ: ಬುಧವಾರ ರಾತ್ರಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಪತ್ತೆಹಚ್ಚಲು ದೆಹಲಿ ಪೊಲೀಸರು  ಮುಖ ಗುರುತಿಸುವ ತಂತ್ರಜ್ಞಾನ   ಹಾಗೂ ಕೃತಕ ಬುದ್ಧಿಮತ್ತೆ (AI) ಆಧಾರಿತ ಉಪಕರಣಗಳನ್ನು ಬಳಸಿ ತೀವ್ರ ಶೋಧ ಕಾರ್ಯಾಚರಣೆ ಆರಂಭಿಸಿದ್ದಾರೆ. ಹಿಂಸಾಚಾರದ ವೇಳೆ ಪ್ರತಿಭಟನಾಕಾರರು ಪೊಲೀಸ್ ಸಿಬ್ಬಂದಿಯನ್ನು ಅಟ್ಟಾಡಿಸಿ, ಹಲ್ಲೆ ನಡೆಸಿ, ಅವರ ಲಾಠಿಗಳನ್ನು ಕಸಿದುಕೊಳ್ಳುತ್ತಿರುವ ಹಲವು ವೀಡಿಯೊಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ. ಹಿಂಸಾಚಾರಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಇದುವರೆಗೆ ಒಟ್ಟು 11 ಎಫ್‌ಐಆರ್‌ಗಳನ್ನು ದಾಖಲಿಸಿಕೊಂಡಿದ್ದಾರೆ. ನವದೆಹಲಿ ಡಿಸಿಪಿ...
ಬೆಂಗಳೂರುರಾಜ್ಯಸುದ್ದಿ

ಜು.26ರಂದು ಬೆಂಗಳೂರು ತುಳುವೆರೆ ಚಾವಡಿಯಿಂದ 28ನೇ ವರ್ಷದ ‘ಪರ್ಬದ ಲೇಸ್’ ಕಾರ್ಯಕ್ರಮ – ಕಹಳೆ ನ್ಯೂಸ್

ಬೆಂಗಳೂರು: ಬೆಂಗಳೂರು ತುಳುವೆರೆ ಚಾವಡಿಯ 28ನೇ ವರ್ಷದ ‘ಪರ್ಬದ ಲೇಸ್’  ಕಾರ್ಯಕ್ರಮ ಜುಲೈ 26ರಂದು ಬೆಂಗಳೂರಿನ ರವೀಂದ್ರ ಕ್ಷೇತ್ರದಲ್ಲಿ ನಡೆಯಲಿದೆ. ಭಾನುವಾರ ಬೆಳಗ್ಗೆ 10 ಗಂಟೆಯಿಂದ ಆರಂಭವಾಗಲಿರುವ ಈ ಕಾರ್ಯಕ್ರಮವನ್ನು ಪರಮ ಪೂಜ್ಯ ಶ್ರೀ ಡಾ.ವಿದ್ಯಾವಾಚಸ್ಪತಿ ವಿಶ್ವ ಸಂತೋಷ ಭಾರತಿ ಶ್ರೀಪಾದರು ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಆರೋಗ್ಯ ಸಚಿವ ಯು.ಟಿ.ಖಾದರ್, ಶಾಸಕರಾದ ಅಶೋಕ್ ರೈ, ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ತಾರನಾಥ್ ಗಟ್ಟಿ, ಉದ್ಯಮಿ ಹಾಗೂ...
ಬೆಂಗಳೂರುರಾಜ್ಯಸುದ್ದಿ

ಮೋದಿಯನ್ನು ನಿಂದಿಸಿ ವಿಡಿಯೋ ಹರಿಬಿಟ್ಟ ಯುವಕ ಪೊಲೀಸ್ ವಶಕ್ಕೆ – ಕಹಳೆ ನ್ಯೂಸ್

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರನ್ನು  ನಿಂದಿಸಿ ವಿಡಿಯೋ ಮಾಡಿದ್ದ ಯುವಕನನ್ನು ಬಾಣಾಸವಾಡಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಗರದ ಹಡ್ಸನ್ ಎಂಬಾತನ ಮೇಲೆ ಎಫ್ ಐಆರ್ ದಾಖಲಾಗಿದೆ. ಈತ ಅವಾಚ್ಯ ಶಬ್ದ ಬಳಸಿ ಮೋದಿಯನ್ನು ನಿಂದಿಸಿ ವಿಡಿಯೋ ಮಾಡಿದ್ದ. ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ವೈರಲ್‌ ಆಗಿತ್ತು. ಈ ವಿಡಿಯೋ ವಿರುದ್ಧ ಸರ್ವಜ್ಞನಗರ ಬಿಜೆಪಿ ಬಾಣಸವಾಡಿ ಪೊಲೀಸ್ ಠಾಣೆಗೆ ದೂರು ನೀಡಿತ್ತು. ದೂರಿನ ಆಧಾರದ ಮೇಲೆ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಯುವಕನನ್ನು...
1 8 9 10 11 12 364
Page 10 of 364