ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುಡ್ಡ ಕುಸಿದು ನಾಲ್ವರ ಸಾ*ವು : ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರದ ಚೆಕ್ ವಿತರಣೆ -ಕಹಳೆ ನ್ಯೂಸ್
ಬೆಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುಡ್ಡ ಕುಸಿದು ನಾಲ್ವರು ಮೃತಪಟ್ಟಿದ್ದು, ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂ ಪರಿಹಾರದ ಚೆಕ್ ವಿತರಿಸಲಾಗಿದೆ. ಈ ಬಗ್ಗೆ ಸಚಿವ ದಿನೇಶ್ ಗುಂಡೂರಾವ್ ಎಕ್ಸ್ ಖಾತೆ ಮೂಲಕ ಮಾಹಿತಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಹಿನ್ನೆಲೆ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿ, ಮೃತರ ಕುಟುಂಬದವರಿಗೆ ಸಾಂತ್ವನ ತಿಳಿಸಿ, ಪರಿಹಾರದ ಚೆಕ್ ವಿತರಿಸಿದೆ. ಜೊತೆಗೆ ಮಂಗಳೂರಿನ ಸರ್ಕ್ಯೂಟ್ ಹೌಸ್ನಲ್ಲಿ ಜಿಲ್ಲೆಯ...







