ಮೇ 21ರಂದು ಹಸೆಮಣೆ ಏರಲು ಸಜ್ಜಾದ ‘ಲಕ್ಷ್ಮಿ ಬಾರಮ್ಮ’ ನಟ ಬ್ರೋ ಗೌಡ ಶಮಂತ್ -ಕಹಳೆ ನ್ಯೂಸ್
ಲಕ್ಷ್ಮಿ ಬಾರಮ್ಮ ನಟ ಶಮಂತ್ ಬ್ರೋ ಗೌಡ ಅವರು ಮೇ 21ರಂದು ಹಸೆಮಣೆ ಏರಲು ಸಜ್ಜಾಗಿದ್ದಾರೆ. ಮೇಕಪ್ ಆರ್ಟಿಸ್ಟ್ ಮೇಘನಾ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ಇದೀಗ ಮದುವೆ ತಯಾರಿ ಜೋರಾಗಿ ನಡೆಯುತ್ತಿದೆ. ಅರಿಶಿನ ಶಾಸ್ತ್ರದಲ್ಲಿ ನಟ ಮಿಂದೆದಿದ್ದಾರೆ. ಕಾಲೇಜ್ ಕಾರ್ಯಕ್ರಮವೊಂದರಲ್ಲಿ ಶಮಂತ್ ಗೆಸ್ಟ್ ಆಗಿ ಆಗಮಿಸಿದ್ದರು. ಅಲ್ಲಿ ಮೇಘನಾ ಪರಿಚಯ ಆಗಿತ್ತು. ಅಲ್ಲಿಂದ ಶುರುವಾದ ಸ್ನೇಹ ಮದುವೆಗೆ ಮುನ್ನುಡಿ ಬರೆದಿದೆ. ಮನೆಯವರ ಸಮ್ಮತಿ ಪಡೆದು ಇತ್ತೀಚೆಗೆ ಅದ್ಧೂರಿಯಾಗಿ ನಿಶ್ಚಿತಾರ್ಥ...







