ಕಾಶ್ಮೀರದ ಪಹಲ್ಗಾಮ್ ಉಗ್ರರ ದಾಳಿ : ತನಿಖೆಯ ಹೊಣೆ NIA ಹೆಗಲಿಗೆ ವಹಿಸಿದ ಕೇಂದ್ರ ಗೃಹಸಚಿವಾಲಯ-ಕಹಳೆ ನ್ಯೂಸ್
ಶ್ರೀನಗರ: ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿಯ ತನಿಖೆಯ ಹೊಣೆಯನ್ನು ಕೇಂದ್ರ ಗೃಹಸಚಿವಾಲಯ ಎನ್ಐಎ ಹೆಗಲಿಗೆ ವಹಿಸಿದೆ. ಈ ದಾಳಿಯ ತನಿಖೆಯನ್ನು ಕೇಂದ್ರ ಸರ್ಕಾರ ರಾಷ್ಟ್ರೀಯ ತನಿಖಾ ಸಂಸ್ಥೆ(NIA)ಗೆ ವಹಿಸಿದ್ದು, ಪ್ರಕರಣ ದಾಖಲಿಸಿಕೊಂಡು ಅಧಿಕೃತವಾಗಿ ತನಿಖೆ ಶುರುಮಾಡಲಿದೆ ಎಂದು ವರದಿಗಳು ತಿಳಿಸಿವೆ. ಮೂಲಗಳ ಪ್ರಕಾರ, ತನಿಖೆಗೆ ನಿಯೋಜಿಲ್ಪಟ್ಟ ಎನ್ಐಎ ತಂಡ ಈಗಾಗಲೇ ಪಹಲ್ಗಾಮ್ ತಲುಪಿದೆ, ದಾಳಿ ನಡೆದ ಸ್ಥಳವನ್ನು ಸೂಕ್ಷ್ಮವಾಗಿ ಪರಿಶೀಲಿಸುತ್ತಿದೆ. ಜೊತೆಗೆ ತನಿಖಾ ಏಜೆನ್ಸಿಯ ವಿಧಿವಿಜ್ಞಾನ ಪ್ರಯೋಗಾಲಯ ತಂಡವು...







