ಖ್ಯಾತ ಗಾಯಕಿಯೊಬ್ಬರ ವೈವಾಹಿಕ ವಿಚಾರಕ್ಕೆ ಸಂಬಂಧಿಸಿದಂತೆ ಪುತ್ತೂರು ನ್ಯಾಯಾಲಯದಿಂದ ಮಾಧ್ಯಮ ಹಾಗೂ ಸಾಮಾಜಿಕ ಜಾಲತಾಣದಲ್ಲಿ ಬಿತ್ತರಿತ ವರದಿ, ವಿಡಿಯೋ, ಫೋಟೋಗಳ ತೆರೆವಿಗೆ ಖಡಕ್ ಸೂಚನೆ ಹಾಗೂ ಬಿತ್ತರಿಸದಂತೆ ತಡೆಯಾಜ್ಞೆ- ಕಹಳೆ ನ್ಯೂಸ್
ಪುತ್ತೂರು : ಮಾಧ್ಯಮಗಳಲ್ಲಿ ಬಿತ್ತರಿತವಾಗುತ್ತಿದ್ದ ವರದಿಗಳು ಹಾಗೂ ಸಾಮಾಜಿಕ ಜಾಲತಾಣದಲ್ಲಿ ಮಾಡಿರುವ ಫೋಸ್ಟ್ ಗಳ ಕುರಿತು ಪುತ್ತೂರು ನ್ಯಾಯಾಲಯದಲ್ಲಿ ಖ್ಯಾತ ಗಾಯಕಿಯೊಬ್ಬರ ವೈವಾಹಿಕ ವಿಚಾರಕ್ಕೆ ಸಂಬಂಧಿಸಿದಂತೆ ಖ್ಯಾತ ನ್ಯಾಯವಾದಿ ಮಹೇಶ್ ಕಜೆಯವರ ಮೂಲಕ ತಡೆಯಾಜ್ಞೆ ಕೋರಿ ಅರ್ಜಿ ಸಲ್ಲಿಸಿದ್ದು, ಇದನ್ನು ಗಂಭೀರವಾಗಿ ಪರಿಗಣಿಸಿದ ಮಾನ್ಯ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರಾದ ಪ್ರಕೃತಿ ಕಲ್ಯಾಣಪುರ್ ತಡೆಯಾಜ್ಞೆ ನೀಡಿ ಆದೇಶ ಮಾಡಿದ್ದಾರೆ. ಈ ಪ್ರಕರಣದಲ್ಲಿ ವಿಚ್ಛೇದನ ಪ್ರಕ್ರಿಯೆಯ ವಿಷಯವನ್ನು ಎಲೆಕ್ಟ್ರಾನಿಕ್, ಮುದ್ರಣ ಮತ್ತು ಸಾಮಾಜಿಕ...







