Monday, September 14, 2026

ರಾಷ್ಟ್ರೀಯ

ಜಿಲ್ಲೆದೆಹಲಿರಾಜ್ಯಸುದ್ದಿ

ತಮಿಳುನಾಡಿನಲ್ಲಿ ಗೋಹತ್ಯೆ ನಿಷೇಧ ವಿವಾದ; ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ಮಧ್ಯಂತರ ತಡೆ -ಕಹಳೆ ನ್ಯೂಸ್

ನವದೆಹಲಿ: ಬಕ್ರೀದ್ ಸೇರಿದಂತೆ ಯಾವುದೇ ದಿನ ತಮಿಳುನಾಡಿನಾದ್ಯಂತ ಹಸು ಮತ್ತು ಕರುಗಳ ವಧೆಯನ್ನು ಸಂಪೂರ್ಣವಾಗಿ ನಿಷೇಧಿಸಿ ಮದ್ರಾಸ್ ಹೈಕೋರ್ಟ್   ಹೊರಡಿಸಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಮಧ್ಯಂತರ ತಡೆ ನೀಡಿದೆ. ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಾಲಯ, ರಾಜ್ಯಕ್ಕೆ ತಾತ್ಕಾಲಿಕ ಪರಿಹಾರ ನೀಡಿದೆ. ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರಿದ್ದ ಪೀಠ, ಹೈಕೋರ್ಟ್ ಆದೇಶದ ಕೊನೆಯ ಭಾಗಕ್ಕೆ ತಿದ್ದುಪಡಿ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟಿದೆ. ಜೊತೆಗೆ ರಾಜ್ಯ...
ಬೆಂಗಳೂರುರಾಜ್ಯಸುದ್ದಿ

ಮದುವೆಯಾದ ನಾಲ್ಕೇ ತಿಂಗಳಿಗೆ ನವವಿವಾಹಿತೆ ನೇಣಿಗೆ ಶರಣು – ಕಹಳೆ ನ್ಯೂಸ್

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ದಾರುಣ ಘಟನೆ ಸಂಭವಿಸಿದ್ದು, ಮದುವೆಯಾಗಿ(Marriage) ಕೇವಲ ನಾಲ್ಕು ತಿಂಗಳಾಗಿದ್ದ ನವವಿವಾಹಿತೆಯೊಬ್ಬರು ಮನೆಯಲ್ಲಿ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ(Suicide) ಮಾಡಿಕೊಂಡಿದ್ದಾರೆ. ಚಿಕ್ಕಮಗಳೂರು ಮೂಲದ ಶ್ವೇತಾ (25) ಮೃತಪಟ್ಟ ದುರ್ದೈವಿ. ಇವರು ಬೆಂಗಳೂರಿನ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಸುಂಕದಕಟ್ಟೆಯಲ್ಲಿ ವಾಸವಾಗಿದ್ದರು ಹಾಗೂ ಖಾಸಗಿ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಮೃತ ಶ್ವೇತಾ ಕಳೆದ ನಾಲ್ಕು ತಿಂಗಳ ಹಿಂದಷ್ಟೇ ಪ್ರೀತಿಸಿದ ಯುವಕನ ಕೈಹಿಡಿದು ಹೊಸ ಜೀವನಕ್ಕೆ ಕಾಲಿಟ್ಟಿದ್ದರು. ಆದರೆ, ವೈವಾಹಿಕ...
ದೆಹಲಿರಾಜ್ಯಸುದ್ದಿ

ಕೆಂಪುಕೋಟೆಗೆ ಬಾಂಬ್ ಬೆದರಿಕೆ: ತೀವ್ರ ಶೋಧದ ಬಳಿಕ ಹುಸಿ ಕರೆ ಎಂದು ದೃಢಪಡಿಸಿದ ಪೊಲೀಸರು – ಕಹಳೆ ನ್ಯೂಸ್

ನವದೆಹಲಿ: ಐತಿಹಾಸಿಕ ಕೆಂಪುಕೋಟೆಗೆ ಬಾಂಬ್ ಇಟ್ಟು ಸ್ಫೋಟಿಸುವುದಾಗಿ ಅಪರಿಚಿತ ವ್ಯಕ್ತಿಯೊಬ್ಬ ನೀಡಿದ ಬೆದರಿಕೆ ಕರೆ ಭಾರಿ ಆತಂಕ ಸೃಷ್ಟಿಸಿದೆ. ಪೊಲೀಸರು ಹಾಗೂ ಭದ್ರತಾ ಸಂಸ್ಥೆಗಳ ಸುದೀರ್ಘ ತಪಾಸಣೆಯ ಬಳಿಕ ಇದು ಹುಸಿ ಕರೆ ಎಂದು ದೃಢಪಟ್ಟಿದೆ. ಮುಂಬೈ ಪೊಲೀಸ್  ಕಂಟ್ರೋಲ್ ರೂಂಗೆ ಕರೆ ಮಾಡಿದ ಅಪರಿಚಿತನೊಬ್ಬ, ದೆಹಲಿಯ ಕೆಂಪುಕೋಟೆಯಲ್ಲಿ ಬಾಂಬ್ ಸ್ಫೋಟಗೊಳ್ಳಲಿದೆ ಎಂದಿದ್ದ. ತಕ್ಷಣವೇ ಎಚ್ಚೆತ್ತ ಮುಂಬೈ ಪೊಲೀಸರು ಈ ಮಾಹಿತಿಯನ್ನು ದೆಹಲಿ ಪೊಲೀಸ್  ಕಂಟ್ರೋಲ್ ರೂಂಗೆ ರವಾನಿಸಿದರು. ಮಾಹಿತಿ ಸಿಗುತ್ತಿದ್ದಂತೆಯೇ...
ಬೆಂಗಳೂರುರಾಜ್ಯಸುದ್ದಿ

ಅಕ್ಟೋಬರ್ ಅಥವಾ ನವೆಂಬರ್‌ನಲ್ಲಿ ಪಂಚಾಯತ್‌ ಚುನಾವಣೆ: ಈಶ್ವರ ಖಂಡ್ರೆ – ಕಹಳೆ ನ್ಯೂಸ್

ಬೆಂಗಳೂರು: ರಾಜ್ಯದ ಬಹುತೇಕ ಪಂಚಾಯತ್‌ಗಳ ಆಡಳಿತಾವಧಿ ಮುಗಿದಿದ್ದು, ಅಕ್ಟೋಬರ್ ಅಥವಾ ನವೆಂಬರ್‌ನಲ್ಲಿ ಚುನಾವಣೆ ನಡೆಯಲಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ. ವಿಕಾಸಸೌಧದ ತಮ್ಮ ಕಚೇರಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲವು ಪಂಚಾಯತ್‌ಗಳ ಮೇಲ್ದರ್ಜೆಯಿಂದಾಗಿ ಕ್ಷೇತ್ರ ಪುನರ್ ವಿಂಗಡಣೆ ಮಾಡಬೇಕಾಗಿ ಬಂದಿದ್ದು, ಈ ತಿಂಗಳ ಅಂತ್ಯ ಅಥವಾ ಮುಂದಿನ ತಿಂಗಳಲ್ಲಿ ಈ ಪ್ರಕ್ರಿಯೆ ಮುಗಿಸಿ, ಮೀಸಲಾತಿ ನಿರ್ಧರಿಸಿ ರಾಜ್ಯ ಚುನಾವಣೆ ಆಯೋಗಕ್ಕೆ ಸಲ್ಲಿಸಲಾಗುವುದು. ಆಯೋಗವು 45...
ಬೆಂಗಳೂರುರಾಜ್ಯಸುದ್ದಿ

ಕೇಂದ್ರ ಸಚಿವ ಹೆಚ್‌ಡಿಕೆ ಭೇಟಿಯಾದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ – ಕಹಳೆ ನ್ಯೂಸ್

ಬೆಂಗಳೂರು: ಶಾಸಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ  ಅವರಿಂದು (ಜು.10) ಕೇಂದ್ರ ಸಚಿವ, ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿಯಾಗಿದ್ದಾರೆ. ಬೆಂಗಳೂರಿನಲ್ಲಿ ಭೇಟಿಯಾದ ಅವರು ರಾಜ್ಯ ರಾಜಕೀಯದ ಪ್ರಚಲಿತ ವಿದ್ಯಮಾನಗಳ ಕುರಿತು ಸಮಗ್ರವಾಗಿ ಚರ್ಚಿಸಿದ್ದಾರೆ. ಇದೇ ವೇಳೆ ರೈತವಿರೋಧಿ, ಜನವಿರೋಧಿ ಭ್ರಷ್ಟ ಕಾಂಗ್ರೆಸ್ ಸರ್ಕಾರದ ವಿರುದ್ಧ ಮುಂದಿನ ಹೋರಾಟದ ರೂಪುರೇಷೆಗಳು, ಮುಂಬರುವ ಚುನಾವಣಾ ಸವಾಲುಗಳನ್ನು ಮತ್ತಷ್ಟು ಸಮರ್ಥವಾಗಿ ಎದುರಿಸುವ ನಿಟ್ಟಿನಲ್ಲಿ ಎರಡೂ ಪಕ್ಷಗಳ ಮೈತ್ರಿಯನ್ನು ಬಲಪಡಿಸಿ, ಒಂದಾಗಿ...
ಮುಂಬೈಸುದ್ದಿ

LPG ಸಿಲಿಂಡರ್‌ ಅಭಾವದ ನಡುವೆ ʻಮಹಾʼ ಮಳೆಗೆ ಕೊಚ್ಚಿ ಹೋದ 3,000 ಸಿಲಿಂಡರ್‌ -ಕಹಳೆ ನ್ಯೂಸ್

ಮುಂಬೈ: ಭಾರೀ ಮಳೆಯಿಂದಾಗಿ  ಮಹಾರಾಷ್ಟ್ರದ  ರಾಯಗಢದ HPCL ಬಾಟ್ಲಿಂಗ್ ಸ್ಥಾವರಕ್ಕೆ ಪಾತಾಳಗಂಗಾ ನದಿ ನೀರು ನುಗ್ಗಿ 3,000 LPG ಸಿಲಿಂಡರ್‌ಗಳು  ತೇಲಿ ಹೋಗಿವೆ. ಸಿಲಿಂಡರ್‌ಗಳು ತೇಲಿ ಹೋಗುವ ವಿಡಿಯೋ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. LPG ಸಿಲಿಂಡರ್‌ ಅಭಾವದ ನಡುವೆ ಈ ಘಟನೆ ಸಂಭವಿಸಿದ್ದು, ತೀವ್ರ ಆಘಾತಕ್ಕೆ ಕಾರಣವಾಗಿದೆ. ಪನ್ವೇಲ್ ತಾಲೂಕಿನ ಚವಾಣೆ ಗ್ರಾಮದಲ್ಲಿರುವ HPCL ನ ಪಾತಾಳಗಂಗಾ LPG ಬಾಟ್ಲಿಂಗ್ ಸ್ಥಾವರದಲ್ಲಿ ( HPCL Bottling...
ಮುಂಬೈರಾಜ್ಯಸುದ್ದಿ

ಕೇತನ್‌ ಜೊತೆ ಎಂಗೆಜ್‌ಮೆಂಟ್‌, ಲವ್ವರ್ ಜೊತೆ ರಹಸ್ಯ ಮದುವೆ – ಬಗೆದಷ್ಟು ಬಯಲಾಗ್ತಿದೆ ಕ್ರಿಮಿನಲ್‌ ಬ್ಯೂಟಿ ಸಿಯಾ ಪುರಾಣ – ಕಹಳೆ ನ್ಯೂಸ್

ಮುಂಬೈ: ಭಾವಿ ಪತಿ ಕೇತನ್‌ ಅಗರ್ವಾಲ್‌ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ಸಿಯಾ ಗೋಯಲ್‌ (Siya) ಹಾಗೂ ಚೇತನ್‌ ಚೌಧರಿ ಇಬ್ಬರು ರಹಸ್ಯವಾಗಿ ಮದುವೆಯಾಗಿದ್ದರು ಎಂಬ ವಿಚಾರ ಬೆಳಕಿಗೆ ಬಂದಿದೆ. ಸಿಯಾ ಮತ್ತು ಚೇತನ್ ನಾಲ್ಕು ತಿಂಗಳ ಹಿಂದೆ ಸ್ಥಳೀಯ ರಿಜಿಸ್ಟ್ರಾರ್ ಕಚೇರಿಯಲ್ಲಿ ರಹಸ್ಯವಾಗಿ ವಿವಾಹವಾಗಿದ್ದರು ಎಂಬ ವಿಚಾರ ತನಿಖೆ ವೇಳೆ ಬೆಳಕಿಗೆ ಬಂದಿದೆ. ಈ ಬಗ್ಗೆ ಪುಣೆ ಗ್ರಾಮೀಣ ಪೊಲೀಸರು ಪರಿಶೀಲಿಸುತ್ತಿದ್ದಾರೆ. ಸಾಕ್ಷಿಗಳಾಗಿ ಸಹಿ ಹಾಕಿದ್ದಾರೆ ಎನ್ನಲಾದ ಗೋಯಲ್ ಅವರ...
ಬೆಂಗಳೂರುರಾಜ್ಯಸುದ್ದಿ

ಹಿಟ್ & ರನ್‌ಗೆ 28 ವರ್ಷದ ಯುವಕ ಬಲಿ; ಬೈಕ್‌ಗೆ ಡಿಕ್ಕಿ ಹೊಡೆದು ಚಾಲಕ ಎಸ್ಕೇಪ್ – ಕಹಳೆ ನ್ಯೂಸ್

ಬೆಂಗಳೂರು: ಹಿಟ್ ಅಂಡ್ ರನ್ ಪ್ರಕರಣದಲ್ಲಿ 28 ವರ್ಷದ ಯುವಕ ಸಾವನ್ನಪ್ಪಿರುವ ಘಟನೆ ಬೆಂಗಳೂರು ಉತ್ತರದ ಚಿಕ್ಕಬಾಣಾವರ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯ ಕೆಂಪಯ್ಯನಗರ ಬಳಿ ನಡೆದಿದೆ. 28 ವರ್ಷದ ವಿನೋದ್ ಮೃತ ಯುವಕ. ವಿನೋದ್ ತನ್ನ ಅಣ್ಣನ ಜೊತೆ ಸೇರಿ ಮಾದನಾಯಕನಹಳ್ಳಿಯಲ್ಲಿ ಬೇಕರಿ ನಡೆಸುತ್ತಿದ್ದ. ಪ್ರತಿದಿನದಂತೆ ಅಂಗಡಿ ಮುಚ್ಚಿಕೊಂಡು ಹೆಸರಘಟ್ಟದಲ್ಲಿರುವ ಮನೆಗೆ ಆಕ್ಟಿವಾ ಬೈಕ್‌ನಲ್ಲಿ ವಾಪಸ್ ಆಗುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಕೆಂಪಯ್ಯನಗರ ಬಳಿ ಎದುರಿನಿಂದ ಬಂದ...
1 11 12 13 14 15 364
Page 13 of 364