Friday, March 20, 2026

ರಾಷ್ಟ್ರೀಯ

ಗೋವಾಸುದ್ದಿ

ನವೆಂಬರ್ 30 ರಂದು ಸನಾತನ ಸಂಸ್ಥೆಯ ರಜತ ಮಹೋತ್ಸವ ಸಮಾರಂಭ; ಕಾರ್ಯಕ್ರಮದಲ್ಲಿ ಪ.ಪೂ. ಗೋವಿಂದದೇವ ಗಿರಿ ಮಹಾರಾಜರಿಗೆ ಮುಖ್ಯಮಂತ್ರಿಗಳ ಹಸ್ತದಿಂದ ಅಮೃತಮಹೋತ್ಸವ ಸನ್ಮಾನ-ಕಹಳೆ ನ್ಯೂಸ್

ಪಣಜಿ - ಗೋವಾ ರಾಜ್ಯದಲ್ಲಿ ಸ್ಥಾಪನೆಯಾಗಿರುವ ಮತ್ತು ಪ್ರಸ್ತುತ ಭಾರತದಾದ್ಯಂತ ಸನಾತನ ಹಿಂದೂ ಧರ್ಮದ ತೇಜಸ್ವಿ ಪ್ರಚಾರ ಮಾಡುತ್ತಿರುವ ಸನಾತನ ಸಂಸ್ಥೆಯ ರಜತ ಮಹೋತ್ಸವ ಸಮಾರಂಭವನ್ನು ನವೆಂಬರ್ 30 ರಂದು ಆಯೋಜಿಸಲಾಗಿದೆ. ಈ ಕಾರ್ಯಕ್ರಮದ ನಿಮಿತ್ತ ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ನ್ಯಾಸ ಕೋಶಾಧ್ಯಕ್ಷರಾದ ಪ.ಪೂ. ಸ್ವಾಮಿ ಗೋವಿಂದದೇವ ಗಿರಿ ಮಹಾರಾಜರ ಅಮೃತ ಮಹೋತ್ಸವ ಸನ್ಮಾನ ಗೋವಾದ ಮುಖ್ಯಮಂತ್ರಿ ಶ್ರೀ. ಪ್ರಮೋದ ಸಾವಂತ ಇವರ ಶುಭಹಸ್ತದಿಂದ ನಡೆಯಲಿದೆ. ಈ ಸಮಾರಂಭದಲ್ಲಿ ಕೇಂದ್ರ...
ಮುಂಬೈರಾಜಕೀಯಸುದ್ದಿ

ದೇವೇಂದ್ರ ಫಡ್ನವೀಸ್ ಗೆ ಮಹಾರಾಷ್ಟ್ರ ಸಿಎಂ ಹುದ್ದೆ ಬಹುತೇಕ ಖಚಿತ – ಕಹಳೆ ನ್ಯೂಸ್

ಮುಂಬೈ: ಮಹಾರಾಷ್ಟ್ರದ ಮುಂದಿನ ಮುಖ್ಯಮಂತ್ರಿಯ ಬಗ್ಗೆ ಬಿಜೆಪಿ ನಾಯಕತ್ವದ ಯಾವುದೇ ನಿರ್ಧಾರವನ್ನು ಒಪ್ಪಿಕೊಳ್ಳುವುದಾಗಿ ಏಕನಾಥ್ ಶಿಂಧೆ ಅವರು ಸ್ಪಷ್ಟವಾಗಿ ಹೇಳಿರುವ ಮೂಲಕ, ದೇವೇಂದ್ರ ಫಡ್ನವೀಸ್ ಅವರಿಗೆ ಮುಖ್ಯಮಂತ್ರಿ ಪಟ್ಟ ನೀಡಲು ಇದ್ದ ಗೊಂದಲ ನಿವಾರಣೆಯಾಗಿದೆ. ಆದರೂ ಬಿಜೆಪಿ ಇತರ ಆಯ್ಕೆಗಳನ್ನು ಪರಿಶೀಲಿಸುತ್ತಿದೆ. ವಿಧಾನಸಭೆ ಚುನಾವಣೆಯಲ್ಲಿ 288ರಲ್ಲಿ 132 ಸ್ಥಾನಗಳನ್ನು ಪಡೆದು ಬಿಜೆಪಿ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದು, ಮಹಾಯುತಿ ಮೈತ್ರಿಕೂಟ 230 ಸ್ಥಾನಗಳಲ್ಲಿ ಭರ್ಜರಿ ಗೆಲುವು ಸಾಧಿಸಿದ್ದರೂ ಏಕನಾಥ್ ಶಿಂಧೆ ಅವರನ್ನು...
ಕ್ರೈಮ್ಬೆಂಗಳೂರುರಾಜಕೀಯರಾಜ್ಯಸುದ್ದಿ

ಮುಸ್ಲಿಮರಿಗೆ ಮತದಾನದ ಹಕ್ಕಿಲ್ಲದಂತೆ ಮಾಡಬೇಕು ಎಂದಿದ್ದ ಚಂದ್ರಶೇಖರ ಸ್ವಾಮೀಜಿ ವಿರುದ್ಧ ಎಫ್‌ಐಆರ್‌ – ಕಹಳೆ ನ್ಯೂಸ್

ಬೆಂಗಳೂರು: ಮುಸ್ಲಿಮರಿಗೆ (Muslims) ಮತದಾನದ ಹಕ್ಕು ಇಲ್ಲದಂತೆ ಮಾಡಬೇಕು ಕರೆ ನೀಡಿದ್ದ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಚಂದ್ರಶೇಖರ ಸ್ವಾಮೀಜಿ (Vokkaliga seer Chandrashekar Swamiji ) ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಸೈಯ್ಯದ್‌ ಅಬ್ಬಾಸ್‌ ಎಂಬವರು ಸ್ವಾಮೀಜಿ ವಿರುದ್ಧ ದೂರು ನೀಡಿದ್ದು ಬಿಎನ್‌ಎಸ್‌ ಸೆಕ್ಷನ್‌ 299 (ಯಾವುದೇ ಧರ್ಮವನ್ನು ಅಪಮಾನಗೊಳಿಸಿ ಅವರ ಧಾರ್ಮಿಕ ಭಾವನೆಗಳಿಗೆ ಆಘಾತ ಉಂಟುಮಾಡುವ ಉದ್ದೇಶದಿಂದ ಬುದ್ಧಿಪೂರ್ವಕವಾಗಿ ಮತ್ತು ದ್ವೇಷ ಭಾವನೆಯಿಂದ ಮಾಡಿದ ಕೃತ್ಯ) ಅಡಿ ಉಪ್ಪಾರಪೇಟೆ ಠಾಣೆಯಲ್ಲಿ...
ಮುಂಬೈರಾಜಕೀಯರಾಷ್ಟ್ರೀಯಸುದ್ದಿ

ಮಹಾರಾಷ್ಟ್ರದ ಮುಂದಿನ ಸಿಎಂ ಯಾರು..? ಅಮಿತ್ ಶಾ ನಿವಾಸದಲ್ಲಿ ಮಹಾಯುತಿ ನಾಯಕರ ಮಹತ್ವದ ಸಭೆ – ಕಹಳೆ ನ್ಯೂಸ್

ನವದೆಹಲಿ: ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ಮುಕ್ತಾಯವಾಗಿ ಮಹಾಯುತಿ ಮೈತ್ರಿಕೂಟ ಅಧಿಕಾರಕ್ಕೆ ಬರುತ್ತಿರುವ ಸಂದರ್ಭದಲ್ಲಿ ಮುಂದಿನ ಮುಖ್ಯಮಂತ್ರಿ ಬಗ್ಗೆ ಭಾರೀ ಕುತೂಹಲ ಮೂಡಿದೆ. ಶಿವಸೇನೆ ನಾಯಕ ಏಕನಾಥ್ ಶಿಂಧೆ, ಮಹಾರಾಷ್ಟ್ರದ ಮುಂದಿನ ಸಿಎಂ ಎಂದು ಬಿಂಬಿತವಾಗಿರುವ ಬಿಜೆಪಿ ನಾಯಕ ದೇವೇಂದ್ರ ಫಡ್ನವಿಸ್ ಮತ್ತು ಎನ್‌ಸಿಪಿ ನಾಯಕ ಅಜಿತ್ ಪವಾರ್ ನಿನ್ನೆ ರಾತ್ರಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ನಿವಾಸಕ್ಕೆ ತೆರಳಿ ರಾಜ್ಯದಲ್ಲಿ ಅಧಿಕಾರ ಹಂಚಿಕೆ ಒಪ್ಪಂದದ ಕುರಿತು ಚರ್ಚಿಸಿದರು. ಬಿಜೆಪಿ...
ಕ್ರೈಮ್ಬೆಂಗಳೂರುರಾಜಕೀಯರಾಜ್ಯಸುದ್ದಿ

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಗುರಪ್ಪ ನಾಯ್ಡು ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಿಸಿದ ಶಿಕ್ಷಕಿ..! – ಕಹಳೆ ನ್ಯೂಸ್

ಬೆಂಗಳೂರು: ಶಿಕ್ಷಕಿಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ ಕಾಂಗ್ರೆಸ್ ಕರ್ನಾಟಕ ಘಟಕದ ಪ್ರಧಾನ ಕಾರ್ಯದರ್ಶಿ ಗುರಪ್ಪ ನಾಯ್ಡು ವಿರುದ್ಧ ಕಿರುಕುಳ ಮತ್ತು ಕ್ರಿಮಿನಲ್ ಬೆದರಿಕೆ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬೆಂಗಳೂರಿನ ಬಿಜಿಎಸ್ ಬ್ಲೂಮ್‌ಫೀಲ್ಡ್ ಶಾಲೆಯಲ್ಲಿ 75ಕ್ಕೂ ಹೆಚ್ಚು ಮಹಿಳೆಯರು ಕೆಲಸ ಮಾಡುತ್ತಿದ್ದಾನೆ ಎಂದು 38 ವರ್ಷದ ಸಂತ್ರಸ್ತೆ ದೂರಿನಲ್ಲಿ ತಿಳಿಸಿದ್ದಾರೆ. ನಾಯ್ಡು ಶಾಲೆಯ ಅಧ್ಯಕ್ಷರಾಗಿದ್ದು 2021ರ ಮಾರ್ಚ್ 1ರಿಂದ 2023ರ ಆಗಸ್ಟ್ 15ರವರೆಗೂ ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ...
ಕ್ರೈಮ್ಮುಂಬೈಸುದ್ದಿ

ನಾನ್‌ವೆಜ್ ಸೇವನೆ ಬಿಡುವಂತೆ ಒತ್ತಡ – ಏರ್ ಇಂಡಿಯಾ ಪೈಲಟ್ ಆತ್ಮಹತ್ಯೆ ; ಪ್ರಿಯಕರ ಅರೆಸ್ಟ್ –

ಮುಂಬೈ: ಆಹಾರ ಪದ್ಧತಿಯನ್ನು ಬದಲಾಯಿಸುವಂತೆ ಮತ್ತು ಮಾಂಸಾಹಾರಿ ಆಹಾರವನ್ನು (Nonveg Food) ಸೇವಿಸುವುದನ್ನು ನಿಲ್ಲಿಸುವಂತೆ ಪ್ರಿಯಕರ ಒತ್ತಡ ಹೇರಿದ ಪರಿಣಾಮ ಏರ್ ಇಂಡಿಯಾ ಪೈಲಟ್ (Air India Pilot) ನೇಣಿಗೆ ಶರಣಾದ ಘಟನೆ ಮುಂಬೈನ (Mumbai) ಅಂಧೇರಿಯ ಮರೋಲ್ ಪ್ರದೇಶದಲ್ಲಿ ನಡೆದಿದೆ. ಸೃಷ್ಟಿ ತುಲಿ (25) ಆತ್ಮಹತ್ಯೆಗೆ ಶರಣದ ಪೈಲಟ್. ಈಕೆ ಫ್ಲ್ಯಾಟ್‌ವೊಂದರಲ್ಲಿ ಡೇಟಾ ಕೇಬಲ್‌ನಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಕುರಿತು ಯಾವುದೇ ಡೆತ್‌ನೋಟ್ ಪತ್ತೆಯಾಗಿಲ್ಲ. ಕುಟುಂಬಸ್ಥರು...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಡಿವಿ ಸದಾನಂದ ಗೌಡ ಬಣ್ಣ ಬಯಲು ಮಾಡ್ತೀನಿ, ಧರ್ಮಸ್ಥಳಕ್ಕೆ ಬಂದು ಆಣೆಪ್ರಮಾಣ ಮಾಡಲಿ : ಬಸನಗೌಡ ಪಾಟೀಲ್ ಯತ್ನಾಳ್ ಕಿಡಿ – ಕಹಳೆ ನ್ಯೂಸ್

ವಿಜಯಪುರ : ಯಡಿಯೂರಪ್ಪ ವಿರುದ್ಧ ಕೆಟ್ಟದಾಗಿ ಮಾತನಾಡಿದ್ದೀರಿ, ನಿಮ್ಮ ಬಣ್ಣ ಬಯಲು ಮಾಡ್ತೀನಿ, ಇಲ್ಲವಾದರೆ ಧರ್ಮಸ್ಥಳಕ್ಕೆ ಬಂದು ಆಣೆಪ್ರಮಾಣ ಮಾಡಲಿ ಎಂದು ಡಿವಿಎಸ್‌ಗೆ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸವಾಲು ಎಸೆದಿದ್ದಾರೆ. ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದಾನಂದಗೌಡ ಬಾಯಿ ಮುಚ್ಚಿಕೊಂಡು ಇರಬೇಕು. ಇಲ್ಲದೆ ಹೋದರೆ ಬಂಡವಾಳ ಬಯಲು ಮಾಡುತ್ತೇನೆ. ನಾನು ವಕ್ಫ್ ವಿರುದ್ಧ ಮಾತನಾಡಿದ್ದೇನೆ. ಸದಾನಂದಗೌಡ ಯಾಕೆ ಗಾಬರಿಯಾಗಬೇಕು? ನೀವು ಗಾಬರಿಯಾಗಬೇಡಿ. ನಾಗರಹಾವು-ಎರೆಹುಳ ಎತ್ತನಿಂದೆತ್ತ ಸಂಬಂಧವಯ್ಯ ಸದಾನಂದ....
ಬೆಂಗಳೂರುಸುದ್ದಿ

ಮುಡಾ ಹಗರಣ ವಿಚಾರಣೆ ಡಿ.10ಕ್ಕೆ ಮುಂದೂಡಿಕೆ-ಕಹಳೆ ನ್ಯೂಸ್

ಬೆಂಗಳೂರು: ಮುಡಾ ನಿವೇಶನಗಳನ್ನು ಅಕ್ರಮವಾಗಿ ಪಡೆದ ಪ್ರಕರಣದ ವಿಚಾರಣೆಯನ್ನು ಡಿ.10ಕ್ಕೆ ಮುಂದೂಡಿ ಹೈಕೋರ್ಟ್ ಆದೇಶ ಹೊರಡಿಸಿದೆ. ಡಿ.10 ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ಡೇ ಆಗಲಿದೆ. ಆರೋಪಿ ದೇವರಾಜು ಪರ ವಕೀಲರು ವಾದ ಮಂಡಿಸಿ, ವಿಭಾಗೀಯ ಪೀಠದಲ್ಲಿ ಡಿ.5 ಕ್ಕೆ ವಿಚಾರಣೆ ಬಾಕಿ ಇದೆ. ಹೀಗಾಗಿ ವಿಭಾಗೀಯ ಪೀಠದಲ್ಲಿ ವಿಚಾರಣೆ ಮುಕ್ತಾಯದ ಬಳಿಕ ಇಲ್ಲಿ ವಿಚಾರಣೆ ಕೈಗೆತ್ತಿಕೊಳ್ಳುವಂತೆ ಮನವಿ ಮಾಡಿದರು. ಇದಕ್ಕೆ ಸ್ನೇಹಮಯಿ ಕೃಷ್ಣ ಪರ ವಕೀಲ ಆಕ್ಷೇಪ ವ್ಯಕ್ತಪಡಿಸಿದರು...
1 156 157 158 159 160 321
Page 158 of 321