ಹಿಜಬ್ ಕುರಿತ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಗೆ ಅರ್ಜಿ ; ವಕ್ಫ್ ಬೋರ್ಡ್ ಅಧ್ಯಕ್ಷ ಮೌಲಾನ ಶಫಿ ಸಅದಿ – ಕಹಳೆ ನ್ಯೂಸ್
ಬೆಂಗಳೂರು: ಹಿಜಬ್ ವಿವಾದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಯಾವ ಆಧಾರದಲ್ಲಿ ತೀರ್ಪು ಕೊಟ್ಟಿದೆ ಎಂಬುದು ಗೊತ್ತಿಲ್ಲ. ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲಾಗುವುದು ಎಂದು ವಕ್ಫ್ ಬೋರ್ಡ್ ಅಧ್ಯಕ್ಷ ಮೌಲಾನ ಶಫಿ ಸಅದಿ ತಿಳಿಸಿದ್ದಾರೆ. ಸಂವಿಧಾನಬದ್ಧವಾಗಿ ಕಾನೂನು ಹೋರಾಟ ಮಾಡಲಾಗುವುದು. ಹೆಣ್ಣು ಹಿಜಬ್ ಧರಿಸುವ ಬಗ್ಗೆ ಕುರಾನ್‌ನಲ್ಲಿ ಸ್ಪಷ್ಟ ಉಲ್ಲೇಖವಿದೆ. ಹೈಕೋರ್ಟ್ ಆದೇಶ ಪ್ರಶ್ನಿಸಿ ಉಲೆಮಾ ಒಕ್ಕೂಟದಿಂದ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸುವ ಬಗ್ಗೆ ಚರ್ಚೆ ಮಾಡುತ್ತೇವೆ ಎಂದು ಹೇಳಿದ್ದಾರೆ....







