Monday, September 14, 2026

ರಾಷ್ಟ್ರೀಯ

ದೆಹಲಿಸುದ್ದಿ

ಬಿಸಿಲ ನಡುವೆ ದೆಹಲಿಯಲ್ಲಿ ತಂಪೆರೆದ ಮಳೆರಾಯ : ಇತ್ತ ತಾಪಮಾನ ಹೆಚ್ಚಳದಿಂದ ಆಂಧ್ರ, ಯುಪಿಯಲ್ಲಿ ರೆಡ್ ಅಲರ್ಟ್-ಕಹಳೆ ನ್ಯೂಸ್

ನವದೆಹಲಿ: ಬಿಸಿಲ ಬೇಗೆಯಿಂದ ಬೇಸತ್ತಿದ್ದ ದೆಹಲಿ ಜನರಿಗೆ ಮಳೆರಾಯ ತಂಪೆದರೆ, ಇತ್ತ ಆಂಧ್ರಪ್ರದೇಶ  ಹಾಗೂ ಉತ್ತರ ಪ್ರದೇಶದಲ್ಲಿ  ತಾಪಮಾನ ಹೆಚ್ಚಳದಿಂದ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಇಂದು (ಮೇ 23) ಮುಂಜಾನೆ ರಾಷ್ಟ್ರ ರಾಜಧಾನಿಯ ಕೆಲವು ಭಾಗಗಳಲ್ಲಿ ದಿಢೀರ್ ಮಳೆಯಾಗಿ, ತಂಪು ವಾತಾವರಣ ಸೃಷ್ಟಿಯಾಗಿದೆ. ಆದರೆ ಇದರ ನಡುವೆಯೂ ಹವಾಮಾನ ಇಲಾಖೆ ನಗರದಲ್ಲಿ ಮೇ 28ರವರೆಗೆ ಹೀಟ್‌ವೇವ್ ಮುಂದುವರಿಯಲಿದೆ ಎಂದು ಎಚ್ಚರಿಕೆ ನೀಡಿದೆ. ಈಗಾಗಲೇ ಉತ್ತರ ಪ್ರದೇಶದ ಕೆಲವು...
ಬೆಂಗಳೂರುರಾಜ್ಯಸುದ್ದಿ

ಮಾದಾವರ-ತುಮಕೂರು ಮೆಟ್ರೋ ರೈಲು ಯೋಜನೆ : ಸರ್ಕಾರಕ್ಕೆ ಡಿಪಿಆರ್ ಸಲ್ಲಿಕೆ -ಕಹಳೆ ನ್ಯೂಸ್

ಬೆಂಗಳೂರು: ಮಾದಾವರ-ತುಮಕೂರು ಮೆಟ್ರೋ  ರೈಲು ಯೋಜನೆಗೆ ಸಂಬಂಧಿಸಿದಂತೆ ಸರ್ಕಾರಕ್ಕೆ ಡಿಪಿಆರ್ ಸಲ್ಲಿಕೆ ಮಾಡಲಾಗಿದೆ. ನಿನ್ನೆ ಸಂಜೆ ವಿಧಾನಸೌಧದಲ್ಲಿ ಗೃಹ ಸಚಿವ ಡಾ. ಜಿ.ಪರಮೇಶ್ವರ್ (Dr. G.Parameshwar) ಅವರು ಡಿಪಿಆರ್ ವರದಿ ಸ್ವೀಕರಿಸಿದ್ದಾರೆ. ಮಾದವಾರ-ತುಮಕೂರು ಮೆಟ್ರೋ ರೈಲು ಯೋಜನೆ ಬಗ್ಗೆ ಮುಂದಿನ ಸಂಪುಟ ಸಭೆಯಲ್ಲಿ ಚರ್ಚೆ ಸಾಧ್ಯತೆ ಇದೆ. ಡಿಪಿಆರ್ ಅನ್ನು ಬಿಎಮ್‌ಆರ್‌ಸಿಎಲ್ ಸಿದ್ಧಪಡಿಸಿದೆ. ಈ ಕುರಿತು ಮಾತನಾಡಿದ ಪರಮೇಶ್ವರ್, ತುಮಕೂರಿಗೆ ಮೆಟ್ರೋ ರೈಲು ಬೇಕು ಅನ್ನೋ ನಿಟ್ಟಿನಲ್ಲಿ ಬಹಳ ದಿನಗಳಿಂದ...
ದೆಹಲಿಶಿಕ್ಷಣಸುದ್ದಿ

NEET UG ಪ್ರಶ್ನೆಪತ್ರಿಕೆ ಸೋರಿಕೆ ಕೇಸ್‌ : ಎನ್‌ಟಿಎ ಎಕ್ಸ್‌ಪರ್ಟ್‌ ಬಂಧನ-ಕಹಳೆ ನ್ಯೂಸ್

ನವದೆಹಲಿ: NEET UG 2026 ಭೌತಶಾಸ್ತ್ರ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಟಿಎ ತಜ್ಞರೊಬ್ಬರನ್ನು ಸಿಬಿಐ ಬಂಧಿಸಿದೆ. ಮಹಾರಾಷ್ಟ್ರದ ಪುಣೆಯಲ್ಲಿರುವ ಸೇಥ್ ಹಿರಾಲಾಲ್ ಸರಾಫ್ ಪ್ರಶಾಲಾದಲ್ಲಿ ಉದ್ಯೋಗದಲ್ಲಿರುವ ಆರೋಪಿ ಮನೀಷಾ ಸಂಜಯ್ ಹವಾಲ್ದಾರ್, ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ತಜ್ಞರಾಗಿ ನೇಮಕಗೊಂಡಿದ್ದರು. ಕೇಂದ್ರೀಯ ಸಂಸ್ಥೆಯ ವಿಚಾರಣೆಯ ನಂತರ ಆರೋಪಿಯನ್ನು ಬಂಧಿಸಲಾಗಿದೆ. ಮೇ 16 ರಂದು ಅರೆಸ್ಟ್‌ ಆದ ಸಹ-ಆರೋಪಿ ಮನೀಷಾ ಮಾಂಧರೆ ಜೊತೆ ನೀಟ್ ಯುಜಿ ಪರೀಕ್ಷೆಯ ಹಲವಾರು ಭೌತಶಾಸ್ತ್ರ ಪ್ರಶ್ನೆಗಳನ್ನು...
ದೆಹಲಿವಾಣಿಜ್ಯಸುದ್ದಿ

ವಾಹನ ಸವಾರರಿಗೆ ಮತ್ತೆ ಶಾಕ್; ಪೆಟ್ರೋಲ್ 87, ಡೀಸೆಲ್ 91 ಪೈಸೆ ಏರಿಕೆ-ಕಹಳೆ ನ್ಯೂಸ್

ನವದೆಹಲಿ: ವಾಹನ ಸವಾರರಿಗೆ ಮತ್ತೆ ಶಾಕ್ ಎದುರಾಗಿದೆ. 10 ದಿನಗಳಲ್ಲಿ ಮೂರನೇ ಬಾರಿಗೆ ಪೆಟ್ರೋಲ್, ಡೀಸೆಲ್ ದರ (Petrol-Diesel Price Hike) ಏರಿಕೆ ಮಾಡಲಾಗಿದೆ. ಶನಿವಾರ ಪೆಟ್ರೋಲ್ 87 ಪೈಸೆ ಮತ್ತು ಡೀಸೆಲ್ 91 ಪೈಸೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ 107.14 ರೂ. ಹಾಗೂ ಡೀಸೆಲ್ ಬೆಲೆ 95.04 ರೂ. ಆಗಿದೆ. ಪೆಟ್ರೋಲ್ ಬೆಲೆ ಈಗ ಲೀಟರ್‌ಗೆ 99.51 ರೂ., ಡೀಸೆಲ್ ಬೆಲೆ ಲೀಟರ್‌ಗೆ 92.49 ರೂ. ಆಗಿದೆ. ಮಧ್ಯಪ್ರಾಚ್ಯ...
ದೆಹಲಿರಾಜ್ಯಸುದ್ದಿ

ಇಂದು 19ನೇ ಉದ್ಯೋಗ ಮೇಳ : ಮೋದಿಯಿಂದ 50,000ಕ್ಕೂ ಹೆಚ್ಚು ಯುವಕರಿಗೆ ನೇಮಕಾತಿ ಪತ್ರ ವಿತರಣೆ -ಕಹಳೆ ನ್ಯೂಸ್

ನವದೆಹಲಿ: ಇಂದು 19ನೇ ಆವೃತ್ತಿಯ ಉದ್ಯೋಗ ಮೇಳ ನಡೆಯಲಿದ್ದು, 51,000ಕ್ಕೂ ಹೆಚ್ಚು ಯುವಕರಿಗೆ ಪ್ರಧಾನಿ ನರೇಂದ್ರ ಮೋದಿಯವರು ನೇಮಕಾತಿ ಪತ್ರ ವಿತರಿಸಲಿದ್ದಾರೆ. ಈ ರೋಜ್‌ಗಾರ್ ಮೇಳ ಬೆಳಗ್ಗೆ 11 ಗಂಟೆಗೆ ಪ್ರಾರಂಭವಾಗಲಿದ್ದು, ದೇಶದಲ್ಲಿ ಒಟ್ಟು 42 ಸ್ಥಳಗಳಲ್ಲಿ ನಡೆಯಲಿದೆ. ಪ್ರಧಾನಿ ಮೋದಿ ವೀಡಿಯೋ ಕಾನ್ಫರೆನ್ಸ್ ಮೂಲಕ ನೇಮಕಾತಿ ಪತ್ರಗಳನ್ನು ವಿತರಿಸಲಿದ್ದಾರೆ. ವಿವಿಧ ಸರ್ಕಾರಿ ಇಲಾಖೆಗಳು ಮತ್ತು ಸಂಸ್ಥೆಗಳಲ್ಲಿ ಹೊಸದಾಗಿ ನೇಮಕಗೊಂಡ ಯುವಕರಿಗೆ 51,000 ಕ್ಕೂ ಹೆಚ್ಚು ನೇಮಕಾತಿ ಪತ್ರಗಳನ್ನು ವಿತರಿಸಲಿದ್ದಾರೆ. ಈ...
ದೆಹಲಿರಾಜ್ಯಸುದ್ದಿ

ಉಮರ್ ಖಾಲಿದ್ ಗೆ ಮೂರು ದಿನಗಳ ಮಧ್ಯಂತರ ಜಾಮೀನು ಮಂಜೂರು – ಕಹಳೆ ನ್ಯೂಸ್

ನವದೆಹಲಿ: ದೆಹಲಿ ಗಲಭೆ ಪ್ರಕರಣದ ಪ್ರಮುಖ ಆರೋಪಿ ಉಮರ್ ಖಾಲಿದ್ ಗೆ ದೆಹಲಿ ಹೈಕೋರ್ಟ್ ಮೂರು ದಿನಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. 2020ರಲ್ಲಿ ಈಶಾನ್ಯ ದೆಹಲಿ ಭಾಗದಲ್ಲಿ ನಡೆದಿದ್ದ ಗಲಭೆ ಪ್ರಕರಣದ ರೂವಾರಿ ಉಮರ್ ಖಾಲಿದ್ ಗೆ ಜೂನ್ 1ರಿಂದ ಜೂನ್ 3ರವರೆಗೆ ಮೂರು ದಿನ್ಗಳ ಮಧ್ಯಂತರ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಲಾಗಿದೆ. ಉಮರ್ ಖಾಲಿದ್ ಜಾಮೀನು ಅರ್ಜಿಯನ್ನು ದೆಹಲಿಯ ಹೆಚ್ಚುವರಿ ಸೆಷನ್ಸ್ ಕೋರ್ಟ್ ಮಂಗಳವಾರ ವಜಾಗೊಳಿಸಿತ್ತು. ಇದನ್ನು...
ದೆಹಲಿರಾಜ್ಯಸುದ್ದಿ

ಅಪರಿಚಿತ ವ್ಯಕ್ತಿಯ ಗುಂಡೇಟಿಗೆ ಪುಲ್ವಾಮಾ ದಾಳಿಯ ಮಾಸ್ಟರ್‌ಮೈಂಡ್‌ ಹಮ್ಜಾ ಬುರ್ಹಾನ್‌ ಹತ್ಯೆ -ಕಹಳೆ ನ್ಯೂಸ್

ನವದೆಹಲಿ : 2019ರ ಪುಲ್ವಾಮಾ ಉಗ್ರ ದಾಳಿಯ (Pulwama Attack) ಮಾಸ್ಟರ್ ಮೈಂಡ್ ಹಮ್ಜಾ ಬುರ್ಹಾನ್‌ನನ್ನು ಪಾಕ್ ಆಕ್ರಮಿತ ಕಾಶ್ಮೀರದಲ್ಲಿ  ಅಪರಿಚಿತ ವ್ಯಕ್ತಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ತರಬೇತುದಾರನ ರೂಪದಲ್ಲಿ ಅಡಗಿದ್ದ ಹಮ್ಜಾ ಬುರ್ಹಾನ್ ಅಲಿಯಾಸ್ ‘ಡಾಕ್ಟರ್’ ಮೇಲೆ ಅಪರಿಚಿತ ವ್ಯಕ್ತಿಗಳು ಮುಜಾಫರಾಬಾದ್‌ ಕಚೇರಿಯೊಳಗೆ ನುಗ್ಗಿ ಹಲವು ಬಾರಿ ಗುಂಡಿನ ದಾಳಿ ನಡೆಸಿದ್ದಾರೆ. ಗುಂಡೇಟಿನಿಂದ ಗಂಭೀರವಾಗಿ ಗಾಯಗೊಂಡಿದ್ದ ಆತ ಬಳಿಕ ಮೃತಪಟ್ಟಿದ್ದಾನೆ ಎಂದು ವರದಿಯಾಗಿದೆ. ಜಮ್ಮು-ಕಾಶ್ಮೀರದ ಪುಲ್ವಾಮಾ ಮೂಲದ ಹಮ್ಜಾ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಬೆಂಗಳೂರುರಾಜ್ಯವಾಣಿಜ್ಯಸುದ್ದಿ

ದಿ ಆರ್ಟ್ ಆಫ್ ಜ್ಯುವೆಲ್ಲರಿ ಮ್ಯಾಗಜೀನ್ ವಿಶೇಷ ಸಂಚಿಕೆಯಲ್ಲಿ ಜ್ಯುವೆಲ್ಲರಿಗಳಿಗೆ ಶ್ರೇಯಾಂಕ : ಭಾರತದ 100 ಜ್ಯುವೆಲ್ಲರಿ ಮಳಿಗೆಗಳಲ್ಲಿ ಪುತ್ತೂರಿನ ಜಿ ಎಲ್ ಆಚಾರ್ಯ ಜ್ಯುವೆಲ್ಲರ್ಸ್‌ಗೆ ಸ್ಥಾನ -ಕಹಳೆ ನ್ಯೂಸ್

ಪುತ್ತೂರು:ದಿ ಆರ್ಟ್‌ ಆಫ್ ಜ್ಯುವೆಲ್ಲರಿ(ಎಒಜೆ) ಮ್ಯಾಗಜೀನ್ 2024-25ರ ಅವಧಿಗೆ ಭಾರತದ ಸರಿ ಸುಮಾರು 5ಲಕ್ಷ ಜ್ಯುವೆಲ್ಲರಿಗಳ ಪೈಕಿ ಒಟ್ಟು ವಾರ್ಷಿಕ ವಹಿವಾಟಿನ ಆಧಾರದ ಮೇಲೆ ಜ್ಯುವೆಲ್ಲರಿ ಸಂಸ್ಥೆಗಳ ರ್ಯಾಂಕಿಂಗ್ ವಿಶೇಷ ಸಂಚಿಕೆಯನ್ನು ಬಿಡುಗಡೆ ಮಾಡಲಾಗಿದ್ದು, ಅದರಲ್ಲ ಪುತ್ತೂರು ಸೇರಿದಂತೆ ಹಲವು ಕಡೆ ಶಾಖೆಗಳನ್ನು ಹೊಂದಿರುವ ಜಿ ಎಲ್ ಆಚಾರ್ಯ ಜ್ಯುವೆಲ್ಲರ್ಸ್ ಸಂಸ್ಥೆಯೂ ಟಾಪ್ ಪಟ್ಟಿಯಲ್ಲಿ ಸ್ಥಾನ ಪಡೆದಿದೆ. ದಿ ಆರ್ಟ್ ಆಫ್‌ ಜ್ಯುವೆಲ್ಲರಿ ಸಂಚಿಕೆಯಲ್ಲಿ ಭಾರತದಲ್ಲಿ ಚಿನ್ನ ಮತ್ತು ಆಭರಣಗಳ...
1 25 26 27 28 29 364
Page 27 of 364