ರಾಜ್ಯ ಸರ್ಕಾರಕ್ಕೆ ಬಜೆಟ್ ಮಂಡಿಸಲು ಯಾವುದೇ ನೈತಿಕತೆ ಇಲ್ಲ; ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆ-ಕಹಳೆ ನ್ಯೂಸ್
ಬೆಂಗಳೂರು: 2021-22ನೇ ಸಾಲಿನ ಬಜೆಟ್ ಮಂಡನೆಗೆ ಅಧಿವೇಶನ ಕರೆದಿದ್ದಾರೆ. ಆದರೆ ರಾಜ್ಯ ಸರ್ಕಾರಕ್ಕೆ ಬಜೆಟ್ ಮಂಡಿಸಲು ಯಾವುದೇ ನೈತಿಕತೆ ಇಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ಜನವರಿ 27 ರಂದ ಬಿ ಎಸ್ ವೈ ಮತ್ತು ನಿರಾಣಿ ವಿರುದ್ಧ ಪ್ರಕರಣ ದಾಖಲಾಗಿದೆ. ತಮ್ಮ ವಿರುದ್ಧದ ಪ್ರಕರಣ ಪ್ರಶ್ನಿಸಿ ಕೋರ್ಟ್ ಮೊರೆ ಹೋಗಿದ್ದರು. ಆದರೆ ಹೈಕೋರ್ಟ್ ಇಬ್ಬರ ವಿರುದ್ಧ ತನಿಖೆಗೆ ಆದೇಶಿಸಿತು. ಹೈಕೋರ್ ಆದೇಶ...







