Recent Posts

Saturday, April 25, 2026

ರಾಷ್ಟ್ರೀಯ

ಬೆಂಗಳೂರುರಾಜ್ಯಸುದ್ದಿ

ಮುಂಜಾನೆ ಮನೆಯಿಂದ ಹೋಗಿದ್ದ ವ್ಯಕ್ತಿ ಕಾರಿನಲ್ಲಿ ಶವವಾಗಿ ಪತ್ತೆ : ಕೊಲೆ ಶಂಕೆ -ಕಹಳೆ ನ್ಯೂಸ್

ಬೆಂಗಳೂರು: ಭಾನುವಾರ ಮುಂಜಾನೆ ಮನೆಯಿಂದ ಹೋಗಿದ್ದ ವ್ಯಕ್ತಿ ಕಾರಿನಲ್ಲಿ ಶವವಾಗಿ ಪತ್ತೆಯಾದ ಘಟನೆ ಬೆಂಗಳೂರಿನ ಮಣಿಪಾಲ್ ಕೌಂಟಿ ರಸ್ತೆಯಲ್ಲಿ ನಡೆದಿದೆ. ಬಸಾಪುರ ನಿವಾಸಿ ನಾರಾಯಣಪ್ಪ (56) ಮೃತ ದುರ್ದೈವಿ. ನಾರಾಯಣಪ್ಪ ಮುಂಜಾನೆ 5 ಗಂಟೆಗೆ ಮನೆಯಿಂದ ತೆರಳಿದ್ದರು. ಬಳಿಕ ಸ್ವಿಫ್ಟ್ ಕಾರಿನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಕಾರಿನಲ್ಲಿದ್ದ ಶವವನ್ನು ನೋಡಿ ಸಾರ್ವಜನಿಕರು ಪೋಲಿಸರಿಗೆ ಮಾಹಿತಿ ಮುಟ್ಟಿಸಿದ್ದಾರೆ. ಇದನ್ನೂ ಓದಿ:‌ ಯೋಗೇಶ್ ಗೌಡ ಹತ್ಯೆ ಕೇಸ್; ಪರಸ್ಪರ 57 ಬಾರಿ ಮೊಬೈಲ್ ಕರೆ...
ದೆಹಲಿಸುದ್ದಿ

ಯುವಕರ ಮೈಂಡ್‌ವಾಶ್‌ ಮಾಡಿ ಭಯೋತ್ಪಾದನೆಗೆ ಸೆಳೆಯಲು ಯತ್ನ : ನಾಲ್ವರು ಉಗ್ರರು ಅರೆಸ್ಟ್‌-ಕಹಳೆ ನ್ಯೂಸ್

ನವದೆಹಲಿ: ಸಾಮಾಜಿಕ ಜಾಲತಾಣಗಳಲ್ಲಿ ಯುವಕರನ್ನು ಭಯೋತ್ಪಾದನೆಗೆ  ಸೆಳೆಯುತ್ತಿದ್ದ ನಾಲ್ವರು ಉಗ್ರರನ್ನು ಮಹಾರಾಷ್ಟ್ರ , ಒಡಿಶಾ  ಮತ್ತು ಬಿಹಾರದಲ್ಲಿ   ಗುಪ್ತಚರ ಇಲಾಖೆ ಹಾಗೂ ದೇಹಲಿ ಪೊಲೀಸರ ವಿಶೇಷ ಘಟಕ ಬಂಧಿಸಿದೆ. ಈ ಬಗ್ಗೆ ಮಾಹಿತಿ ನೀಡಿರುವ ವಿಶೇಷ ಘಟಕದ ಡಿಸಿಪಿ ಪ್ರವೀಣ್ ಕುಮಾರ್ ತ್ರಿಪಾಠಿ, ಆರೋಪಿಗಳು ಖುರಾಸನ್ ಮೂಲದ ಲಷ್ಕರ್ ಮತ್ತು ಖಲೀಫತ್ ಸ್ಥಾಪನೆಯ ಸಿದ್ಧಾಂತಗಳಿಂದ ಪ್ರಭಾವಿತರಾಗಿದ್ದರು. ಘಜ್ವಾ-ಎ-ಹಿಂದ್ (ಭಾರತದ ವಿರುದ್ಧ ಯುದ್ಧ) ನಲ್ಲಿ ಭಾಗವಹಿಸಲು ತಯಾರಿ ನಡೆಸುತ್ತಿದ್ದರು. ಇದಕ್ಕಾಗಿ ಡಿಜಿಟಲ್...
ದೆಹಲಿಸುದ್ದಿ

ಇಂದು ರಾತ್ರಿ ದೇಶವನ್ನು ಉದ್ದೇಶಿಸಿ ಮೋದಿ ಭಾಷಣ -ಕಹಳೆ ನ್ಯೂಸ್

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ  ಇಂದು ರಾತ್ರಿ 8:30ಕ್ಕೆ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಕುರಿತ ತಿದ್ದುಪಡಿ ಮಸೂದೆಗೆ ಸೋಲಾದ ಬೆನ್ನಲ್ಲೇ ಮೋದಿ ಭಾಷಣ ತೀವ್ರ ಕುತೂಹಲ ಮೂಡಿಸಿದೆ. ಮೋದಿ ಸರ್ಕಾರದ ಅಧಿಕಾರಕ್ಕೆ ಏರಿದ ಬಳಿಕ ಇಲ್ಲಿಯವರೆಗೆ ಯಾವುದೇ ಮಸೂದೆಗೆ ಸೋಲಾಗಿರಲಿಲ್ಲ. ಆದರೆ ಇದೇ ಮೊದಲ ಬಾರಿಗೆ ಮಹಿಳಾ ಮೀಸಲಾತಿ ಮಸೂದೆಗೆ ಸೋಲಾದ ಹಿನ್ನೆಲೆಯಲ್ಲಿ ಭಾಷಣದಲ್ಲಿ ಯಾವ ವಿಷಯದ ಬಗ್ಗೆ ಮಾತನಾಡಬಹುದು ಎಂಬ ಪ್ರಶ್ನೆ ಎದ್ದಿದೆ. ಈ...
ಬೆಂಗಳೂರುರಾಜ್ಯಸುದ್ದಿ

ಪರಪ್ಪನ ಅಗ್ರಹಾರದ ಕ್ವಾರಂಟೈನ್ ಸೆಲ್‌ನಲ್ಲಿ ವಿನಯ್ ಕುಲಕರ್ಣಿ, ಗ್ಯಾಂಗ್ : ದರ್ಶನ್ ಸೆಲ್‌ನ ಕೂಗಳತೆ ದೂರದಲ್ಲೇ ಇರೋ ಕೈದಿಗಳು -ಕಹಳೆ ನ್ಯೂಸ್

ಬೆಂಗಳೂರು: ಧಾರವಾಡದ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೇಶ್ ಗೌಡ ಕೊಲೆ ಕೇಸಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಶಾಸಕ ವಿನಯ್‌ ಕುಲಕರ್ಣಿ ಮತ್ತು ಗ್ಯಾಂಗ್‌ ಪರಪ್ಪನ ಅಗ್ರಹಾರದ ಕ್ವಾರಂಟೈನ್‌ ಸೆಲ್‌ ಸೇರಿದ್ದಾರೆ. ನಟ ದರ್ಶನ್‌ ಸೆಲ್‌ನ ಕೂಗಳತೆ ದೂರದಲ್ಲೇ ಈ ಕೈದಿಗಳು ಇದ್ದಾರೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ ಹದಿನೇಳು ಜನರನ್ನು ಅಪರಾಧಿಗಳು ಅಂತಾ ತೀರ್ಪು ಪ್ರಕಟಿಸಿ ಜೀವಾವಧಿ ಶಿಕ್ಷೆ ವಿಧಿಸಿದೆ. ನಿನ್ನೆ ಪರಪ್ಪನ ಅಗ್ರಹಾರ ಜೈಲು...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಡೆಲ್ಲಿ ವಿರುದ್ಧ ಹಸಿರು ಜೆರ್ಸಿಯಲ್ಲಿ ಕಣಕ್ಕಿಳಿಯಲಿದೆ RCB : ಚಿನ್ನಸ್ವಾಮಿಯಲ್ಲಿಂದು ಆರ್‌ಸಿಬಿಯ 100ನೇ ಪಂದ್ಯ -ಕಹಳೆ ನ್ಯೂಸ್

ಬೆಂಗಳೂರು: ಪ್ರತಿ ಐಪಿಎಲ್ ಸೀಸನ್‌ನ ಒಂದು ಪಂದ್ಯದಲ್ಲಿ ಆರ್‌ಸಿಬಿ ಹಸಿರು ಜೆರ್ಸಿಯಲ್ಲಿ ಆಡುವ ರೂಢಿಯಿದೆ. ಅಂದರಂತೆ ಇಂದು (ಏ.18) ಡೆಲ್ಲಿ ವಿರುದ್ಧ ನಡೆಯಲಿರುವ ಪಂದ್ಯದಲ್ಲಿ ಆರ್‌ಸಿಬಿ ತಂಡ ಹಸಿರು ಜೆರ್ಸಿಯಲ್ಲಿ ಕಣಕ್ಕಿಳಿಯಲಿದೆ. ಪ್ರತಿ ಆವೃತ್ತಿಯಲ್ಲಿಯೂ ಗ್ರೀನ್ ಜೆರ್ಸಿ ಧರಿಸುವ ಮೂಲಕ ಆರ್‌ಸಿಬಿ ತಂಡ ಪರಿಸರದ ಬಗ್ಗೆ ಜಾಗೃತಿ ಮೂಡಿಸುತ್ತದೆ. ಇದರ ಇನ್ನೊಂದು ವಿಶೇಷತೆಯೆಂದರೆ ಆಟಗಾರರು ಧರಿಸಿರುವ ಎಲ್ಲಾ ಜೆರ್ಸಿಗಳು ಮರುಬಳಕೆಯಾಗಬಲ್ಲ ವಸ್ತುಗಳಿಂದ ತಯಾರಿಸಲಾಗಿರುತ್ತದೆ. ಪರಿಸರದ ಬಗ್ಗೆ ಕಾಳಜಿ ಮೂಡಿಸಬೇಕೆನ್ನುವ ದೃಷ್ಟಿಯಿಂದ...
ಮುಂಬೈರಾಜ್ಯಸುದ್ದಿ

180 ಅಪ್ರಾಪ್ತೆಯರಿಗೆ ಲೈಂಗಿಕ ದೌರ್ಜನ್ಯ, 350ಕ್ಕೂ ಹೆಚ್ಚು ಅಶ್ಲೀಲ ವಿಡಿಯೋ ರೆಕಾರ್ಡ್‌ ಮಾಡಿದ್ದ ಆರೋಪಿ ಬಂಧನ – ಕಹಳೆ ನ್ಯೂಸ್

ಮುಂಬೈ: ಮಹಾರಾಷ್ಟ್ರದ ಅಮರಾವತಿಯಲ್ಲಿ 180 ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ 350 ಕ್ಕೂ ಹೆಚ್ಚು ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿದ ಆರೋಪ ಹೊತ್ತಿರುವ ವ್ಯಕ್ತಿಯನ್ನು ಬಂಧಿಸಲಾಗಿದೆ. ಬಿಜೆಪಿ ಸಂಸದರೊಬ್ಬರ ದೂರಿನ ಮೇರೆಗೆ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ. ಪರತ್ವಾಡ ನಗರದ ನಿವಾಸಿ ಮೊಹಮ್ಮದ್ ಅಯಾಜ್ ಅಲಿಯಾಸ್ ತನ್ವೀರ್, ಹುಡುಗಿಯರನ್ನು ಪ್ರೀತಿಯ ಬಲೆಗೆ ಬೀಳಿಸಿ, ಮುಂಬೈ ಮತ್ತು ಪುಣೆಗೆ ಕರೆದೊಯ್ದು ಅವರ ಅಶ್ಲೀಲ ವೀಡಿಯೊಗಳನ್ನು ಚಿತ್ರೀಕರಿಸಿದ್ದಾನೆ ಎಂದು ಆರೋಪಿಸಲಾಗಿದೆ....
ಬೆಂಗಳೂರುವಾಣಿಜ್ಯಸುದ್ದಿ

LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ : 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ..!- ಕಹಳೆ ನ್ಯೂಸ್

ಸಂಕಷ್ಟದಲ್ಲಿರುವವರನ್ನು ಕಂಡರೆ ಮನ ಮಿಡಿಯುವ ಆಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ  ಅವರು ಇತ್ತೀಚೆಗೆ ಆಟೋ ಚಾಲಕರು ಎದುರಿಸುತ್ತಿರುವ ಎಲ್‌ಪಿಜಿ ಗ್ಯಾಸ್‌ ಸಮಸ್ಯೆಯ ಬಗ್ಗೆ ಧ್ವನಿ ಎತ್ತಿದ್ದಾರೆ. ಕೇವಲ ಮಾತಿಗೆ ಸೀಮಿತವಾಗದೇ, 25 ಲಕ್ಷ ರೂಪಾಯಿ ಆರ್ಥಿಕ ನೆರವು ಕೂಡ ನೀಡುವ ಮೂಲಕ ನಟ ಹೃದಯ ಶ್ರೀಮಂತಿಕೆ ಮೆರೆದಿದ್ದಾರೆ. ಹೌದು. ನಮ್ಮ ಸಮಾಜದ ಸಾರಿಗೆ ವ್ಯವಸ್ಥೆಯಲ್ಲಿ ಆಟೋ ಚಾಲಕರ ಪಾತ್ರ ಬಹಳ ದೊಡ್ಡದು. ಇವರನ್ನ ದೇಶದ ಬೆನ್ನೆಲುಬು ಎಂದು ಕರೆದ ನಟ...
ಬೆಂಗಳೂರುಸುದ್ದಿ

ಯುವವಾಹಿನಿ ನಿಯೋಗದಿಂದ ಮುಖ್ಯಮಂತ್ರಿಗಳ ಭೇಟಿ -ಕಹಳೆ ನ್ಯೂಸ್

ಬೆಂಗಳೂರು: ಸಮಾಜದ ಏಳಿಗೆಗಾಗಿ ಯುವವಾಹಿನಿ ಸಂಸ್ಥೆಯು ಕೈಗೊಳ್ಳುತ್ತಿರುವ ವಿವಿಧ ಸೇವಾ ಚಟುವಟಿಕೆಗಳು ಶ್ಲಾಘನೀಯವಾಗಿದ್ದು, ಸಂಘಟನೆಯ ಕಾರ್ಯವೈಖರಿ ಮೆಚ್ಚುವಂತದ್ದು ಎಂದು ರಾಜ್ಯದ ಮಾನ್ಯ ಮುಖ್ಯಮಂತ್ರಿಗಳು ಅಭಿಪ್ರಾಯಪಟ್ಟಿದ್ದಾರೆ. ಏಪ್ರಿಲ್ 11, 2026ರಂದು ಬೆಂಗಳೂರಿನ ಮುಖ್ಯಮಂತ್ರಿಗಳ ಗೃಹ ಕಚೇರಿ“ಕೃಷ್ಣಾ" ದಲ್ಲಿ ಯುವವಾಹಿನಿಯ ಪ್ರಮುಖರ ನಿಯೋಗವು ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಸಂಸ್ಥೆಯ ಚಟುವಟಿಕೆಗಳ ಬಗ್ಗೆ ಸಮಗ್ರ ಮಾಹಿತಿ ನೀಡಿತು. ಸಾಮಾಜಿಕ, ಸಾಂಸ್ಕೃತಿಕ ಹಾಗೂ ಶೈಕ್ಷಣಿಕ ಕ್ಷೇತ್ರಗಳಲ್ಲಿ ಸಂಸ್ಥೆ ಮಾಡುತ್ತಿರುವ ಕಾರ್ಯಗಳ ಕುರಿತು ವಿವರಿಸಿ, ಸಂಸ್ಥೆಯ ಸಾಧನೆಗಳನ್ನು ಒಳಗೊಂಡ...
1 2 3 4 5 329
Page 3 of 329