ಹೊಸ ವರ್ಷದಿಂದ ಫಾಸ್ಟ್ ಟ್ಯಾಗ್ ಕಡ್ಡಾಯ – ಕಹಳೆ ನ್ಯೂಸ್
ನವದೆಹಲಿ : ಹೊಸ ವರ್ಷದ ದಿನದಿಂದ ಫಾಸ್ಟ್ ಟ್ಯಾಗ್ ಅನ್ನು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಕಡ್ಡಾಯವಾಗಿ ಜಾರಿಗೊಳಿಸಲು ಆದೇಶಿಸಿದೆ. ಕೇಂದ್ರೀಯ ಮೋಟಾರು ವಾಹನ ನಿಯಮ 1989ರ ಅನ್ವಯ 2017ರ ಡಿಸೆಂಬರ್ 1 ರ ನಂತರ ನೋಂದಾಯಿಸಲ್ಪಟ್ಟಿರುವ ಎಲ್ಲಾ ಹೊಸ ನಾಲ್ಕು ಚಕ್ರದ ವಾಹನಗಳಿಗೆ ಫಾಸ್ಟ್ ಟ್ಯಾಗ್ ಕಡ್ಡಾಯ ಗೊಳಿಸಲಾಗಿದ್ದು, ಅವುಗಳನ್ನು ವಾಹನ ಉತ್ಪಾದಕರು ಅಥವಾ ಡೀಲರ್ ಗಳು ಪೂರೈಸಬೇಕಾಗಿದೆ. 2021ರ ಜನವರಿ 1ರಿಂದ ಎಲ್ಲ ನಾಲ್ಕು...






