ಚಿಕಿತ್ಸೆ ಬಗ್ಗೆ ವಾಟ್ಸ್ಆಯಪ್ ಸಂದೇಶ: ಸುಶಾಂತ್ ಸಾವಿನ ಪ್ರಕರಣಕ್ಕೆ ಹೊಸ ತಿರುವು – ಕಹಳೆ ನ್ಯೂಸ್
ಮುಂಬೈ: ತಾವು ಪಡೆಯುತ್ತಿರುವ ಚಿಕಿತ್ಸೆ ಹಾಗೂ ಔಷಧಕ್ಕೆ ಸಂಬಂಧಿಸಿದಂತೆ ನಟ ಸುಶಾಂತ್ ಸಿಂಗ್ ರಜಪೂತ್ ಅವರು ತಮ್ಮ ಸಹೋದರಿಗೆ ವಾಟ್ಸ್ಆಯಪ್ ನಲ್ಲಿ ಸಂದೇಶಗಳನ್ನು ಕಳುಹಿಸಿದ್ದಾರೆ ಎಂಬುದು ಬೆಳಕಿಗೆ ಬಂದಿದೆ. ಹೀಗಾಗಿ ಸುಶಾಂತ್ ಅವರ ಮಾನಸಿಕ ಆರೋಗ್ಯದ ಬಗ್ಗೆ ಕುಟುಂಬದವರಿಗೆ ಚೆನ್ನಾಗಿ ಗೊತ್ತಿತ್ತು ಎಂಬುದು ಬಯಲಾಗಿದೆ ಎಂದು ಎನ್ಡಿ ಟಿವಿ ವರದಿ ಮಾಡಿದೆ. ಪಾಟ್ನಾದಲ್ಲಿ ದಾಖಲಾಗಿರುವ ಎಫ್ಐಆರ್ ಪ್ರಕಾರ, ಸುಶಾಂತ್ ಮಾನಸಿಕ ಆರೋಗ್ಯದ ಬಗ್ಗೆ ಯಾವುದೇ ಮಾಹಿತಿ ಇಲ್ಲ ಎಂಬುದಾಗಿ ಅವರ...







