Recent Posts

Saturday, September 12, 2026

ರಾಷ್ಟ್ರೀಯ

ಜಿಲ್ಲೆಬೆಂಗಳೂರುರಾಜ್ಯ

ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿದ ಬಸ್‌; ತನಿಖೆಗೆ ತೆರಳಿದ್ದ ಬೆಂಗ್ಳೂರು ಇನ್ಸ್‌ಪೆಕ್ಟರ್‌ ಸಾವು – ಕಹಳೆ ನ್ಯೂಸ್

ಬೆಂಗಳೂರು/ಭೋಪಾಲ್‌: ಸೈಬರ್‌ ಕ್ರೈಂ ಪ್ರಕರಣವೊಂದರ ತನಿಖೆಗಾಗಿ ಮಧ್ಯಪ್ರದೇಶಕ್ಕೆ ತೆರಳಿದ್ದ ಬೆಂಗಳೂರು ಪೊಲೀಸ್‌ ಇನ್ಸ್‌ಪೆಕ್ಟರ್‌ ಒಬ್ಬರು ಭೀಕರ ಅಪಘಾತದಲ್ಲಿ  ಮೃತಪಟ್ಟಿರುವ ಘಟನೆ ನಡೆದಿದೆ. ಭೋಪಾಲ್‌ನಿಂದ ಇಂದೋರ್‌ಗೆ ತೆರಳುತ್ತಿದ್ದ ವೇಳೆ ಬಸ್‌ ಪ್ರಪಾತಕ್ಕೆ ಉರುಳಿದ ಪರಿಣಾಮ ಇನ್ಸ್‌ಪೆಕ್ಟರ್‌ ರವಿ ಕೆ.ಬಿ. (Ravi KB) ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ರವಿ ಸೇರಿದಂತೆ ನಾಲ್ವರು ಗಾಯಗೊಂಡಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ರವಿ ಅವರನ್ನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಇಂದು ಬೆಳಗ್ಗೆ ಸುಮಾರು 7.30ರ ವೇಳೆಗೆ ಚಿಕಿತ್ಸೆ ಫಲಕಾರಿಯಾಗದೇ...
ದೆಹಲಿಸುದ್ದಿ

ಪ್ರಧಾನಿ ರೇಸ್‌ನಲ್ಲಿ ಸಿಎಂ ವಿಜಯ್‌ಗೆ 3ನೇ ಸ್ಥಾನ! – ಕಹಳೆ ನ್ಯೂಸ್

ನವದೆಹಲಿ: ತಮಿಳುನಾಡು ಮುಖ್ಯಮಂತ್ರಿಯಾಗಿ ಅಧಿಕಾರಕ್ಕೇರಿ ಕೇವಲ ಮೂರೇ ತಿಂಗಳಲ್ಲಿ ನಟ-ರಾಜಕಾರಣಿ ಸಿ. ಜೋಸೆಫ್ ವಿಜಯ್  ರಾಷ್ಟ್ರೀಯ ರಾಜಕಾರಣದಲ್ಲಿ ಹೊಸ ಇತಿಹಾಸ ಸೃಷ್ಟಿಸಿದ್ದಾರೆ. ಇಂಡಿಯಾ ಟುಡೇ–ಸಿವೋಟರ್ ನಡೆಸಿದ ಮೂಡ್ ಆಫ್ ದಿ ನೇಷನ್ (MOTN) ಆಗಸ್ಟ್ 2026ರ ಸಮೀಕ್ಷೆಯಲ್ಲಿ ಭಾರತದ ಮುಂದಿನ ಪ್ರಧಾನಿ ಹುದ್ದೆಯ ರೇಸ್‌ನಲ್ಲಿ(PM Race) ವಿಜಯ್ 3ನೇ ಸ್ಥಾನಕ್ಕೆ ಜಿಗಿದಿದ್ದು, ದೇಶದ ಪ್ರಮುಖ ರಾಜಕೀಯ ದಿಗ್ಗಜರನ್ನೇ ಹಿಂದಿಕ್ಕಿದ್ದಾರೆ. ಯಾರಿಗೆ ಎಷ್ಟನೇ ಸ್ಥಾನ? 1. ನರೇಂದ್ರ ಮೋದಿ: ಶೇ. 48.7 2....
ದೆಹಲಿರಾಜ್ಯಸುದ್ದಿ

ನಾಳೆಯಿಂದ 4 ದಿನ ಪ್ರಧಾನಿ ಮೋದಿ ವಿದೇಶ ಪ್ರವಾಸ – ಕಹಳೆ ನ್ಯೂಸ್

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ನಾಳೆಯಿಂದ (ಆ.29) ನಾಲ್ಕು ದಿನಗಳ ಕಾಲ ಉಜ್ಬೇಕಿಸ್ತಾನ್ ಮತ್ತು ಕಿರ್ಗಿಸ್ತಾನ್ ದೇಶಗಳಿಗೆ ಭೇಟಿ ನೀಡಲಿದ್ದಾರೆ. ಅಲ್ಲಿ ದ್ವಿಪಕ್ಷೀಯ ಸಂಬಂಧಗಳನ್ನು ಬಲಪಡಿಸುವ ಕುರಿತು ಚರ್ಚೆ ನಡೆಸಲಿದ್ದಾರೆ. ಈ ಕುರಿತು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮಾಹಿತಿ ನೀಡಿದೆ. ಪ್ರಧಾನಿ ಮೋದಿ ಅವರು ಆ.29ರಿಂದ 30ರವರೆಗೆ ಉಜ್ಬೇಕಿಸ್ತಾನ್‌ಗೆ (Uzbekistan) ಭೇಟಿ ನೀಡಲಿದ್ದಾರೆ. ಈ ವೇಳೆ ವಿವಿಧ ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಸಂಬಂಧಗಳನ್ನು ಮತ್ತಷ್ಟು ಬಲಪಡಿಸುವ ಮಾರ್ಗಗಳನ್ನು ಅನ್ವೇಷಿಸುವ ಬಗ್ಗೆ ಚರ್ಚೆ ಮಾಡಲಿದ್ದಾರೆ....
ದೆಹಲಿರಾಜ್ಯಸುದ್ದಿ

ಸ್ನೇಹ ಬೆಳೆಸಲು ನಿರಾಕರಿಸಿದಕ್ಕೆ ಮಾಡೆಲ್‌ ಕೊಲೆ – ಮನೆಗೆ ನುಗ್ಗಿ ಹತ್ಯೆಗೈದು ಜಿಮ್ ಟ್ರೇನರ್ ಪರಾರಿ – ಕಹಳೆ ನ್ಯೂಸ್

ನವದೆಹಲಿ: ಸ್ನೇಹ ಬೆಳೆಸಲು ನಿರಾಕರಿಸಿದ್ದಕ್ಕೆ ಜಿಮ್ ಟ್ರೇನರ್ ಮನೆಗೆ ನುಗ್ಗಿ ಮಾಡೆಲ್‌ ಅನ್ನು ಕೊಲೆ ಮಾಡಿರುವ ಘಟನೆ ದೆಹಲಿಯ ತಿಲಕ್ ನಗರದಲ್ಲಿ ನಡೆದಿದೆ. ಮಾಡೆಲ್‌ ಆಗಿದ್ದ 21 ವರ್ಷದ ಮುಸ್ಕಾನ್ ಮೃತ ಯುವತಿ. ಆರೋಪಿಯನ್ನು ಇಮ್ರಾನ್ ಎಂದು ಗುರುತಿಸಲಾಗಿದ್ದು, ಜಿಮ್ ಟ್ರೇನರ್ ಆಗಿದ್ದ. ಘನಟೆ ನಡೆದಾಗ ಮನೆಯಲ್ಲಿ ಯುವತಿ ಒಬ್ಬಂಟಿಯಾಗಿದ್ದರು ಎಂದು ತಿಳಿದುಬಂದಿದೆ. ಪೊಲೀಸರ ಮಾಹಿತಿ ಪ್ರಕಾರ, ಯುವತಿಗೆ ಸ್ವಲ್ಪ ಸಮಯದಿಂದ ಆರೋಪಿ ಪರಿಚಿತನಾಗಿದ್ದ. ಜಿಮ್‌ಗೆ ಹೋಗುತ್ತಿದ್ದಾಗ ಮುಸ್ಕಾನ್‌ಗೆ ಇಮ್ರಾನ್ ಪರಿಚಯವಾಗಿದ್ದ,...
ಬೆಂಗಳೂರುಸುದ್ದಿ

ಮಾನಸ ಸರೋವರ ಯಾತ್ರೆಗೆ ತೆರಳಿದ್ದ ನಾಲ್ವರು ಕನ್ನಡಿಗರು ನಾಪತ್ತೆ : ಕಲಬುರಗಿಯ ಇಬ್ಬರು ಸುರಕ್ಷಿತ – ಕಹಳೆ ನ್ಯೂಸ್

ಬೆಂಗಳೂರು: ನೇಪಾಳ-ಟಿಬೆಟ್ ಗಡಿಯಲ್ಲಿ ಸಂಭವಿಸಿದ ಭೀಕರ ಪ್ರವಾಹ ಹಾಗೂ ಭೂಕುಸಿತದ ದುರಂತದಲ್ಲಿ ಕನ್ನಡಿಗರೂ ಸಿಲುಕಿಕೊಂಡಿದ್ದು, ಮಾನಸ ಸರೋವರ ಯಾತ್ರೆಗೆ ತೆರಳಿದ್ದ ಬೆಂಗಳೂರು ಮೂಲದ ನಾಲ್ವರು ಎನ್‌ಆರ್‌ಐ ಕನ್ನಡಿಗರು ನಾಪತ್ತೆಯಾಗಿದ್ದಾರೆ. ಮೂಲತಃ ಬೆಂಗಳೂರಿನವರಾಗಿದ್ದು, ಸದ್ಯ ಅಮೆರಿಕದಲ್ಲಿ ನೆಲೆಸಿರುವ ನಾಲ್ವರು ಯಾತ್ರಿಕರು ಮಾನಸ ಸರೋವರ ಯಾತ್ರೆಗಾಗಿ ಅಮೆರಿಕದಿಂದ ನೇಪಾಳಕ್ಕೆ ಆಗಮಿಸಿದ್ದರು. ನಿನ್ನೆ ಪ್ರವಾಹ ಸಂಭವಿಸಿದ ಪ್ರದೇಶದಲ್ಲಿದ್ದ ಚೀನಾ ಎಂಬೆಸ್ಸಿಗೆ ತೆರಳಿದ್ದ ಇವರು, ಪ್ರವಾಹದ ಬಳಿಕ ಸ್ನೇಹಿತರು ಹಾಗೂ ಕುಟುಂಬಸ್ಥರ ಸಂಪರ್ಕಕ್ಕೆ ಸಿಗದೆ ನಾಪತ್ತೆಯಾಗಿದ್ದಾರೆ. ಈ...
ಜಿಲ್ಲೆಬೆಂಗಳೂರುಸುದ್ದಿ

ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರ ಮಾಹಿತಿ ಸಂಗ್ರಹಕ್ಕೆ ಮುಂದಾದ ಸರ್ಕಾರ – ಕಹಳೆ ನ್ಯೂಸ್

ಬೆಂಗಳೂರು: ನೇಪಾಳ ಮತ್ತು ಟಿಬೆಟ್ ಗಡಿ ಭಾಗದಲ್ಲಿ ಉಂಟಾಗಿರುವ ಭೀಕರ ಪ್ರವಾಹ ಹಾಗೂ ಭೂಕುಸಿತದ  ಹಿನ್ನೆಲೆಯಲ್ಲಿ, ಅಲ್ಲಿ ಸಿಲುಕಿರುವ ಕನ್ನಡಿಗರ ಸುರಕ್ಷತೆ ಹಾಗೂ ಮಾಹಿತಿ ಸಂಗ್ರಹಕ್ಕೆ ಕರ್ನಾಟಕ ಸರ್ಕಾರ  ಮುಂದಾಗಿದೆ. ಪ್ರವಾಹ ಪೀಡಿತ ಪ್ರದೇಶಗಳಲ್ಲಿ ರಸ್ತೆ ಸಂಪರ್ಕ ಮತ್ತು ಸಂಚಾರ ವ್ಯವಸ್ಥೆ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದ್ದು, ಹಲವು ಭಾರತೀಯರು ನಾಪತ್ತೆಯಾಗಿರುವ ವರದಿಗಳು ಬಂದಿವೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ (KSDMA) ರಕ್ಷಣಾ ಕಾರ್ಯಕ್ಕೆ ಸಜ್ಜಾಗಿದೆ....
ಬೆಂಗಳೂರುರಾಜ್ಯಸುದ್ದಿ

ಬೆಂಗಳೂರಿಗೆ ಬರ್ತಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ : ಟಿಶ್ಯೂ ಪೇಪರ್‌ನಲ್ಲಿ ಬೆದರಿಕೆ ಪತ್ರ ಪತ್ತೆ – ಕಹಳೆ ನ್ಯೂಸ್

ಬೆಂಗಳೂರು: ಲಕ್ನೋದಿಂದ ಬೆಂಗಳೂರಿಗೆ ಬರ್ತಿದ್ದ ಇಂಡಿಗೋ ವಿಮಾನದಲ್ಲಿ ಬಾಂಬ್ ಬೆದರಿಕೆ ಪತ್ರವೊಂದು ಪತ್ತೆಯಾಗಿದೆ. ವಿಮಾನ ನಿಲ್ದಾಣದ ಭದ್ರತಾ ಸಿಬ್ಬಂದಿ ಹಾಗೂ ಇತರ ಭದ್ರತಾ ಏಜೆನ್ಸಿಗಳು ತಕ್ಷಣವೇ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿವೆ ಎಂದು ಮೂಲಗಳು ತಿಳಿಸಿವೆ. ಇಂಡಿಗೋ ವಿಮಾನದಲ್ಲಿ (ಸಂಖ್ಯೆ 6E231) ಈ ಘಟನೆ ನಡೆದಿದೆ. ಬುಧವಾರ (ಇಂದು) ಬೆಂಗಳೂರಿಗೆ ಬಂದು ಸುರಕ್ಷಿತವಾಗಿ ಲ್ಯಾಂಡ್ ಆದ ಬಳಿಕ ಬೆದರಿಕೆ ಪತ್ರ ಪತ್ತೆಯಾಗಿದೆ. ಟಿಶ್ಯೂ ಪೇಪರ್‌ನಲ್ಲಿ ಬಾಂಬ್ ಬೆದರಿಕೆ ಬರೆಯಲಾಗಿತ್ತು ಎಂದು ತಿಳಿದುಬಂದಿದೆ....
ಬೆಂಗಳೂರುಸುದ್ದಿ

ಆನ್‌ಲೈನ್‌ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್‌ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ: ಖಾದರ್‌ ಸ್ಫೋಟಕ ಹೇಳಿಕೆ- ಕಹಳೆ ನ್ಯೂಸ್

ಬೆಂಗಳೂರು: ಆನ್‌ಲೈನ್‌ನಲ್ಲಿ ಮಾರಾಟ ಮಾಡುವ ತರಕಾರಿಗಳು ತಾಜಾ ಕಾಣಬೇಕು ಅಂತ ಕೆಮಿಕಲ್‌ ಸ್ಪ್ರೇ ಮಾಡುವ ಬಗ್ಗೆ ದೂರುಗಳು ಕೇಳಿಬಂದಿದೆ. ಮುಂದಿನ ದಿನಗಳಲ್ಲಿ ಇದರ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಯು.ಟಿ ಖಾದರ್‌ ಸ್ಫೋಟಕ ಹೇಳಿಕೆ ನೀಡಿದರು. ಬೆಂಗಳೂರಿನಲ್ಲಿಂದು (Bengaluru) ಸುದ್ದಿಗೋಷ್ಠಿ ನಡೆಸಿದ ಅವರು, ಆನ್‌ಲೈನ್‌ನಲ್ಲಿ ಮಾರಾಟ ಮಾಡುವ ತರಕಾರಿಗಳಿಗೆ ಕೆಮಿಕಲ್‌ ಸ್ಪ್ರೇ ವಿಚಾರದಲ್ಲಿ ದೂರು ಬಂದಿರುವ ಬಗ್ಗೆ ಪ್ರತಿಕ್ರಿಯಿಸಿದರು. ದೊಡ್ಡ ದೊಡ್ಡ ಸೂಪರ್ ಮಾರ್ಕೆಟ್ ಮಾಲ್ ಕಂಪನಿಗಳಲ್ಲಿ ತರಕಾರಿ ಹಾಳಗಾದಂತೆ...
1 2 3 4 5 6 364
Page 4 of 364