ವಾಹನ ಸವಾರರ ಗಮನಕ್ಕೆ ; ಬೆಂಗಳೂರಿನ ಈ ರಸ್ತೆಯಲ್ಲಿ 45 ದಿನ ಸಂಚಾರ ಬಂದ್-ಕಹಳೆ ನ್ಯೂಸ್
ಬೆಂಗಳೂರು: ಔಟರ್ ರಿಂಗ್ ರೋಡ್ನ 9ನೇ ಮೇನ್ ಜಂಕ್ಷನ್ ನಿಂದ 5ನೇ ಮೇನ್ವರೆಗಿನ ಸರ್ವಿಸ್ ರಸ್ತೆಯನ್ನು ಮೆಟ್ರೋ ಸ್ಟೇಷನ್ ಕಾಮಗಾರಿಗಾಗಿ ಮುಂದಿನ 45 ದಿನಗಳ ಕಾಲ ಬಂದ್ ಮಾಡಲಾಗುತ್ತಿದ್ದು, ಓಆರ್ಆರ್ ರಸ್ತೆಯಲ್ಲಿ ಸಂಚಾರ ದಟ್ಟಣೆ ಉಂಟಾಗುವ ಸಾಧ್ಯತೆಗಳಿವೆ. ಈ ಹಿನ್ನೆಲೆ ಔಟರ್ ರಿಂಗ್ ರೋಡ್ನಲ್ಲಿ ಸಂಚರಿಸುವ ವಾಹನ ಸವಾರರು ಬದಲಿ ಮಾರ್ಗದಲ್ಲಿ ಸಂಚರಿಸಲು ಸಂಚಾರಿ ಪೊಲೀಸರು ಮನವಿ ಮಾಡಿದ್ದಾರೆ. ಹೌದು, ಹೆಚ್.ಎಸ್.ಆರ್ ಲೇಔಟ್ ಸಂಚಾರ ಪೊಲೀಸ್ ಠಾಣಾ ಸರಹದ್ದಿನ ಹೊರವರ್ತುಲ...







