ಕಾಂತಾರ ಚಾಪ್ಟರ್ 1 ವೀಕ್ಷಣೆ ವೇಳೆ ಹುಚ್ಚಾಟ, ನಿಮ್ಮ ಅಭಿಮಾನಿಗಳಿಗೆ ಬುದ್ಧಿ ಹೇಳಿ ; ಬೆಂಗ್ಳೂರು ತುಳುಕೂಟದಿಂದ ರಿಷಬ್ಗೆ ಪತ್ರ-ಕಹಳೆ ನ್ಯೂಸ್
ಬೆಂಗಳೂರು: ಕಾಂತಾರ ಚಾಪ್ಟರ್ 1 ಸಿನಿಮಾ ಇತ್ತೀಚಿಗಷ್ಟೇ ಬಿಡುಗಡೆಯಾಗಿ ಅದ್ಭುತ ಪ್ರದರ್ಶನ ಕಾಣುತ್ತಿದೆ. ಆದರೆ ಸಿನಿಮಾ ವೀಕ್ಷಿಸುವಾಗ ವೇಳೆ ಕೆಲ ಅಭಿಮಾನಿಗಳ ಅತಿರೇಕದ ವರ್ತನೆ ತುಳುವರ ಕೆಂಗಣ್ಣಿಗೆ ಗುರಿಯಾಗಿದೆ. ಹೀಗಾಗಿ ಬೆಂಗಳೂರು ತುಳುಕೂಟ ನಟ ರಿಷಬ್ ಶೆಟ್ಟಿಗೆ ಪತ್ರವೊಂದು ಕಳುಹಿಸಿದೆ. ಕಾಂತಾರ ಚಾಪ್ಟರ್ 1 ಸಿನಿಮಾ ಇಡೀ ಭಾರತೀಯ ಚಿತ್ರರಂಗ ಕನ್ನಡದತ್ತ ತಿರುಗಿ ನೋಡುವಂತೆ ಮಾಡಿದ್ದ ಕರಾವಳಿಯ ದೈವರಾಧನೆಯ ಚಿತ್ರ. ಮೊದಲ ಭಾಗದ ಯಶಸ್ಸಿನ ಬಳಿಕ ಬಿಡುಗಡೆಯಾಗಿರುವ ಈ ಸಿನಿಮಾ...







