ಗಲ್ಫ್ ಉದ್ಯೋಗಕ್ಕಿಂತ ಭಾರತೀಯ ಸೇನೆಯೇ ಉತ್ತಮ : ನೇಪಾಳದಲ್ಲಿ ನೇಮಕಾತಿ ಪುನರಾರಂಭಿಸುವಂತೆ ಬೃಹತ್ ಪ್ರತಿಭಟನೆ – ಕಹಳೆ ನ್ಯೂಸ್
ನವದೆಹಲಿ: ಭಾರತೀಯ ಸೇನೆಯಲ್ಲಿ ನೇಪಾಳಿ ಯುವಕರ ನೇಮಕಾತಿಯನ್ನು ಅಗ್ನಿಪಥ್ ಯೋಜನೆಯಡಿಯಲ್ಲಿ ತಕ್ಷಣವೇ ಪುನರಾರಂಭಿಸಬೇಕು ಎಂದು ಆಗ್ರಹಿಸಿ ನೇಪಾಳದ ಪೋಖರಾ ನಗರದಲ್ಲಿ ಮಾಜಿ ಗೂರ್ಖಾ ಸೈನಿಕರು Sಹಾಗೂ ಅವರ ಬೆಂಬಲಿಗರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ನೇಪಾಳಿ ಪೋರ್ಟಲ್ ‘ರಾಟೋಪಾಟಿ’ ವರದಿಯ ಪ್ರಕಾರ, ಪ್ರತಿಭಟನೆಯು ಬುಧವಾರ (ಆಗಸ್ಟ್ 12) ನಡೆದಿದ್ದು, ‘ಇಂಡಿಯನ್ ಎಕ್ಸ್-ಸರ್ವೀಸ್‌ಮೆನ್ ಗೂರ್ಖಾ ಬ್ರಿಗೇಡ್ ನೇಪಾಳ ಪೋಖರಾ’ ಈ ಪ್ರತಿಭಟನೆಯನ್ನು ಆಯೋಜಿಸಿತ್ತು. ಭಾರತದ ಸೇನಾ ಮುಖ್ಯಸ್ಥ ಜನರಲ್ ಧೀರಜ್ ಸೇಥ್ ಅವರ...







