ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ ; ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ-ಕಹಳೆ ನ್ಯೂಸ್
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಜೈಶ್-ಎ-ಮೊಹಮ್ಮದ್ ಸಂಘಟನೆ ಹಾಗೂ ಭದ್ರತಾ ಪಡೆಗಳ ನಡುವೆ ನಡೆದ ಗುಂಡಿನ ದಾಳಿಯಲ್ಲಿ ಓರ್ವ ಯೋಧ ಹುತಾತ್ಮರಾಗಿದ್ದಾರೆ. ಇದೇ ವೇಳೆ ನಾಲ್ವರು ಶಂಕಿತ ಉಗ್ರರನ್ನು ಭದ್ರತಾ ಪಡೆ ವಶಕ್ಕೆ ಪಡೆದುಕೊಂಡಿದೆ. ಶುಕ್ರವಾರ (ಸೆ.20) ಬೆಳಗ್ಗೆ ಜಮ್ಮು ಮತ್ತು ಕಾಶ್ಮೀರದ ಉಧಂಪುರ ಜಿಲ್ಲೆಯ ದೋಡಾ-ಉಧಂಪುರ ಗಡಿಯ ಬಳಿ ಗುಂಡಿನ ಚಕಮಕಿ ನಡೆದಿದ್ದು, ದಾಳಿಯಲ್ಲಿ ಗಾಯಗೊಂಡಿದ್ದ ಓರ್ವ ಸೈನಿಕ ಹುತಾತ್ಮರಾಗಿದ್ದಾರೆ. ಇದೇ ವೇಳೆ ಜೈಶ್-ಎ-ಮೊಹಮ್ಮದ್ ಸಂಘಟನೆಯವರು ಎನ್ನಲಾದ ನಾಲ್ವರು...







