ಶಿವಗಂಗೆ ಬೆಟ್ಟದಲ್ಲಿ ಟೆಕ್ಕಿ ನಾಪತ್ತೆ : ಲ್ಯಾಪ್‌ಟಾಪ್‌ನಲ್ಲಿ ಶಾಂತಲಾ ಡ್ರಾಪ್ ಪಾಯಿಂಟ್ ಸರ್ಚ್..!- ಕಹಳೆ ನ್ಯೂಸ್
ನೆಲಮಂಗಲ: ಐತಿಹಾಸಿಕ ಶಿವಗಂಗೆ ಬೆಟ್ಟಕ್ಕೆ ಟ್ರಕ್ಕಿಂಗ್ ಬಂದು ನಾಪತ್ತೆಯಾಗಿರುವ ಬೆಂಗಳೂರಿನ ಕಾಡುಗೋಡಿಯ ಟೆಕ್ಕಿ, ಮಧ್ಯಪ್ರದೇಶದ ಇಂದೋರ್ ಮೂಲದ ಅದ್ವೈತ್ ಉಪಾಧ್ಯಾಯ ಆತ್ಮಹತ್ಯೆ ಮಾಡಿಕೊಂಡಿರಬಹುದಾ ಎಂಬ ಶಂಕೆ ವ್ಯಕ್ತವಾಗಿದೆ. ಅದ್ವೈತ್ ಉಪಾಧ್ಯಾಯ ಅವರ ಹುಡುಕಾಟಕ್ಕಾಗಿ ಮೂರನೇ ದಿನವೂ ಕಾರ್ಯಾಚರಣೆ ಮುಂದುವರಿದಿದೆ. ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರಿಗೆ ತನಿಖೆಯ ವೇಳೆ ಕೆಲ ಸ್ಫೋಟಕ ವಿಚಾರಗಳು ಹೊರಬರುತ್ತಿದ್ದು, ಇದು ಪೂರ್ವನಿಯೋಜಿತ ಆತ್ಮಹತ್ಯೆ ಎಂಬ ಅನುಮಾನ ಬರತೊಡಗಿದೆ. ಪೋಲಿಸರು ಅದ್ವೈತ್ ಅವರ ಕಾಡುಗೋಡಿಯ ಮನೆಯಲ್ಲಿ ಪರಿಶೀಲನೆ...







