ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ – ಒಂದೇ ಕುಟುಂಬದ ನಾಲ್ವರು ಸೇರಿ ಐವರು ಸಜೀವ ದಹನ -ಕಹಳೆ ನ್ಯೂಸ್
ಬೆಂಗಳೂರು: ಕೆ.ಆರ್ ಮಾರ್ಕೆಟ್ ಬಳಿಯ ನಗರ್ತಪೇಟೆಯ ವಾಣಿಜ್ಯ ಕಟ್ಟಡದಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಒಂದೇ ಕುಟುಂಬದ ನಾಲ್ವರು ಸೇರಿ ಐವರು ಸಾವನ್ನಪ್ಪಿರುವ ಘಟನೆ ನಡೆದಿದೆ. ದುರಂತದಲ್ಲಿ ಸಜೀವ ದಹನವಾದ ಮದನ್ (38), ಪತ್ನಿ ಸಂಗೀತಾ (33) ಮಿತೇಶ್ (8), ವಿಹಾನ್ (5) ಒಂದೇ ಕುಟುಂಬದವರಾಗಿದ್ದು, ಮತ್ತೊಂದು ಮಹಡಿಯಲ್ಲಿ ಸುರೇಶ್ ಎಂಬವರೂ ಸುಟ್ಟು ಕರಕಲಾಗಿದ್ದಾರೆ. ಇನ್ನೂ ಘಟನಾ ಸ್ಥಳಕ್ಕೆ ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಭೇಟಿ ನೀಡಿ ಪರಿಶೀಲಿಸಿದ್ದಾರೆ....







