Wednesday, March 18, 2026

ರಾಷ್ಟ್ರೀಯ

ಕ್ರೈಮ್ದಕ್ಷಿಣ ಕನ್ನಡಬೆಂಗಳೂರುಬೆಳ್ತಂಗಡಿರಾಜ್ಯಸುದ್ದಿ

ಕಾಲ್ಪನಿಕ ಸುಳ್ಳು ಮಾಹಿತಿ ವರದಿ ಮಾಡಿದ ದೂತ ಸಮೀರ್ ಎಂಡಿ ವಿರುದ್ಧ ಧರ್ಮಸ್ಥಳ ಠಾಣೆಯಲ್ಲಿ ಎಫ್.ಐ.ಆರ್..!! – ಕಹಳೆ ನ್ಯೂಸ್

ಬೆಳ್ತಂಗಡಿ; ಧರ್ಮಸ್ಥಳದಲ್ಲಿ ಹಲವಾರು ಹೆಣಗಳನ್ನು ಹೂತು ಹಾಕಿರುವುದರ ಬಗ್ಗೆ ಸಾಕ್ಷಿ ದೂರುದಾರ ನೀಡಿರು ದೂರಿನ ಬಗ್ಗೆ ಕಾಲ್ಪನಿಕವಾಗಿ ಎ.ಐ ಮೂಲಕ ಸೃಷ್ಟಿಸಲಾದ ಸುಳ್ಳು ಮಾಹಿತಿಗಳನ್ನು ಒಳಗೊಂಡಿರುವ ವೀಡಿಯೋ ಬಹಿರಂಗಪಡಿಸಿ ಸಾರ್ವಜನಿಕರು ಉದ್ರೇಕಗೊಳ್ಳುವಂತೆ ಮಾಡಿರುವ ಬಗ್ಗೆ ಯುಟ್ಯೂಬರ್ ಸಮೀರ್ ಎಂ.ಡಿ ವಿರುದ್ಧ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಕಾಲ್ಪನಿಕ ವರದಿ ಮಾಡಿರುವ ಆರೋಪಿ ಸಮೀರ್ ಎಂಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷಿದೂರುದಾರರು ತನ್ನ ದೂರಿನಲ್ಲಿ ಹಾಗೂ ನ್ಯಾಯಾಲಯದ ಮುಂದೆ ಬಹಿರಂಗಪಡಿಸಿರುವ ಮಾಹಿತಿಗಳನ್ನು ಹೊರತುಪಡಿಸಿ...
ಅಂತಾರಾಷ್ಟ್ರೀಯದೆಹಲಿರಾಷ್ಟ್ರೀಯಸುದ್ದಿ

ಅಹಮದಾಬಾದ್‌ ವಿಮಾನ ದುರಂತ | AAIB ತನಿಖಾ ವರದಿಯಲ್ಲಿ ಪಕ್ಷಪಾತ : ಪೈಲಟ್ ಸಂಘದ ಟೀಕೆ – ಕಹಳೆ ನ್ಯೂಸ್

ನವದೆಹಲಿ: ಅಹಮದಾಬಾದ್‌ನಲ್ಲಿ ಇತ್ತೀಚೆಗೆ ಸಂಭವಿಸಿದ ಏರ್‌ ಇಂಡಿಯಾ ವಿಮಾನ ಅಪಘಾತಕ್ಕೆ ಸಂಬಂಧಿಸಿದಂತೆ 'ವಿಮಾನಗಳ ಅಪಘಾತ ತನಿಖಾ ಸಂಸ್ಥೆ' (ಎಎಐಬಿ) ನಡೆಸಿರುವ ತನಿಖಾ ವರದಿಯನ್ನು ಭಾರತೀಯ ವಿಮಾನಯಾನ ಪೈಲಟ್‌ಗಳ ಸಂಘ ಟೀಕಿಸಿದೆ. ಜುಲೈ 11ರಂದು ಬಿಡುಗಡೆಯಾಗಿರುವ ವರದಿಯು ಪೈಲಟ್‌ಗಳತ್ತ ಬೊಟ್ಟು ಮಾಡುವಂತಿದೆ ಎಂದು ಆರೋಪಿಸಿರುವ ಸಂಘ, 'ತನಿಖೆಯ ದಾಟಿ ಹಾಗೂ ಅದರಲ್ಲಿನ ನಿರ್ದೇಶನಗಳು ಪೈಲಟ್‌ಗಳ ದೋಷದ ಕಡೆಗೆ ಪಕ್ಷಪಾತದ ನಿಲುವು ಹೊಂದಿರುವುದನ್ನು ಸೂಚಿಸುತ್ತವೆ. ಊಹಾತ್ಮಕ ವರದಿಯನ್ನು ನಾವು ಸ್ಪಷ್ಟವಾಗಿ ತಿರಸ್ಕರಿಸುತ್ತೇವೆ. ನ್ಯಾಯಯುತ,...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಮಹಿಳೆಯರು ಸ್ನಾನ ಮಾಡುವಾಗ ವಿಡಿಯೋ ಮಾಡುತ್ತಿದ್ದ ಕಾಮುಕ ಸೆರೆ – ಕಹಳೆ ನ್ಯೂಸ್

ಬೆಂಗಳೂರು : ಮಹಿಳೆಯರು ಸ್ನಾನ ಮಾಡುವಾಗ ಕದ್ದುಮುಚ್ಚಿ ವಿಡಿಯೋ ಮಾಡುತ್ತಿದ್ದ ವಿಕೃತ ಕಾಮುಕನನ್ನು ಕಾಡುಗೋಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕೇರಳ ಮೂಲದ ಹಾಜ ಮೊಯಿದ್ದೀನ್‌ (24) ಬಂಧಿತ ಆರೋಪಿ. ಈತ ವೃತ್ತಿಯಲ್ಲಿ ಎಲೆಕ್ಟ್ರೀಷಿಯನ್‌ ಆಗಿದ್ದು, ನಗರದ ಚನ್ನಸಂದ್ರದಲ್ಲಿ ವಾಸವಾಗಿದ್ದನು. ಕೆಟ್ಟ ಚಾಳಿ ಹೊಂದಿದ್ದ ಈತ ಕಳೆದ ನಾಲ್ಕು ದಿನಗಳ ಹಿಂದೆ ಮನೆಯೊಂದರ ಬಾತ್‌ರೂಂಗೆ ತಾಯಿ -ಮಗಳು ಸ್ನಾನಕ್ಕೆ ಹೋಗಿದ್ದನ್ನು ಗಮನಿಸಿ, ನಂತರ ಕಿಟಕಿ ಮೂಲಕ ಕದ್ದುಮುಚ್ಚಿ ಮೊಬೈಲ್‌ನಲ್ಲಿ ವಿಡಿಯೋ ಮಾಡುತ್ತಿದ್ದನು.ಆ...
ಬೆಂಗಳೂರುಸುದ್ದಿ

ಬೆಂಗಳೂರಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಉರುಳಿ ಬಿದ್ದ ಬೃಹತ್ ಗಾತ್ರದ ಮರ : ಕೂದಲೆಳೆ ಅಂತರದಲ್ಲಿ ಚಾಲಕ ಪಾರು! -ಕಹಳೆ ನ್ಯೂಸ್

ಬೆಂಗಳೂರು : ಬೆಂಗಳೂರಲ್ಲಿ ಮಳೆಯಿಂದಾಗಿ ಭಾರಿ ಅವಾಂತರ ಸೃಷ್ಟಿಯಾಗಿದ್ದು, ನಿನ್ನೆ ಸಂಜೆ 6:10ರ ಸುಮಾರಿಗೆ ಮಳೆ ಸಂದರ್ಭದಲ್ಲಿ ಬೆಂಗಳೂರಿನ ಶೇಷಾದ್ರಿಪುರಂ ಕಾನೂನು ಕಾಲೇಜು ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್ ಮರವೊಂದು ಬಿದ್ದಿದೆ. ಮರ ಬಿದ್ದ ರಭಸಕ್ಕೆ 3 ವಿದ್ಯುತ್ ಕಂಬಗಳು ಧರಾಶಾಯಿಯಾಗಿವೆ. ಆದ್ರೆ ಕಾರು ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ರಸ್ತೆಗೆ ಅಡ್ಡಲಾಗಿ ಬಿದ್ದಿರುವ ಮರವನ್ನ ಈವರೆಗೂ ಬಿಬಿಎಂಪಿ, ಬೆಸ್ಕಾಂ ಅಧಿಕಾರಿಗಳು ತೆರವು ಮಾಡಿಲ್ಲ ಎಂದು ಜನ ಆಕ್ರೋಶ...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಹರಿಹರಪುರದ ಪರಮಪೂಜ್ಯ ಶ್ರೀಮದ್ ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ಸ್ವಯಂಪ್ರಕಾಶ ಸಚ್ಚಿದಾನಂದ ಸರಸ್ವತಿ ಮಹಾಸ್ವಾಮೀಜಿ ಬೆಂಗಳೂರಿನಲ್ಲಿ 25ನೇ ಚಾತುರ್ಮಾಸ್ಯ ವೃತಾಚರಣೆ – ಕಹಳೆ ನ್ಯೂಸ್

ಬೆಂಗಳೂರು : ಶ್ರೀ ಆದಿಶಂಕರಾಚಾರ್ಯ ಶಾರದಾ ಲಕ್ಷ್ಮೀ ನೃಸಿಂಹ ಪೀಠಮ್, ಶ್ರೀಮಠ, ಹರಿಹರಪುರದ ಪರಮಪೂಜ್ಯ ಶ್ರೀಮದ್ ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ಸ್ವಯಂಪ್ರಕಾಶ ಸಚ್ಚಿದಾನಂದ ಸರಸ್ವತಿ ಮಹಾಸ್ವಾಮೀಜಿರವರ 25ನೇ ಚಾತುರ್ಮಾಸ್ಯ ವ್ರತವು ಇಂದು ಬೆಂಗಳೂರಿನ ಜಯನಗರ 2ನೇ ಬ್ಲಾಕಿನಲ್ಲಿರುವ ಶ್ರೀ ಕೊಂಡರಾಮ ದೇವಸ್ಥಾನದಲ್ಲಿ ಆರಂಭವಾಯಿತು. ಸಾವಿರಾರು ವರ್ಷಗಳ ಭವ್ಯವಾದ ಇತಿಹಾಸ ಮತ್ತು ಶ್ರೇಷ್ಠವಾದ ಗುರು ಪರಂಪರೆಯನ್ನು ಈ ಧರ್ಮಪೀಠವು ಹೊಂದಿದೆ. ಈ ಧರ್ಮಪೀಠದ ಪ್ರಸ್ತುತ 25ನೇ ಪೀಠಾಧಿಪತಿಗಳಾದ ಪರಮಪೂಜ್ಯ ಶ್ರೀಮದ್...
ಬೆಂಗಳೂರುರಾಜಕೀಯರಾಜ್ಯಸುದ್ದಿ

‘ಮುಡಾ ಹಗರಣ’ ಕೇಸ್ : ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿಗೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶ.! -ಕಹಳೆ ನ್ಯೂಸ್

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪತ್ನಿಗೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶ ಹೊರಡಿಸಿದೆ. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪತ್ನಿಗೆ 14 ಸೈಟ್ ಹಂಚಿಕೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ಕೋರಿ ಸ್ನೇಹಮಯಿ ಕೃಷ್ಣ ಅರ್ಜಿ ಸಲ್ಲಿಸಿದ್ದು, ಹೈಕೋರ್ಟ್ ವಿಭಾಗೀಯ ಪೀಠದಲ್ಲಿ ಇಂದು ವಿಚಾರಣೆ ನಡೆದಿದೆ. ಸಿಎಂ ಪತ್ನಿಗೆ ನೋಟಿಸ್ ಜಾರಿಯಾಗದ ಹಿನ್ನೆಲೆ ನೋಟಿಸ್ ಜಾರಿಗೊಳಿಸಲು ಕೋರ್ಟ್ ಆದೇಶ ಹೊರಡಿಸಿದೆ. ನೋಟಿಸ್ ಜಾರಿಯಾಗದ ಪ್ರತಿವಾದಿಗಳಿಗೆ...
ಬೆಂಗಳೂರುಸುದ್ದಿ

ಯುವತಿಯರ ಫೋಟೋ, ವಿಡಿಯೋ ರೆಕಾರ್ಡ್ ಮಾಡಿ ಇನ್ಸ್ಟಾಗ್ರಾಮ್ ನಲ್ಲಿ ಪೋಸ್ಟ್ : ಆರೋಪಿ ಅರೆಸ್ಟ್! -ಕಹಳೆ ನ್ಯೂಸ್

ಬೆಂಗಳೂರು : ಸಾರ್ವಜನಿಕ ಸ್ಥಳದಲ್ಲಿ ಯುವತಿಯರ ಫೋಟೋ ಮತ್ತು ವಿಡಿಯೋ ರೆಕಾರ್ಡ್ ಮಾಡಿ ಅಶ್ಲೀಲವಾಗಿ ಪೋಸ್ಟ್ ಮಾಡುತ್ತಿದ್ದ ವ್ಯಕ್ತಿಯನ್ನು ಅರೆಸ್ಟ್ ಮಾಡಲಾಗಿದ್ದು, ಬನಶಂಕರಿ ಠಾಣೆ ಪೋಲಿಸರಿಂದ ಗುರುದೀಪ್ ಸಿಂಗ್ (26) ಎನ್ನುವ ಯುವಕನನ್ನು ಅರೆಸ್ಟ್ ಮಾಡಲಾಗಿದೆ. ಅಸಭ್ಯವಾಗಿ ಕಾಣುವಂತೆ ಫೋಟೋ ಮತ್ತು ವಿಡಿಯೋ ಚಿತ್ರೀಕರಣ ನಡೆಸಿ,ಆರೋಪಿಯು ಪೋಸ್ಟ್ ಮಾಡುತ್ತಿದ್ದ. ಬೆಂಗಳೂರಿನ ಕೆಆರ್ ಪುರಂ ನಿವಾಸಿಯಾಗಿರುವ ಗುರುದೀಪ್ ಸಿಂಗನನ್ನು ಪೊಲೀಸರು ಇದೀಗ ಅರೆಸ್ಟ್ ಮಾಡಿದ್ದಾರೆ.ಇತ್ತೀಚಿಗೆ ಯುವತಿಯರ ಫೋಟೋ ಮತ್ತು ವಿಡಿಯೋಗಳನ್ನು ಮಾಡಿ...
ದೆಹಲಿಸುದ್ದಿ

ದೆಹಲಿಯಲ್ಲಿ 4.4 ತೀವ್ರತೆಯ ಭೂಕಂಪನ -ಕಹಳೆ ನ್ಯೂಸ್

ನವದೆಹಲಿ: ಗುರುವಾರ ಬೆಳಗ್ಗೆ ದೆಹಲಿ (Delhi) ಮತ್ತು ಎನ್‌ಸಿಆರ್ ಪ್ರದೇಶದಲ್ಲಿ 4.4 ತೀವ್ರತೆ ಪ್ರಬಲ ಭೂಕಂಪನ (Earthquake) ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ. ಬೆಳಗ್ಗೆ 9:04ರ ಸುಮಾರಿಗೆ ಭೂಮಿ ಕಂಪಿಸಿದ್ದು, ಒಂದು ನಿಮಿಷ ಕಾಲ ಭೂಕಂಪನದ ಅನುಭವವಾಗಿದೆ. ಹರಿಯಾಣದ ಜಜ್ಜರ್‌ನಲ್ಲಿ 4.4 ತೀವ್ರತೆಯ ಭೂಕಂಪ ಸಂಭವಿಸಿದೆ. ಇದು ದೆಹಲಿಯಿಂದ ಸುಮಾರು 60 ಕಿಲೋಮೀಟರ್ ದೂರದಲ್ಲಿದೆ. ಭೂಮಿ ಕಂಪಿಸಿದ್ದರಿಂದ ಜನರು ಗಾಬರಿಗೊಂಡು ಮನೆಯಿಂದ ಹೊರಗೆ ಓಡಿದ್ದಾರೆ. ಯಾವುದೇ ಹಾನಿ ಹಾಗೂ...
1 94 95 96 97 98 320
Page 96 of 320