Wednesday, March 18, 2026

ರಾಷ್ಟ್ರೀಯ

ದೆಹಲಿಸುದ್ದಿ

ಬೆಳ್ಳಂಬೆಳಗ್ಗೆ ಗುಡ್​​ನ್ಯೂಸ್​: LPG ವಾಣಿಜ್ಯ ಸಿಲಿಂಡರ್‌ ಬೆಲೆಯಲ್ಲಿ ಭಾರೀ ಇಳಿಕೆ!- ಕಹಳೆ ನ್ಯೂಸ್

ನವದೆಹಲಿ: ತೈಲ ಮಾರುಕಟ್ಟೆ ಕಂಪನಿಗಳು 19 ಕೆಜಿ ಎಲ್​ಪಿಜಿ ವಾಣಿಜ್ಯ ಸಿಲಿಂಡರ್ ಬೆಲೆಯಲ್ಲಿ 60 ರೂ.ನಷ್ಟು ಕಡಿತ ಮಾಡಿವೆ. ಪರಿಷ್ಕೃತ ದರ ಇಂದಿನಿಂದಲೇ ಜಾರಿಗೆ ಬಂದಿದೆ.14 ಕೆಜಿ LPG ಸಿಲಿಂಡರ್‌ನ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಪ್ರತಿ ತಿಂಗಳ ಮೊದಲ ದಿನದಂದು ತೈಲ ಮಾರುಕಟ್ಟೆ ಕಂಪನಿಗಳು ಗ್ಯಾಸ್ ಸಿಲಿಂಡರ್‌ಗಳ ಬೆಲೆಗಳನ್ನು ಪರಿಷ್ಕರಿಸುತ್ತವೆ. ಈ ತಿಂಗಳು ಸಿಲಿಂಡರ್ ದರವನ್ನು ಕಡಿಮೆ ಮಾಡಲು ನಿರ್ಧರಿಸಲಾಗಿದೆ. ದೇಶಾದ್ಯಂತ ವಾಣಿಜ್ಯ ಅನಿಲ ಸಿಲಿಂಡರ್‌ಗಳ ಬೆಲೆ ಕಡಿಮೆ ಮಾಡಿರುವುದಾಗಿ ತೈಲ...
ಬೆಂಗಳೂರುಸುದ್ದಿ

ಆರ್‌ಸಿಬಿ ಕಾಲ್ತುಳಿತ ಪ್ರಕರಣ : 3 ಐಪಿಎಸ್‌‍ ಅಧಿಕಾರಿಗಳ ಅಮಾನತನ್ನು ಅಂಗೀಕರಿಸಿದ ಕೇಂದ್ರ –ಕಹಳೆ ನ್ಯೂಸ್

ಬೆಂಗಳೂರು,ಜೂ.28- ರಾಜ್ಯ ಸರ್ಕಾರಕ್ಕೆ ಭಾರೀ ಮುಜುಗರ ಸೃಷ್ಟಿಸಿದ್ದ ಆರ್‌ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ಉಂಟಾದ ಕಾಲ್ತುಳಿತ ಪ್ರಕರಣ ಸಂಬಂಧ ಕರ್ತವ್ಯ ನಿರ್ಲಕ್ಷ್ಯ ಆರೋಪದಡಿ ಸೇವೆಯಿಂದ ಅಮಾನತುಗೊಂಡಿರುವ ಬೆಂಗಳೂರು ನಗರ ಪೊಲೀಸ್‌‍ ಆಯುಕ್ತ ಬಿ ದಯಾನಂದ್‌ ಸೇರಿದಂತೆ ಮೂವರು ಐಪಿಎಸ್‌‍ ಅಧಿಕಾರಿಗಳ ಮೇಲೆ ಕರ್ನಾಟಕ ಸರ್ಕಾರ ತೆಗೆದುಕೊಂಡ ಕ್ರಮವನ್ನು ಕೇಂದ್ರ ಗೃಹ ಇಲಾಖೆ ಅಂಗೀಕರಿಸಿದೆ. ಇದು ಆಡಳಿತಾತಕ ಕ್ರಮಗಳಲ್ಲಿ ಒಂದು ಪ್ರಮುಖ ಹೆಜ್ಜೆಯಾಗಿದೆ. ಈ ಘಟನೆಯಿಂದ ಕೇಂದ್ರ-ರಾಜ್ಯ ಸರ್ಕಾರಗಳ ನಡುವಿನ ಸಂಬಂಧದ ಮೇಲೆಯೂ ಗಮನ...
ಬೆಂಗಳೂರುಸುದ್ದಿ

ತಡರಾತ್ರಿ ಪೊಲೀಸರ ಭರ್ಜರಿ ಕಾರ್ಯಾಚರಣೆ: ಬ್ರ್ಯಾಂಡೆಡ್ ಕಂಪನಿಗಳ ನಕಲಿ ಬಟ್ಟೆ ತಯಾರಿಕೆ ಅಡ್ಡೆ ಮೇಲೆ ದಾಳಿ –ಕಹಳೆ ನ್ಯೂಸ್

ಬೆಂಗಳೂರು: ನಕಲಿ ಉತ್ಪನ್ನ ತಯಾರಿಕಾ ಅಡ್ಡೆಯ ಮೇಲೆ ತಡರಾತ್ರಿ ಪೊಲೀಸರು ದಾಳಿ ನಡೆಸಿದ್ದಾರೆ. 30 ಲಕ್ಷ ರೂಪಾಯಿಗೂ ಹೆಚ್ಚು ಮೌಲ್ಯದ ನಕಲಿ ಬ್ರ್ಯಾಂಡೆಡ್ ಬಟ್ಟೆಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಬೈಲಕೋನೇನಹಳ್ಳಿ ದಾಳಿ ನಡೆಸಲಾಗಿದೆ. ಪೂಮಾ, ನೈಕಿ, ರಾಲ್ಪ್ ಲಾರೆನ್ಸ್, ಲೆವಿಸ್, ಪೋಲೋ ಮೊದಲಾದ ಪ್ರತಿಷ್ಠಿತ ಬ್ರ್ಯಾಂಡ್ ಗಳ ನಕಲಿ ಉತ್ಪನ್ನಗಳನ್ನು ಪೊಲೀಸರು ಸೀಜ್ ಮಾಡಿದ್ದಾರೆ. ಬ್ರ್ಯಾಂಡೆಡ್ ಕಂಪನಿಗಳ ಹೆಸರಿನಲ್ಲಿ ನಕಲಿ ಜೀನ್ಸ್ ಗಳನ್ನು ತಯಾರಿಸಲಾಗುತ್ತಿತ್ತು. ಅಕ್ರಮವಾಗಿ...
ಬೆಂಗಳೂರುರಾಜ್ಯಸುದ್ದಿ

ಅತಿ ಶೀಘ್ರವೇ ಕರ್ನಾಟಕ ಸೇರಿ ಹಲವು ರಾಜ್ಯಗಳ ರಾಜ್ಯಾಧ್ಯಕ್ಷರ ಘೋಷಣೆ’-ಕಹಳೆ ನ್ಯೂಸ್

ಬೆಂಗಳೂರು : ಅತಿ ಶೀಘ್ರವೇ ಕರ್ನಾಟಕವೂ ಒಳಗೊಂಡಂತೆ ಹಲವು ರಾಜ್ಯಾಧ್ಯಕ್ಷರ ಹೆಸರು ಘೋಷಣೆ ಆಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದ್ದಾರೆ. ನಮ್ಮದು ರಾಷ್ಟ್ರೀಯ ಪಕ್ಷ. ಎಲ್ಲರ ಅಭಿಪ್ರಾಯ ಪಡೆದಿದ್ದಾರೆ. ನಾನು ಕಳೆದ ಒಂದೂವರೆ ವರ್ಷದಲ್ಲಿ ಬಹಳ ಯಶಸ್ವಿಯಾಗಿ ಕೆಲಸ- ಸಂಘಟನಾ ಕಾರ್ಯ ಮಾಡಿದ್ದೇನೆ ಎಂಬ ವಿಶ್ವಾಸ ನನ್ನಲ್ಲಿದೆ. ನಮ್ಮ ಕಾರ್ಯಕರ್ತರಲ್ಲೂ ಇದೆ. ನಮ್ಮ ಮುಖಂಡರಲ್ಲೂ ಇದೆ. ಹಾಗಾಗಿ ಒಳ್ಳೆಯದಾಗಲಿದೆ ಎಂದು ಹೇಳಿದರು. ರಾಜ್ಯದ...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಬೆಂಗಳೂರಲ್ಲಿ ಪುಂಡರ ಹಾವಳಿ ಹೆಚ್ಚಳ : ದೌರ್ಜನ್ಯ ಸಹಿಸುವುದಿಲ್ಲ ಎಂದ ಗೃಹ ಸಚಿವ ಪರಮೇಶ್ವರ್ – ಕಹಳೆ ನ್ಯೂಸ್

ಬೆಂಗಳೂರು - ಆನೇಕಲ್‌ನ ಮೈಲಸಂದ್ರದಲ್ಲಿ ಪುಂಡರ ಗುಂಪೊಂದು ಮಹಿಳೆಯ ಮೇಲೆ ದೌರ್ಜನ್ಯ ಎಸಗಿದ ಪ್ರಕರಣವನ್ನು ಗಂಭೀರವಾಗಿ ತೆಗೆದು ಕೊಂಡಿದ್ದು, ಇಂತಹ ಕೃತ್ಯಗಳನ್ನು ಸರ್ಕಾರ ಸಹಿಸುವುದಿಲ್ಲ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್‌ ಎಚ್ಚರಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂತಹ ಘಟನೆಗಳ ವಿರುದ್ಧ ಕ್ರಮ ಕೈಗೊಳ್ಳುವ ಸಲುವಾಗಿಯೇ ಪೊಲೀಸ್‌‍ ಇಲಾಖೆ ಇದೆ. ಈಗಾಗಲೇ ಆರೋಪಿಗಳನ್ನು ಬಂಧಿಸಲಾಗಿದೆ. ಸಮಾಜದಲ್ಲಿ ಇಂತಹ ಕೃತ್ಯಗಳನ್ನು ತೀವ್ರವಾಗಿ ಪರಿಗಣಿಸಲಾಗುತ್ತದೆ ಎಂದರು. ಆರ್‌ಸಿಬಿ ವಿಜಯೋತ್ಸವದ ವೇಳೆ ಕಾಲ್ತುಳಿತದ ಪ್ರಕರಣದಲ್ಲಿ ಪೊಲೀಸರ ವೈಫಲ್ಯಗಳಿವೆ...
ಕ್ರೈಮ್ದಕ್ಷಿಣ ಕನ್ನಡಪುತ್ತೂರುಬೆಂಗಳೂರುಸುದ್ದಿ

ಖ್ಯಾತ ಗಾಯಕಿಯೊಬ್ಬರ ವೈವಾಹಿಕ ವಿಚಾರಕ್ಕೆ ಸಂಬಂಧಿಸಿದಂತೆ ಪುತ್ತೂರು ನ್ಯಾಯಾಲಯದಿಂದ ಮಾಧ್ಯಮ ಹಾಗೂ ಸಾಮಾಜಿಕ ಜಾಲತಾಣದಲ್ಲಿ ಬಿತ್ತರಿತ ವರದಿ, ವಿಡಿಯೋ, ಫೋಟೋಗಳ ತೆರೆವಿಗೆ ಖಡಕ್ ಸೂಚನೆ ಹಾಗೂ ಬಿತ್ತರಿಸದಂತೆ ತಡೆಯಾಜ್ಞೆ- ಕಹಳೆ ನ್ಯೂಸ್

ಪುತ್ತೂರು : ಮಾಧ್ಯಮಗಳಲ್ಲಿ ಬಿತ್ತರಿತವಾಗುತ್ತಿದ್ದ ವರದಿಗಳು ಹಾಗೂ ಸಾಮಾಜಿಕ ಜಾಲತಾಣದಲ್ಲಿ ಮಾಡಿರುವ ಫೋಸ್ಟ್ ಗಳ‌ ಕುರಿತು ಪುತ್ತೂರು ನ್ಯಾಯಾಲಯದಲ್ಲಿ ಖ್ಯಾತ ಗಾಯಕಿಯೊಬ್ಬರ ವೈವಾಹಿಕ ವಿಚಾರಕ್ಕೆ ಸಂಬಂಧಿಸಿದಂತೆ ಖ್ಯಾತ ನ್ಯಾಯವಾದಿ ಮಹೇಶ್ ಕಜೆಯವರ ಮೂಲಕ ತಡೆಯಾಜ್ಞೆ ಕೋರಿ ಅರ್ಜಿ ಸಲ್ಲಿಸಿದ್ದು, ಇದನ್ನು ಗಂಭೀರವಾಗಿ ಪರಿಗಣಿಸಿದ ಮಾನ್ಯ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರಾದ ಪ್ರಕೃತಿ ಕಲ್ಯಾಣಪುರ್ ತಡೆಯಾಜ್ಞೆ ನೀಡಿ ಆದೇಶ ಮಾಡಿದ್ದಾರೆ.  ಈ ಪ್ರಕರಣದಲ್ಲಿ ವಿಚ್ಛೇದನ ಪ್ರಕ್ರಿಯೆಯ ವಿಷಯವನ್ನು ಎಲೆಕ್ಟ್ರಾನಿಕ್, ಮುದ್ರಣ ಮತ್ತು ಸಾಮಾಜಿಕ...
ಬೆಂಗಳೂರುಸುದ್ದಿ

ಕಾರ್ಮಿಕರ ಕೆಲಸದ ಅವಧಿ ಹೆಚ್ಚಳಕ್ಕೆ ಯಾವುದೇ ಅನುಮತಿ ನೀಡಿಲ್ಲ: ಸಚಿವ ಸಂತೋಷ್ ಲಾಡ್ -ಕಹಳೆ ನ್ಯೂಸ್

ಬೆಂಗಳೂರು: ಕಾರ್ಮಿಕರ ಕೆಲಸದ ಅವಧಿ ಹೆಚ್ಚಳಕ್ಕೆ ಸಂಬಂಧಿಸಿದಂತೆ ಪ್ರಸ್ತಾವನೆ ಹಿಂದಿನಿಂದಲೂ ಇದೆ. ಕೆಲಸದ ಅವಧಿ ವಿಸ್ತರಣೆ ಬಗ್ಗೆ ನಿರ್ಧಾರವಾಗಿಲ್ಲ. ಅದಿನ್ನು ಚರ್ಚೆಯ ಹಂತದಲ್ಲಿದೆ ಅಷ್ಟೇ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಸ್ಪಷ್ಟಪಡಿಸಿದ್ದಾರೆ. ವಿಕಾಸಸೌಧದಲ್ಲಿ ಶುಕ್ರವಾರ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ಕೆಲಸದ ಅವಧಿ ಹೆಚ್ಚಳ ಅನುಷ್ಠಾನದ ಬಗ್ಗೆ ಕೈಗಾರಿಕೆಗಳಿಗೆ ಯಾವುದೇ ಅನುಮತಿಯನ್ನು ಇದುವರೆಗೆ ನೀಡಿಲ್ಲ. ಕೆಲಸದ ಅವಧಿ ಹೆಚ್ಚಳ ವಿಚಾರದಲ್ಲಿ ನಮಗೆ ಸ್ಪಷ್ಟತೆ ಇದೆ. ಹೀಗಾಗಿ ಹಲವು ದಿನಗಳಿಂದ ಕೈಗಾರಿಕೆಗಳ...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಯುದ್ಧಪೀಡಿತ ಇರಾನ್ ನಿಂದ ಬೆಂಗಳೂರಿಗೆ 8 ಮಂದಿ ಕನ್ನಡಿಗರು ವಾಪಸ್ -ಕಹಳೆ ನ್ಯೂಸ್

ಬೆಂಗಳೂರು : ಯುದ್ಧಪೀಡಿತ ಇರಾನ್ನಿಂದ ಸ್ಥಳಾಂತರಿಸಲಾದ 16 ಜನರ ಪೈಕಿ 8 ಜನರ ತಂಡ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನಕ್ಕೆ ಬಂದಿಳಿದ್ದಾರೆ. ಇಂದು ಬೆಳಗ್ಗೆ ಇರಾನ್ನಿಂದ ಸ್ಥಳಾಂತರಿಸಲಾದ ಭಾರತೀಯ ಪ್ರಜೆಗಳನ್ನು ಹೊತ್ತ ಮತ್ತೊಂದು ವಿಮಾನ ದೆಹಲಿ ತಲುಪಿತು. ವಿಮಾನ ನಿಲ್ದಾಣದಿಂದ ಹೊರಬರುವಾಗ ಜನರು 'ಭಾರತ್ ಮಾತಾ ಕಿ ಜೈ' ಘೋಷಣೆಗಳನ್ನು ಕೂಗಿದರು. ಇರಾನ್ ನಿಂದ ದೆಹಲಿಗೆ 16 ಮಂದಿ ಕನ್ನಡಿಗರು ಕೂಡ ಆಗಮಿಸಿದ್ದಾರೆ. ಇವರು ದೆಹಲಿಯಿಂದ ಬೆಂಗಳೂರಿಗೆ ಹೊರಡಲಿದ್ದಾರೆ. ಬೆಳಗ್ಗೆ...
1 96 97 98 99 100 320
Page 98 of 320