ಯಜಮಾನ ಚಿತ್ರಕ್ಕೆ ಆಧುನಿಕ ತಂತ್ರಜ್ಞಾನ ಸ್ಪರ್ಶ: 25 ವರ್ಷಗಳ ನಂತರ ರಿ-ರಿಲೀಸ್-ಕಹಳೆ ನ್ಯೂಸ್
ಸರಿಯಾಗಿ 25 ವರ್ಷಗಳ ಹಿಂದೆ 2000 ನೇ ಇಸವಿಯಲ್ಲಿ ತೆರೆಕಂಡ ಕರ್ನಾಟಕ ರತ್ನ ವಿಷ್ಣುವರ್ಧನ್ (Vishnuvardhan) ಅಭಿನಯದ, ಮೆಹರುನ್ನಿಸಾ ರೆಹಮಾನ್ ನಿರ್ಮಾಣದ ಹಾಗೂ ಆರ್.ಶೇಷಾದ್ರಿ – ರಾಧಾ ಭಾರತಿ ನಿರ್ದೇಶನದ ಯಜಮಾನ (Yajamana) ಚಿತ್ರ ರಾಜ್ಯಾದ್ಯಂತ ಅದ್ದೂರಿಯಾಗಿ ಮರು ಬಿಡುಗಡೆಯಾಗಲು ರೆಡಿ ಆಗಿದೆ. ಜನಮೆಚ್ಚಿದ ಈ ಚಿತ್ರ ಆಧುನಿಕ ತಂತ್ರಜ್ಞಾನದಿಂದ ಸಿಂಗಾರಗೊಂಡಿದೆ. ಮುನಿಸ್ವಾಮಿ ಎಸ್.ಡಿ ಈ ಚಿತ್ರವನ್ನು ಮರು ಬಿಡುಗಡೆ ಮಾಡುತ್ತಿದ್ದಾರೆ. ಚಿತ್ರದ ರಜತೋತ್ಸವವನ್ನು ಸಂಭ್ರಮಿಸಲು ಕಲಾವಿದರ ಸಂಘದಲ್ಲಿ ಅದ್ದೂರಿ...







