‘ಕುರುಕ್ಷೇತ್ರ’ ಚಿತ್ರದ ಟ್ರೇಲರ್ ಕುರಿತು ಅಭಿಮಾನಿಗಳು ಆಕ್ರೋಶ
ಬೆಂಗಳೂರು: ನಿನ್ನೆ(ಭಾನುವಾರ) ರಾತ್ರಿಯಷ್ಟೇ ಬಿಡುಗಡೆಯಾದ ಸ್ಯಾಂಡಲ್‍ವುಡ್‍ನ ಬಹುತಾರಾಗಣದ ಹಾಗೂ ಬಹುನಿರೀಕ್ಷಿತ ‘ಕುರುಕ್ಷೇತ್ರ’ ಚಿತ್ರದ ಟ್ರೇಲರ್ ಕುರಿತು ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್ ಮೂಲಕ ಅಸಮಾಧಾನ ಹೊರಹಾಕಿರುವ ಅಭಿಮಾನಿಗಳು, ಈ ಹಿಂದಿನ ಟೀಸರ್ಗಳನ್ನೇ ಜೋಡಿಸಿ ನಿರ್ಮಾಪಕ ಮುನಿರತ್ನ ಅವರು ಟ್ರೈಲರ್ ಮಾಡಿದ್ದಾರೆ ಎಂದು ಕಿಡಿಕಾರಿದ್ದಾರೆ. ದುರ್ಯೋಧನ ಪಾತ್ರದಲ್ಲಿ ನಟಿಸಿರುವ ದರ್ಶನ್ ಹಾಗೂ ಅಭಿಮನ್ಯು ಪಾತ್ರದಲ್ಲಿ ಮಿಂಚಿರುವ ನಿಖಿಲ್ ಕುಮಾರಸ್ವಾಮಿಗೆ ಸಂಬಂಧಿಸಿದಂತೆ ಎರಡು ಪ್ರತ್ಯೇಕ ಟೀಸರ್ಗಳನ್ನು ಈ ಹಿಂದೆ ಬಿಡುಗಡೆ ಮಾಡಲಾಗಿತ್ತು. ಅದರಲ್ಲಿದ್ದ...







