9ನೇ ತರಗತಿ ವಿದ್ಯಾರ್ಥಿಯಿಂದ ರಾಡ್‌ನಿಂದ ಭೀಕರ ಹಲ್ಲೆ – ಓರ್ವ ಬಾಲಕ ಸಾವು, 7 ಮಂದಿಗೆ ಗಾಯ -ಕಹಳೆ ನ್ಯೂಸ್
ಬಳ್ಳಾರಿ: 9ನೇ ತರಗತಿ ವಿದ್ಯಾರ್ಥಿಯು ರಾಡ್‌ನಿಂದ ಹಲ್ಲೆ ನಡೆಸಿದ ಪರಿಣಾಮ ಓರ್ವ ಬಾಲಕ ಸಾವನ್ನಪ್ಪಿದ್ದು, 7 ಮಕ್ಕಳಿಗೆ ಗಾಯವಾಗಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ. ಖಾಸಗಿ ಶಾಲೆಯ ಹಾಸ್ಟೆಲ್‌ವೊಂದರಲ್ಲಿ ಈ ಘಟನೆ ನಡೆದಿದೆ. ಕಬ್ಬಿಣದ ರಾಡ್‌ನಿಂದ ಬಲವಾದ ಪೆಟ್ಟು ಬಿದ್ದು ಓರ್ವ ಬಾಲಕ ಸಾವನ್ನಪ್ಪಿದ್ದಾನೆ. ಹಾಸ್ಟೆಲ್ ವಾರ್ಡನ್ ಮೇಲೆಯೂ ಬಾಲಕ ಹಲ್ಲೆ ಮಾಡಿದ್ದಾನೆ. ಹಲ್ಲೆ ಮಾಡಿ ಸ್ಥಳದಿಂದ ಎಸ್ಕೇಪ್ ಆಗಿದ್ದಾನೆ. ಗಾಯಾಳುಗಳನ್ನು ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಮೃತ ಬಾಲಕನ...






