ಮಂಗಳೂರಿನ ಕದ್ರಿಯಲ್ಲಿ ಚಿರತೆ ಪ್ರತ್ಯಕ್ಷ: ಸಿಸಿಟಿವಿಯಲ್ಲಿ ಸ್ಪಷ್ಟ ಚಹರೆ ಪತ್ತೆ- ಕಹಳೆ ನ್ಯೂಸ್
ಮಂಗಳೂರು : ನಗರದ ಕದ್ರಿ ದೇವಸ್ಥಾನ ಬಳಿಯ ಡಾಕ್ಟರ್ಸ್ ಕಾಲನಿಯಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು ಸ್ಥಳೀಯರನ್ನು ಆತಂಕಕ್ಕೀಡು ಮಾಡಿದೆ. ಫೆ.23ರ ಸೋಮವಾರ ಮಧ್ಯರಾತ್ರಿ ಒಂದು ಗಂಟೆ ಸುಮಾರಿಗೆ ಚಿರತೆ ಬಂದಿದ್ದು ಸಿಸಿಟಿವಿಯಲ್ಲಿ ಸ್ಪಷ್ಟವಾಗಿ ಸೆರೆಯಾಗಿದೆ. ಡಾಕ್ಟರ್ಸ್ ಕಾಲನಿ ಗೇಟ್ ಮುಂಭಾಗದಲ್ಲಿ ಚಿರತೆ ಅಡ್ಡಾಡುವುದು ಅಲ್ಲಿರುವ ಎರಡು ಸಿಸಿಟಿವಿಗಳಲ್ಲಿ ದಾಖಲಾಗಿದೆ. ಕದ್ರಿ ದೇವಸ್ಥಾನ ಮೇಲ್ಬಾಗದಲ್ಲಿ ಸ್ವಲ್ಪ ಕಾಡು ಹೊಂದಿದ್ದು ಬಿಟ್ಟರೆ ಉಳಿದೆಲ್ಲ ಕಡೆ ಕಾಂಕ್ರೀಟ್ ಕಾಡು ಮಾತ್ರ ಇದೆ. ಇದಲ್ಲದೆ ದೊಡ್ಡ ಅಪಾರ್ಟೆಂಟ್...







