ಬೆಂಗಳೂರು ಸುತ್ತಲಿನ ಪ್ರದೇಶಗಳಲ್ಲಿ ಬೆಳೆಯೋ ತರಕಾರಿಯಲ್ಲಿ ವಿಷಕಾರಿ ಅಂಶ ಪತ್ತೆ- ಕಹಳೆ ನ್ಯೂಸ್
ಬೆಂಗಳೂರು: ಸಿಲಿಕಾನ್ ಸಿಟಿ ಸುತ್ತಲಿನ ಪ್ರದೇಶಗಳಲ್ಲಿ ಬೆಳೆಯೋ ತರಕಾರಿಯಲ್ಲಿ ವಿಷಕಾರಿ ಅಂಶ ಪತ್ತೆಯಾಗಿದ್ದು, ಸೇಫ್ ಇಲ್ಲ ಎಂದು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ದೃಢಪಟ್ಟಿದೆ. ಬೆಂಗಳೂರಿನಲ್ಲಿ ಮಾರಾಟವಾಗುವ ತರಕಾರಿಗಳಲ್ಲಿ ಸೀಸದ(ಲೆಡ್) ಪ್ರಮಾಣ ಹೆಚ್ಚಿದೆ ಎಂದು ತಿಳಿಸಿದ್ದು, ಈ ತರಕಾರಿ ತಿಂದ್ರೆ ಕಿಡ್ನಿ, ಮೆದುಳಿಗೆ ಸಮಸ್ಯೆಯಾಗುತ್ತದೆ. ಸಂಗ್ರಹಿಸಿದ 72 ಮಾದರಿಗಳ ಪೈಕಿ 10 ಮಾದರಿಗಳಲ್ಲಿ 8 ಕೀಟನಾಶಕ ಅವಶೇಷಗಳು ಪತ್ತೆಯಾಗಿದೆ. ನಗರದ ವಿವಿಧ ಮಾರುಕಟ್ಟೆಗಳಲ್ಲಿ ಕಂಡುಬರುವ ತರಕಾರಿಗಳಲ್ಲಿ ಸೀಸದ ಪ್ರಮಾಣ ಮಿತಿಗಿಂತ ಹೆಚ್ಚು...







