Friday, June 19, 2026

ಸುದ್ದಿ

ಸುದ್ದಿ

ಪುಲ್ವಾಮಾ ದಾಳಿಗೆ 7 ವರ್ಷ : ಹುತಾತ್ಮ ಯೋಧರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಿ ಮೋದಿ, ರಾಹುಲ್ ಗಾಂಧಿ- ಕಹಳೆ ನ್ಯೂಸ್

ನವದೆಹಲಿ: ಪುಲ್ವಾಮಾ ದಾಳಿ ನಡೆದು 7 ವರ್ಷದ ಹಿನ್ನೆಲೆ ಘಟನೆಯಲ್ಲಿ ಮೃತಪಟ್ಟ ಯೋಧರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಿ ನರೇಂದ್ರ ಮೋದಿ , ಹುತಾತ್ಮ ಯೋಧರನ್ನು ವೀರ ಸೇನಾನಿಗಳು ಎಂದು ಶ್ಲಾಘಿಸಿದ್ದಾರೆ. 2019ರ ಈ ದಿನ ಪುಲ್ವಾಮಾ ದಾಳಿಯಲ್ಲಿ ತಮ್ಮ ಪ್ರಾಣ ತ್ಯಾಗ ಮಾಡಿದ ವೀರ ಸೇನಾನಿಗಳನ್ನು ಸ್ಮರಿಸುತ್ತಿದ್ದೇವೆ. ಅವರ ದೇಶಭಕ್ತಿ ಮತ್ತು ಸೇವೆ ಸದಾ ನಮ್ಮ ಮನಸ್ಸಿನಲ್ಲಿ ಉಳಿಯುತ್ತದೆ. ಅವರ ಧೈರ್ಯವು ಪ್ರತಿಯೊಬ್ಬ ಭಾರತೀಯನಿಗೂ ಪ್ರೇರಣೆ ನೀಡುತ್ತದೆ ಎಂದು...
ಸುದ್ದಿ

ಪಶ್ಚಿಮ ಘಟ್ಟದಲ್ಲಿ ಹೊಸ ಪ್ರಭೇದ ಸಿಹಿನೀರಿನ ಏಡಿ ಪತ್ತೆ- ಕಹಳೆ ನ್ಯೂಸ್

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಪಶ್ಚಿಮ ಘಟ್ಟ ಭಾಗದಲ್ಲಿ ಅನೇಕ ಜೀವಸಂಕುಲಗಳು ಆಶ್ರಯ ಪಡೆದಿವೆ. ಹೊಸ ಪ್ರಭೇದ ಸಿಹಿನೀರಿನ ಏಡಿ ಪತ್ತೆಯಾಗಿದೆ. ಕಾರವಾರದ ದೇವಳಮಕ್ಕಿಯಲ್ಲಿ “ಘಾಟಿಯಾನದೃತಿಆರ್ಮ್ಸ್” ಎಂಬ ಅವರೂಪದ ಏಡಿಯನ್ನು ಕಾರವಾರ ವಿಭಾಗದ ಕಾರವಾರ ವಲಯದ ಗಸ್ತು ವನಪಾಲಕರಾದ ಗೋಪಾಲನಾಯ್ಕ ಹಾಗೂ ಸುನೀಲ್ ರಾಮಗೌಡ ಅವರು ಪತ್ತೆ ಹಚ್ಚಿದ್ದಾರೆ. 2023 ರಲ್ಲಿ ಯಲ್ಲಾಪುರ ಭಾಗದಲ್ಲಿ `ಆರಾಧ್ಯ ಪ್ಲಾಸಿಡಾ’ ಎಂಬ ಸಿಹಿನೀರಿನ ವಿಶಿಷ್ಟ ಏಡಿ ಪತ್ತೆಯಾಗಿತ್ತು. ಪಶ್ಚಿಮ ಘಟ್ಟ ವ್ಯಾಪ್ತಿಯ ಬಾರೆ, ಕಳಚೆ,...
ಸುದ್ದಿ

ನಿರ್ಮಾಣ ಹಂತದಲ್ಲಿದ್ದ ಮೆಟ್ರೋ ಪಿಲ್ಲರ್ ಕುಸಿತ : ಓರ್ವ ಸಾವು, ಮೂವರು ಗಂಭೀರ- ಕಹಳೆ ನ್ಯೂಸ್

ಮುಂಬೈ: ಮುಲುಂಡ್ ಪಶ್ಚಿಮ ಪ್ರದೇಶದಲ್ಲಿ ನಿರ್ಮಾಣ ಹಂತದಲ್ಲಿದ್ದ ಮೆಟ್ರೋ ಪಿಲ್ಲರ್‌ನ  ಒಂದು ಭಾಗ ಕುಸಿದು ಬಿದ್ದ ಪರಿಣಾಮ ಓರ್ವ ಸಾವನ್ನಪ್ಪಿದ್ದು, ಮೂವರು ಗಂಭೀರ ಗಾಯಗೊಂಡಿದ್ದಾರೆ. ಶನಿವಾರ ಮಧ್ಯಾಹ್ನ ಮುಲುಂಡ್ ಪ್ರದೇಶದ ಜಾನ್ಸನ್ & ಜಾನ್ಸನ್ ಕಂಪನಿಯ ಬಳಿ ಘಟನೆ ನಡೆದಿದೆ. ಎಲ್‌ಬಿಎಸ್ ರಸ್ತೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಮೆಟ್ರೋ ಕಂಬದ ಸಿಮೆಂಟ್ ಭಾಗವು ಏಕಾಏಕಿ ಕುಸಿದು ಕೆಳಗೆ ಹಾದುಹೋಗುತ್ತಿದ್ದ ಆಟೋರೀಕ್ಷಾ  ಹಾಗೂ ಕಾರಿನ ಮೇಲೆ ಬಿದ್ದಿದೆ. ಸಿಮೆಂಟ್ ವಾಲ್ ಬಿದ್ದ ರಭಸಕ್ಕೆ...
ಜಿಲ್ಲೆಮುಂಬೈರಾಜ್ಯಸುದ್ದಿ

ನಿರ್ಮಾಣ ಹಂತದಲ್ಲಿದ್ದ ಮೆಟ್ರೋ ಪಿಲ್ಲರ್‌ ಕುಸಿದು ದುರಂತ :ಆಟೋ, ಕಾರು ಅಪ್ಪಚ್ಚಿ -ಕಹಳೆ ನ್ಯೂಸ್

ಮುಂಬೈ: ಮುಲುಂಡ್‌ ಪಶ್ಚಿಮ ಪ್ರದೇಶದಲ್ಲಿ ನಿರ್ಮಾಣ ಹಂತದಲ್ಲಿದ್ದ ಮೆಟ್ರೋ ಪಿಲ್ಲರ್‌ನ ಒಂದು ಭಾಗ ಕುಸಿದು ಬಿದ್ದ ಘಟನೆ ನಡೆದಿದೆ. ಅದೃಷ್ಟವಶಾತ್‌ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ವರದಿಗಳು ತಿಳಿಸಿವೆ. ಶನಿವಾರ (ಇಂದು) ಮಧ್ಯಾಹ್ನ ಮುಲುಂಡ್‌ ಪ್ರದೇಶದ ಜಾನ್ಸನ್ & ಜಾನ್ಸನ್ ಕಂಪನಿಯ ಬಳಿ ಘಟನೆ ನಡೆದಿದೆ. ಎಲ್‌ಬಿಎಸ್ ರಸ್ತೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಮೆಟ್ರೋ ಕಂಬದ ಸಿಮೆಂಟ್ ಭಾಗವು ಏಕಾಏಕಿ ಕುಸಿದು ಕೆಳಗೆ ಹಾದುಹೋಗುತ್ತಿದ್ದ ಆಟೋರೀಕ್ಷಾ ಹಾಗೂ ಕಾರಿನ ಮೇಲೆ ಬಿದ್ದಿದೆ....
ಸುದ್ದಿ

ಕ್ಯಾಲಿಫೋರ್ನಿಯಾದಲ್ಲಿ ಕರ್ನಾಟಕ ಮೂಲದ ವಿದ್ಯಾರ್ಥಿ ನಾಪತ್ತೆ- ಕಹಳೆ ನ್ಯೂಸ್

ನವದೆಹಲಿ: ಕರ್ನಾಟಕ  ಮೂಲದ ವಿದ್ಯಾರ್ಥಿ ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ನಾಪತ್ತೆಯಾಗಿದ್ದು, ಕಾಣೆಯಾಗಿರುವ ಬಗ್ಗೆ ಸ್ಯಾನ್ ಫ್ರಾನ್ಸಿಸ್ಕೋದಲ್ಲಿನ  ಭಾರತೀಯ ದೂತಾವಾಸ ಕಚೇರಿ  ಆತಂಕ ವ್ಯಕ್ತಪಡಿಸಿದೆ. 22 ವರ್ಷದ ಸಾಕೇತ್ ಶ್ರೀನಿವಾಸಯ್ಯ ಕಾಣೆಯಾಗಿದ್ದು, ಅವರನ್ನು ಪತ್ತೆಹಚ್ಚಲು ಸ್ಥಳೀಯ ಪೊಲೀಸರು ಮತ್ತು ಭಾರತೀಯ ದೂತಾವಾಸ ಕಚೇರಿ ತುರ್ತು ಕ್ರಮ ಕೈಗೊಂಡಿವೆ. ಮಾಸ್ಟರ್ಸ್ ವಿದ್ಯಾರ್ಥಿಯಾಗಿರುವ ಸಾಕೇತ್ ಶ್ರೀನಿವಾಸಯ್ಯ ಅಮೆರಿಕದ ಯೂನಿವರ್ಸಿಟಿ ಆಫ್ ಕ್ಯಾಲಿಫೋರ್ನಿಯಾ, ಬಕ್ಲೇðಯಲ್ಲಿ ಪಿಜಿ ವ್ಯಾಸಂಗ ಮಾಡುತ್ತಿದ್ದಾರೆ. ಫೆ.10ರಂದು ಕ್ಯಾಲಿಫೋರ್ನಿಯಾದ ಬಕ್ಲೇð ನಗರದ ಡ್ವೈಟ್ ವೇ...
ಸುದ್ದಿ

ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದೂ ಉದ್ಯಮಿಯ ಬರ್ಬರ ಹತ್ಯೆ- ಕಹಳೆ ನ್ಯೂಸ್

ಢಾಕಾ: ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದೂ ವ್ಯಕ್ತಿಯ ಹತ್ಯೆಯಾಗಿದೆ. ದೇಶದ ರಾಷ್ಟ್ರೀಯ ಸಂಸತ್ತಿನ ಚುನಾವಣೆಗೆ ಮತದಾನಕ್ಕೆ ಇನ್ನೆರಡು ದಿನ ಬಾಕಿ ಇರುವಾಗಲೇ ಅಪರಿಚಿತ ದಾಳಿಕೋರರು ಹಿಂದೂ ಉದ್ಯಮಿಯೊಬ್ಬರನ್ನು ಕ್ರೂರವಾಗಿ ಹತ್ಯೆ ಮಾಡಿದ್ದಾರೆ. ಬಾಂಗ್ಲಾದೇಶದ ಮೈಮೆನ್ಸಿಂಗ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. 62 ವರ್ಷದ ಸುಶೇನ್ ಚಂದ್ರ ಸರ್ಕಾರ್ ಕೊಲೆಯಾದವರು. ಇವರು ದಕ್ಷಿಣಕಂದ ಗ್ರಾಮದ ನಿವಾಸಿಯಾಗಿದ್ದು, ಅಕ್ಕಿ ವ್ಯಾಪಾರಿಯಾಗಿದ್ದರು. ಉಪ ಜಿಲ್ಲೆಯ ಬೋಗರ್ ಬಜಾರ್‌ ಬಳಿ ‘ಭಾಯ್ ಭಾಯ್ ಎಂಟರ್‌ಪ್ರೈಸ್’ ಅನ್ನು ಹೊಂದಿದ್ದರು....
ಸುದ್ದಿ

ಕರ್ನಾಟಕ ಹವಾಮಾನ ವರದಿ: ಕರಾವಳಿ, ದಕ್ಷಿಣ ಒಳನಾಡು ಸೇರಿದಂತೆ ಹಲವೆಡೆ ಶುಷ್ಕ ವಾತಾವರಣ- ಕಹಳೆ ನ್ಯೂಸ್

ಬೆಂಗಳೂರು : ಕರಾವಳಿ ಮತ್ತು ಉತ್ತರ ಒಳನಾಡು ತೀವ್ರ ಚಳಿಯ ಜೊತೆಗೆ ಒಣಹವೆ  ಇಂದೂ ಮುಂದುವರೆಯಲಿದ್ದು, ದಕ್ಷಿಣ ಒಳನಾಡಿನಲ್ಲಿಯೂ ಶುಷ್ಕ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಹತ್ತಾರು ದಿನಗಳಿಂದ ರಾಜ್ಯದಲ್ಲಿ ಒಣ ಹವೆ ಆವರಿಸಿದೆ. ಬೆಂಗಳೂರಿನಲ್ಲಿ ಚಳಿಯ ಹವಾಮಾನ ತಕ್ಕಮಟ್ಟಿಗೆ ಇಂದು ಸುಧಾರಿಸಿದೆ. ಎಲ್ಲೆಲ್ಲಿ ಒಣಹವೆ? ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ ಎಂದು ಇಲಾಖೆ ತಿಳಿಸಿದೆ. ದಕ್ಷಿಣ...
ಸುದ್ದಿ

ಪಿಲಿಕುಳ ಮೃಗಾಲಯದ ಪ್ರಾಣಿಗಳ ಅಸಹಜ ಸಾವಿಗೆ ಕಾರಣವಾಯ್ತಾ ‘ಸ್ಲೋ ಪಾಯಿಸನ್’!- ಕಹಳೆ ನ್ಯೂಸ್

ಮಂಗಳೂರು : ದಕ್ಷಿಣ ಕನ್ನಡದ ಹೆಸರಾಂತ ಪಿಲಿಕುಳ ಮೃಗಾಲಯದಲ್ಲಿ ಪ್ರಾಣಿಗಳ ಅಸಹಜ ಸಾವುಗಳು ಇದೀಗ ಗಂಭೀರ ಅನುಮಾನಗಳಿಗೆ ಕಾರಣವಾಗಿವೆ. ಕಳೆದ ನಾಲ್ಕು ವರ್ಷಗಳಿಂದ ಸುಮಾರು 150ಕ್ಕೂ ಹೆಚ್ಚು ವನ್ಯಜೀವಿಗಳು ಸಾವನ್ನಪ್ಪಿರುವ ವಿಚಾರ ಬೆಳಕಿಗೆ ಬಂದಿದ್ದು, ಈ ಘಟನೆಗಳಿಗೆ ವಿಷಪೂರಿತ ಆಹಾರವೇ ಕಾರಣವಾಗಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಇತ್ತೀಚೆಗೆ ಸಾವನ್ನಪ್ಪಿದ ಜಿಂಕೆಯೊಂದರ ಮರಣೋತ್ತರ ವರದಿಯಲ್ಲಿ ಪ್ರಾಣಿಯ ದೇಹದಲ್ಲಿ ಹೈಡ್ರೋಸೈನೇಡ್ ಹಾಗೂ ನೈಟ್ರೇಟ್ ಅಂಶಗಳು ಪತ್ತೆಯಾಗಿರುವುದು ಬೆಚ್ಚಿಬೀಳಿಸುವ ಸಂಗತಿಯಾಗಿದೆ. ಮೃಗಾಲಯದ ನಿರ್ಲಕ್ಷ್ಯವೇ ಈ ಸ್ಥಿತಿಗೆ...
1 141 142 143 144 145 3,399
Page 143 of 3399